ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly elections) ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪ್ರಚಾರ ಚುರುಕುಗೊಳಿಸಿದೆ. ಇದೀಗ ಕಾಂಗ್ರೆಸ್ ಪ್ರಣಾಳಿಕೆ(Congress Manifesto) ಬಿಡುಗಡೆ ಮಾಡಿದೆ. ಗುಜರಾತ್ ಕಾಂಗ್ರೆಸ್ ಉಸ್ತುವಾರಿ ಹೊತ್ತುಕೊಂಡಿರುವ ಅಶೋಕ್ ಗೆಹ್ಲೋಟ್ ಇಂದು(ನವೆಂಬರ್ 12) ಪ್ರಣಾಳಿಕೆಯನ್ನು ರಿಲೀಸ್ ಮಾಡಿದ್ದು, ಹಲವು ಯೋಜನೆಗಳ ಭರವಸೆಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ.
ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಗುಜರಾತ್ ಚುನಾವಣಾ ಪ್ರಣಾಳಿಕೆ ಇಂತಿದೆ.
* ಗುಜರಾತ್ನ 10 ಲಕ್ಷ ಯುವಕರಿಗೆ ಉದ್ಯೋಗದ ಭರವಸೆ
* 300 ಯೂನಿಟ್ ಉಚಿತ ವಿದ್ಯುತ್
* ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಭತ್ಯೆ ನೀಡುವ ಭರವಸೆ
* ಗುಜರಾತ್ ರೈತರ 3 ಲಕ್ಷ ರೂ.ವರೆಗಿನ ಸಾಲಮನ್ನಾ
* ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ
* ಗುಜರಾತ್‌ನಲ್ಲಿ ಆಂಗ್ಲ ಮಾಧ್ಯಮ ಶಾಲೆಗಳ ಓಪನ್
* 10 ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ
* ಅಂಗವಿಕಲ, ವಿಧವೆ, ನಿರ್ಗತಿಕ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂ.
* ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್
* ರೈತರಿಗೆ 10 ಗಂಟೆ ವಿದ್ಯುತ್ ಸರಬರಾಜು
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Congress releases manifesto for Gujarat assembly polls, vows to implement OPS
Read @ANI Story | https://t.co/iuGF3FUjyS#Gujaratelection #GujaratElection2022 #congressmanifeso #OPS pic.twitter.com/iKYmnQfxsy
— ANI Digital (@ani_digital) November 12, 2022
Published On - 4:11 pm, Sat, 12 November 22