Gujarat Poll 2022: ನದಿಗೆ ಹಾರಿ ಜನರ ಜೀವ ಉಳಿಸಿದ ಮಾಜಿ ಶಾಸಕನಿಗೆ ಟಿಕೆಟ್ ನೀಡಿದ ಬಿಜೆಪಿ
ಗುಜರಾತ್‌ನ ಮೋರ್ಬಿ ಸೇತುವೆ ದುರಂತದಲ್ಲಿ ಜನರ ಜೀವ ಉಳಿಸಲು ನದಿಗೆ ಹಾರಿದ ಮಾಜಿ ಶಾಸಕನನ್ನು ಬಿಜೆಪಿ ಚುನಾವಣಾ ಕಣಕ್ಕಿಳಿಸಿದೆ. ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
ಮೋರ್ಬಿ: ಗುಜರಾತ್‌ನ ಮೋರ್ಬಿ ಸೇತುವೆ ದುರಂತದಲ್ಲಿ ಜನರ ಜೀವ ಉಳಿಸಲು ನದಿಗೆ ಹಾರಿದ ಮಾಜಿ ಶಾಸಕನನ್ನು ಬಿಜೆಪಿ ಚುನಾವಣಾ ಕಣಕ್ಕಿಳಿಸಿದೆ. ಗುಜರಾತ್ ಮೋರ್ಬಿ ಸೇತುವೆ ದುರಂತದಲ್ಲಿ ಸಿಲುಕಿಕೊಂಡಿದ್ದ ಜನರ ಜೀವ ಉಳಿಸಲು ತನ್ನ ಜೀವವನ್ನು ಪಣಕ್ಕಿಟ್ಟು ನದಿಗೆ ಹಾರಿದ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯಾ ಅವರಿಗೆ ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದೆ.
ಅಕ್ಟೋಬರ್ 30 ರಂದು ಸೇತುವೆಯ ಕೇಬಲ್‌ಗಳು ಮುರಿದ ಬಿದ್ದು ಅನೇಕ ಜನರು ನದಿಯಲ್ಲಿ ಸಿಲುಕಿಕೊಂಡಿದ್ದರು, ಇದನ್ನು ಗಮನಿಸಿದ 60 ವಯಸ್ಸಿನ ಮಾಜಿ ಶಾಸಕರಾಗಿದ್ದ ಕಾಂತಿಲಾಲ್ ಅಮೃತಿಯಾ ಅವರು ಲೈಫ್ ಟ್ಯೂಬ್ ಧರಿಸಿ ನದಿಗೆ ಹಾರಿ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು.
ನದಿಗೆ ಹಾರಿ ಜನರ ಪ್ರಾಣ ಉಳಿಸಲು ಪ್ರಯತ್ನಿಸಿದ ಅವರ ಕಾರ್ಯಕ್ಕೆ ಪಕ್ಷ ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಮೊರ್ಬಿ ಕ್ಷೇತ್ರದಿಂದ ಸ್ಪರ್ಧಿಸಲು ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಅಮೃತಯ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಇರಲಿಲ್ಲ. ಅವರ ಈ ಕಾರ್ಯವನ್ನು ನೋಡಿ ಮತ್ತು ಕಾರ್ಯಕರ್ತರ ಆಸೆಯಂತೆ ಅವರ ಹೆಸರನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೀಗ ಮೊರ್ಬಿಯ ಹಾಲಿ ಶಾಸಕ ಬ್ರಿಜೇಶ್ ಮೆರ್ಜಾ ಅವರನ್ನು ಕೈಬಿಡಲಾಗಿದೆ ಎಂದು ಹೇಳಲಾಗಿದೆ. ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.