ಏಕರೂಪ ನಾಗರಿಕ ಸಂಹಿತೆ ಬೇಕು, ಅದಕ್ಕೆ ಎಲ್ಲ ಸಮುದಾಯದವರು ಒಪ್ಪಬೇಕು: ಗುಜರಾತಿನಲ್ಲಿ ಅರವಿಂದ ಕೇಜ್ರಿವಾಲ್
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೇಜ್ರಿವಾಲ್, ಆಡಳಿತ ಪಕ್ಷವು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇದೇ ಭರವಸೆಯನ್ನು ನೀಡಿತ್ತು.
ದೆಹಲಿ: ಏಕರೂಪ ನಾಗರಿಕ ಸಂಹಿತೆಯನ್ನು ಬೇಕು ಆದರೆ ಬಿಜೆಪಿ ಮೋಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿರುವ (Gujarat Assembly Elections) ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (Aam Aadmi Party)ಮುಖ್ಯಸ್ಥ ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೇಜ್ರಿವಾಲ್, ಆಡಳಿತ ಪಕ್ಷವು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇದೇ ಭರವಸೆಯನ್ನು ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ನಂತರ ಅದನ್ನು ಕಾರ್ಯಗತಗೊಳಿಸಲಿಲ್ಲ ಎಂದು ಹೇಳಿದರು. ಅವರು ಉತ್ತರಾಖಂಡ ಚುನಾವಣೆಯಲ್ಲಿ ಗೆದ್ದ ನಂತರ ಸಮಿತಿಯನ್ನು ರಚಿಸಿದರು. ಈಗ ಅದು ಕಣ್ಮರೆಯಾಗಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತ್ ಚುನಾವಣೆಗೆ ಮೂರು ದಿನಗಳ ಮೊದಲು ಅವರು ಸಮಿತಿಯನ್ನು ರಚಿಸಿದ್ದಾರೆ. ಅದು ಚುನಾವಣೆಯ ನಂತರ ಕಣ್ಮರೆಯಾಗುತ್ತದೆ ಎಂದಿದ್ದಾರೆ. ಭಾವನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕು. ಸಂವಿಧಾನದ 44 ನೇ ವಿಧಿಯು ಹಾಗೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಸ್ಪಷ್ಟವಾಗಿ ಹೇಳುತ್ತದೆ. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಒಪ್ಪಿಗೆಯೊಂದಿಗೆ ಅದನ್ನು ಮಾಡಬೇಕು.
ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದನ್ನು ಏಕೆ ಜಾರಿಗೊಳಿಸುವುದಿಲ್ಲ?.ದೇಶದಾದ್ಯಂತ ಇದನ್ನು ಏಕೆ ಜಾರಿಗೊಳಿಸಬಾರದು. ಅವರು ಲೋಕಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆಯೇ? ಎಂದು ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
आम आदमी पार्टी की जनसभाओं में उमड़ता जनसैलाब गुजरात में एक बड़े परिवर्तन का संकेत दे रहा है। आज भावनगर ज़िले के पालीताना में जनसभा है। LIVE https://t.co/0AjomVMGiv
— Arvind Kejriwal (@ArvindKejriwal) October 30, 2022
ಮುಸ್ಲಿಮರಿಗೆ ವಿವಾದಾತ್ಮಕ ವಿಷಯವಾದ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಲು ಯೋಜಿಸುತ್ತಿದೆ, ಅದು ಧರ್ಮ ಆಧಾರಿತ ಕಾನೂನುಗಳನ್ನು ತೆಗೆದುಹಾಕುತ್ತದೆ ಎಂದು ಎಂದು ಬಿಜೆಪಿ ನಿನ್ನೆ ಹೇಳಿತ್ತು ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆಯುವ ಗಿಮಿಕ್ ಎಂದು ಕಾಂಗ್ರೆಸ್ ಇದನ್ನು ಟೀಕಿಸಿದೆ. ಅಂತಹ ಕಾನೂನನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ಪರಿಶೀಲಿಸಲು ಗುಜರಾತ್ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ಪ್ರಸ್ತಾಪಿಸಿದೆ. ನಾಗರಿಕ ಸಂಹಿತೆಯು ರಾಜ್ಯಗಳಿಗಿಂತ ಕೇಂದ್ರದ ಡೊಮೇನ್ ಎಂದು ವ್ಯಾಪಕವಾಗಿ ನಂಬಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಂದು ನಡೆದ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಮಿತಿಯನ್ನು ರಚಿಸಲಾಗಿದೆ” ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಹೇಳಿದ್ದಾರೆ.
ಮೇ ತಿಂಗಳಲ್ಲಿ, ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಯುಸಿಸಿ ಜಾರಿಗೊಳಿಸುವ ನಿರ್ಧಾರವನ್ನು ಪ್ರಕಟಿಸಿತ್ತು. ಅದೇ ತಿಂಗಳು, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೂಡ ಯುಸಿಸಿಯನ್ನು ಶೀಘ್ರದಲ್ಲೇ ರಾಜ್ಯಕ್ಕೆ ತರಲಾಗುವುದು ಎಂದು ಘೋಷಿಸಿದ್ದರು.