AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಭರವಸೆ ನೀಡಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ
ಕಾಂಗ್ರೆಸ್ ಪಕ್ಷ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 12, 2022 | 4:18 PM

Share

ಅಹಮದಾಬಾದ್‌: ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly elections) ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪ್ರಚಾರ ಚುರುಕುಗೊಳಿಸಿದೆ. ಇದೀಗ ಕಾಂಗ್ರೆಸ್ ಪ್ರಣಾಳಿಕೆ(Congress Manifesto) ಬಿಡುಗಡೆ ಮಾಡಿದೆ. ಗುಜರಾತ್​ ಕಾಂಗ್ರೆಸ್​ ಉಸ್ತುವಾರಿ ಹೊತ್ತುಕೊಂಡಿರುವ ಅಶೋಕ್​ ಗೆಹ್ಲೋಟ್​ ಇಂದು(ನವೆಂಬರ್ 12) ಪ್ರಣಾಳಿಕೆಯನ್ನು ರಿಲೀಸ್ ಮಾಡಿದ್ದು, ಹಲವು ಯೋಜನೆಗಳ ಭರವಸೆಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ.

ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಗುಜರಾತ್ ಚುನಾವಣಾ ಪ್ರಣಾಳಿಕೆ ಇಂತಿದೆ.

* ಗುಜರಾತ್​ನ 10 ಲಕ್ಷ ಯುವಕರಿಗೆ ಉದ್ಯೋಗದ ಭರವಸೆ

* 300 ಯೂನಿಟ್ ಉಚಿತ​ ವಿದ್ಯುತ್

* ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಭತ್ಯೆ ನೀಡುವ ಭರವಸೆ

* ಗುಜರಾತ್​​ ರೈತರ 3 ಲಕ್ಷ ರೂ.ವರೆಗಿನ ಸಾಲಮನ್ನಾ

* ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ

* ಗುಜರಾತ್​ನಲ್ಲಿ ಆಂಗ್ಲ ಮಾಧ್ಯಮ ಶಾಲೆಗಳ ಓಪನ್

* 10 ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ

* ಅಂಗವಿಕಲ, ವಿಧವೆ, ನಿರ್ಗತಿಕ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂ.

* ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್

* ರೈತರಿಗೆ 10 ಗಂಟೆ ವಿದ್ಯುತ್ ಸರಬರಾಜು

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Sat, 12 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?