AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಚುನಾವಣಾ ದಿನಾಂಕ ಘೋಷಣೆ ಮಾಡಿಲ್ಲ, ಈ ಬಗ್ಗೆ ಚುನಾವಣಾ ಆಯೋಗ ಹೇಳಿದ್ದೇನು?

ಗುಜರಾತ್ ಚುನಾವಣಾ ದಿನಾಂಕ ಘೋಷಣೆ ಮಾಡಿಲ್ಲ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದಿದ್ದಾರೆ.

ಗುಜರಾತ್ ಚುನಾವಣಾ ದಿನಾಂಕ ಘೋಷಣೆ ಮಾಡಿಲ್ಲ, ಈ ಬಗ್ಗೆ ಚುನಾವಣಾ ಆಯೋಗ ಹೇಳಿದ್ದೇನು?
ರಾಜೀವ್ ಕುಮಾರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 14, 2022 | 5:58 PM

Share

ದೆಹಲಿ: ಚುನಾವಣಾ ಆಯೋಗವು (Election Commission) ಇಂದು ಕೇವಲ ಹಿಮಾಚಲ ಪ್ರದೇಶದ (Himachal Pradesh) ಚುನಾವಣೆಯ ದಿನಾಂಕ ಘೋಷಿಸಿದ್ದು ಗುಜರಾತ್​​ನದ್ದು (Gujarat Election) ಘೋಷಿಸಿಲ್ಲ. ಸಾಮಾನ್ಯನಾಗಿ ಈ ಎರಡು ರಾಜ್ಯಗಳಲ್ಲಿ ಒಟ್ಟೊಟ್ಟಿಗೆ ಚುನಾವಣೆ ನಡೆಯುತ್ತದೆ. ಆದರೆ ಈ ಬಾರಿ ಹಾಗೆ ಆಗಿಲ್ಲ. ಗುಜರಾತ್ ಚುನಾವಣೆ ದಿನಾಂಕ ಇಂದು ಘೋಷಿಸದಿರುವುದು ಆಶ್ಚರ್ಯದ ಸಂಗತಿ. ಈ ಎರಡೂ ವಿಧಾನಸಭೆಗಳ ಅವಧಿ ಆರು ತಿಂಗಳ ವ್ಯಾಪ್ತಿಯಲ್ಲಿ ಕೊನೆಗೊಳ್ಳುತ್ತದೆ. ಅಂತಹ ಸಂದರ್ಭಗಳಲ್ಲಿ, ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಒಟ್ಟಿಗೆ ಘೋಷಿಸಲಾಗುತ್ತದೆ ಮತ್ತು ಫಲಿತಾಂಶಗಳನ್ನು ಒಂದೇ ದಿನ ಪ್ರಕಟಿಸಲಾಗುತ್ತದೆ. ಗುಜರಾತ್ ಚುನಾವಣಾ ದಿನಾಂಕ ಘೋಷಣೆ ಮಾಡಿಲ್ಲ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದಿದ್ದಾರೆ. ಎರಡು ರಾಜ್ಯಗಳ ಸರ್ಕಾರದ ಕೊನೆಗೊಳ್ಳುವ ಕಾಲಾವಧಿ ನಡುವೆ 40 ದಿನಗಳ ಅಂತರವಿದೆ. ನಿಯಮಗಳ ಪ್ರಕಾರ, ಒಂದು ಫಲಿತಾಂಶವು ಇನ್ನೊಂದರ ಮೇಲೆ ಪರಿಣಾಮ ಬೀರದಂತೆ ಕನಿಷ್ಠ 30 ದಿನಗಳು ಇರಬೇಕು ಎಂದು  ಹೇಳಿದ್ದಾರೆ.

ಗುಜರಾತ್ ವಿಧಾನಸಭೆಯ ಅವಧಿ ಫೆಬ್ರವರಿಯಲ್ಲಿ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿಯಲ್ಲಿ ಕೊನೆಗೊಳ್ಳುತ್ತದೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಹವಾಮಾನದಂತಹ ಹಲವಾರು ಅಂಶಗಳಿವೆ. ಹಿಮ ಪ್ರಾರಂಭವಾಗುವ ಮೊದಲು ಹಿಮಾಚಲ ಚುನಾವಣೆಗಳನ್ನು ನಡೆಸಲು ನಾವು ಬಯಸುತ್ತೇವೆ. ಆಯೋಗವು “ವಿವಿಧ ಮಧ್ಯಸ್ಥಗಾರರೊಂದಿಗೆ” ಸಮಾಲೋಚನೆ ನಡೆಸಿದೆ ಎಂದು ಅವರು ಹೇಳಿದ್ದಾರೆ.

ಮಾದರಿ ನೀತಿ ಸಂಹಿತೆಯು ಹಿಮಾಚಲ ಪ್ರದೇಶಕ್ಕೆ ಕೆಲವು ದಿನಗಳ ಕಾಲ ಅನ್ವಯಿಸುತ್ತದೆ. ಅಂದರೆ 70 ರ ಬದಲಾಗಿ 57 ದಿನಗಳು ಇದು ಇರುತ್ತದೆ ಎಂದಿದ್ದಾರೆ ಚುನಾವಣಾ ಮುಖ್ಯಸ್ಥರು.

ಹಿಮಾಚಲ ಪ್ರದೇಶದಲ್ಲಿ ಮತದಾನ ಮತ್ತು ಫಲಿತಾಂಶಗಳ ನಡುವಿನ ಅಸಾಧಾರಣವಾದ ದೀರ್ಘ ಅಂತರವನ್ನು ಗಮನದಲ್ಲಿಟ್ಟುಕೊಂಡು ಅನೇಕರು ಚುನಾವಣಾ ಆಯೋಗದ ಸಮರ್ಥನೆಯನ್ನು ಪ್ರಶ್ನಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಸುಮಾರು ಒಂದು ತಿಂಗಳ ನಂತರ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

2017 ರಲ್ಲಿ ಎರಡು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಚುನಾವಣೆಗಳನ್ನು ಘೋಷಿಸಲಾಯಿತು, ಆದರೆ ಡಿಸೆಂಬರ್‌ನಲ್ಲಿ ಒಂದೇ ದಿನದಲ್ಲಿ ಫಲಿತಾಂಶಗಳನ್ನು ಘೋಷಿಸಲಾಯಿತು. ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ, ಬಿಜೆಪಿ ಪಕ್ಷಕ್ಕೆ  ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಈ ಬಾರಿ ಸವಾಲಾಗಿದೆ. ಈ ವರ್ಷದ ಆರಂಭದಲ್ಲಿ ಪಂಜಾಬ್‌ನಲ್ಲಿ ಭರ್ಜರಿ ಗೆಲುವಿನ ನಂತರ ಆಪ್ ಗುಜರಾತಿನಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದೆ.

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?