Gujarat Election 2022: ಗುಜರಾತ್​ನ 14 ಜಿಲ್ಲೆಗಳಲ್ಲಿ ಇಂದು ಚುನಾವಣೆ; ಪ್ರಧಾನಿ ಮೋದಿ, ಅಮಿತ್ ಶಾ ಮತದಾನ

ಇಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಗುಜರಾತ್​​ನಲ್ಲಿ ನಡೆಯುವ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ.

Gujarat Election 2022: ಗುಜರಾತ್​ನ 14 ಜಿಲ್ಲೆಗಳಲ್ಲಿ ಇಂದು ಚುನಾವಣೆ; ಪ್ರಧಾನಿ ಮೋದಿ, ಅಮಿತ್ ಶಾ ಮತದಾನ
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 05, 2022 | 8:11 AM

ಅಹಮದಾಬಾದ್: ಗುಜರಾತ್‌ನ (Gujarat Elections) 14 ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಶೀಘ್ರದಲ್ಲೇ ಆರಂಭವಾಗಲಿದೆ. ಚುನಾವಣೆ ನಡೆಯಲಿರುವ 93 ವಿಧಾನಸಭಾ ಕ್ಷೇತ್ರಗಳಲ್ಲಿ ಅಹಮದಾಬಾದ್, ವಡೋದರಾ, ಗಾಂಧಿನಗರ ಮುಖ್ಯವಾದವುಗಳಾಗಿವೆ. 2ನೇ ಹಂತದ ಮತದಾನದಲ್ಲಿ ಬಿಜೆಪಿ (BJP), ಆಮ್ ಆದ್ಮಿ ಪಕ್ಷ (AAP) ಮತ್ತು ಕಾಂಗ್ರೆಸ್ (Congress) ಸೇರಿದಂತೆ 61 ರಾಜಕೀಯ ಪಕ್ಷಗಳಿಂದ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಸೇರಿದಂತೆ ಹಲವು ಪ್ರಮುಖ ನಾಯಕರು ತಮ್ಮ ಮತ ಚಲಾಯಿಸಲಿದ್ದಾರೆ.

ಬಿಜೆಪಿ ಮತ್ತು ಆಮ್ ಆದ್ಮಿ ಪಾರ್ಟಿ ಎಲ್ಲಾ 93 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ 90 ಸ್ಥಾನಗಳಲ್ಲಿ ಮತ್ತು ಅದರ ಮೈತ್ರಿ ಪಕ್ಷವಾದ ಎನ್‌ಸಿಪಿ 2 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇತರ ಪಕ್ಷಗಳ ಪೈಕಿ, ಭಾರತೀಯ ಬುಡಕಟ್ಟು ಪಕ್ಷ (BTP) 12 ಅಭ್ಯರ್ಥಿಗಳನ್ನು ಮತ್ತು ಬಹುಜನ ಸಮಾಜ ಪಕ್ಷ (BSP) 44 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾಮನಿರ್ದೇಶಿತರಲ್ಲಿ 285 ಸ್ವತಂತ್ರ ಅಭ್ಯರ್ಥಿಗಳೂ ಇದ್ದಾರೆ. 1.29 ಕೋಟಿ ಪುರುಷರು ಮತ್ತು 1.22 ಕೋಟಿ ಮಹಿಳೆಯರು ಸೇರಿದಂತೆ ಒಟ್ಟು 2.51 ಕೋಟಿ ಮತದಾರರು ಇಂದು ನಡೆಯುವ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.

ಚುನಾವಣಾ ಆಯೋಗ 14,975 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇದಕ್ಕಾಗಿ 1.13 ಲಕ್ಷ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 18ರಿಂದ 19 ವರ್ಷದೊಳಗಿನ 5.96 ಲಕ್ಷ ಮತದಾರರಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಇದನ್ನೂ ಓದಿ: Gujarat Election 2022: ಗುಜರಾತ್​ನಲ್ಲಿ ಇಂದು ಮತ್ತು ನಾಳೆ ಪ್ರಧಾನಿ ಮೋದಿಯಿಂದ ಅಬ್ಬರದ ಪ್ರಚಾರ

ಪ್ರಮುಖ ಕ್ಷೇತ್ರಗಳು: ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಘಟ್ಲೋಡಿಯಾ ಕ್ಷೇತ್ರದ ಅಭ್ಯರ್ಥಿ. ಘಟೋಲ್ಡಿಯಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಮೀ ಯಾಗ್ನಿಕ್ ಮತ್ತು ಎಎಪಿ ವಿಜಯ್ ಪಟೇಲ್ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿಯ ಹಾರ್ದಿಕ್ ಪಟೇಲ್ ವಿರಾಮಗಾಂನಿಂದ ಸ್ಪರ್ಧಿಸಲಿದ್ದಾರೆ. ಅಲ್ಪೇಶ್ ಠಾಕೂರ್ ಗಾಂಧಿನಗರ ದಕ್ಷಿಣದಿಂದ ಸ್ಪರ್ಧಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷ ಈ ಕ್ಷೇತ್ರದಿಂದ ದೋಲತ್ ಪಟೇಲ್ ಅವರನ್ನು ಕಣಕ್ಕಿಳಿಸಿದೆ.

ಪ್ರಮುಖ ಮತದಾರರು: ಇಂದು ನಡೆಯುವ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಇಸುದನ್ ಗಧ್ವಿ, ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಇತರ ಪ್ರಮುಖರು ಮತ ಚಲಾಯಿಸಲಿದ್ದಾರೆ. ವಡೋದರಾದ ರಾಜಮನೆತನವರಾದ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಕ್ತಿಸಿಂಗ್ ಗೋಹಿಲ್ ಮತ್ತು ಮಾಜಿ ಮುಖ್ಯಮಂತ್ರಿ ಶಂಕರಸಿನ್ಹ ವಘೇಲಾ ಕೂಡ ಇಂದು ಮತ ಚಲಾಯಿಸಲಿದ್ದಾರೆ.

ಇದನ್ನೂ ಓದಿ: ಚಿತ್ರಗಳು: ಗುಜರಾತ್ 2ನೇ ಹಂತದ ಚುನಾವಣೆ ಮತದಾನಕ್ಕೂ ಮುನ್ನ ಮನೆಗೆ ಬಂದು ತಾಯಿ ಆಶೀರ್ವಾದ ಪಡೆದ ಮೋದಿ

ಭಾನುವಾರ ಸಂಜೆ ತವರು ರಾಜ್ಯ ಗುಜರಾತ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್‌ನಲ್ಲಿ ಎರಡನೇ ಹಂತದ ರಾಜ್ಯ ಚುನಾವಣೆಯ ಸಂದರ್ಭದಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಪ್ರಧಾನಿ ಮೋದಿ ಮತದಾನ ಮಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನಗರದ ನಾರಣಪುರ ಪ್ರದೇಶದಲ್ಲಿರುವ ಪುರಸಭೆ ಉಪ ವಲಯ ಕಚೇರಿಯಲ್ಲಿ ಮತದಾನ ಮಾಡಲಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 am, Mon, 5 December 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್