AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಚುನಾವಣೆಗೂ ಮುನ್ನ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ, ದೆಹಲಿಯತ್ತ ನಾಯಕರ ದಂಡು

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವು ಸಜ್ಜಾಗುತ್ತಿರುವಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಗುಜರಾತ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೋರ್ ಕಮಿಟಿ ಸದಸ್ಯರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

Amit Shah: ಚುನಾವಣೆಗೂ ಮುನ್ನ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ, ದೆಹಲಿಯತ್ತ ನಾಯಕರ ದಂಡು
Amit Shah
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 08, 2022 | 2:59 PM

Share

ದೆಹಲಿ: ಗುಜರಾತ್​ನಲ್ಲಿ ಚುನಾವಣೆ ರಂಗೇರುತ್ತಿದಂತೆ ಎಲ್ಲ ಪಕ್ಷಗಳು ಚುರುಕಿನಿಂದ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವು ಸಜ್ಜಾಗುತ್ತಿರುವಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಗುಜರಾತ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೋರ್ ಕಮಿಟಿ ಸದಸ್ಯರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸಭೆಯಲ್ಲಿ ಪಾಲ್ಗೊಳ್ಳಲು ಗುಜರಾತ್ ಬಿಜೆಪಿ ಕೋರ್ ಕಮಿಟಿಯ ಎಲ್ಲಾ ನಾಯಕರು ದೆಹಲಿಗೆ ಬಂದಿದ್ದಾರೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ. ಇಂದು ಮುಖ್ಯಮಂತ್ರಿಗಳು ಬಿಜೆಪಿಯ ಪ್ರಮುಖರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಸೋಮವಾರ ತಡರಾತ್ರಿಯವರೆಗೂ ಅಮಿತ್ ಶಾ ನಿವಾಸದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಹಾಗೂ ಗುಜರಾತ್ ಮುಖ್ಯಮಂತ್ರಿ ಜತೆ ಮಹತ್ವದ ಸಭೆ ನಡೆದಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಯತ್ನದಲ್ಲಿ ಬಿಜೆಪಿ ಬುಧವಾರ ಸಂಜೆ ತನ್ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಸಲಿದೆ.

ಈ ಸಭೆಯು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ಮತ್ತು ಸಿಇಸಿ ಮತ್ತು ರಾಜ್ಯ ಘಟಕದ ಇತರ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.

ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಈ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ನಾಯಕರು ಉಪಸ್ಥಿತರಿರುವ ಕಾರಣ, ಮುಂಬರುವ ಚುನಾವಣೆಯ ಪ್ರಚಾರವನ್ನು ಯೋಜಿಸುವ ಬಗ್ಗೆ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಸೂಚನೆಯೊಂದಿಗೆ ಉನ್ನತ ಅಧಿಕಾರಿಗಳೊಂದಿಗೆ ಪ್ರತ್ಯೇಕ ಚರ್ಚೆ ನಡೆಯುವ ಸಾಧ್ಯತೆಯಿದೆ.

ಗುಜರಾತ್ ಬಿಜೆಪಿಯ ಭದ್ರಕೋಟೆಯಾಗಿದೆ. ಬಿಜೆಪಿ ಆರನೇ ಬಾರಿಗೆ ಅಧಿಕಾರ ಹಿಡಿಯಲು ಮುಂದಾಗಿದೆ. ನರೇಂದ್ರ ಮೋದಿ ಪ್ರಧಾನಿಯಾಗುವ ಮೊದಲು 2001 ರಿಂದ 2014 ರವರೆಗೆ ಗುಜರಾತ್‌ನ ದೀರ್ಘಾವಧಿಯ ಮುಖ್ಯಮಂತ್ರಿಯಾಗಿದ್ದರು.

ನವೆಂಬರ್ 3 ರಂದು ಭಾರತದ ಚುನಾವಣಾ ಆಯೋಗವು ಗುಜರಾತ್ ಚುನಾವಣಾ ದಿನಾಂಕಗಳನ್ನು ಘೋಷಿಸಿತು. ಎರಡು ಹಂತಗಳಲ್ಲಿ ಕ್ರಮವಾಗಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ದಿನಾಂಕಗಳಲ್ಲಿ ಮತದಾನ ನಡೆಯಲಿದೆ.

ಗಾಂಧಿನಗರದಲ್ಲಿರುವ ರಾಜ್ಯ ಪ್ರಧಾನ ಕಛೇರಿಯಲ್ಲಿ ಮೂರು ದಿನಗಳ ಕಾಲ ಸಭೆಯ ಆರಂಭಿಕ ಸುತ್ತಿನ ಸಭೆ ನಡೆದಿದೆ, ಇದರಲ್ಲಿ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ, ಅದನ್ನು ಸಿಇಸಿಗೆ ಪರಿಗಣನೆಗೆ ಮತ್ತು ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್