Assembly Election Results LIVE Streaming: ಇಂದು ಗುಜರಾತ್ ಚುನಾವಣೆ ಫಲಿತಾಂಶ: ಎಲ್ಲಿ, ಯಾವಾಗ ನೇರ ಪ್ರಸಾರ?

Gujarat Vidhan Sabha Elections Result 2022 LIVE Streaming: ಮತ ಎಣಿಕೆ ಡಿಸೆಂಬರ್ 8 ರಂದು ಬೆಳಿಗ್ಗೆ 8.00 ಗಂಟೆಗೆ ಆರಂಭವಾಗಲಿದೆ. ಎಣಿಕೆ ಪ್ರಾರಂಭವಾದ ನಂತರ ಆರಂಭಿಕ ಟ್ರೆಂಡ್ ಗೋಚರಿಸುತ್ತವೆ. ಆದಾಗ್ಯೂ ಸ್ಪಷ್ಟ ಚಿತ್ರಣ ಬೆಳಿಗ್ಗೆ 10ರ ನಂತರ ಸಿಗಲಿದೆ.

Assembly Election Results LIVE Streaming: ಇಂದು ಗುಜರಾತ್ ಚುನಾವಣೆ ಫಲಿತಾಂಶ: ಎಲ್ಲಿ, ಯಾವಾಗ ನೇರ ಪ್ರಸಾರ?
Gujarat Assembly Elections Results 2022 Live Streaming
Follow us
TV9 Web
| Updated By: Digi Tech Desk

Updated on:Dec 08, 2022 | 1:34 AM

ಗುಜರಾತ್ ವಿಧಾನಸಭೆ ಚುನಾವಣೆ 2022ರ (Gujarat Assembly Elections) ಮತಗಳ ಎಣಿಕೆ ಇಂದು ಡಿಸೆಂಬರ್ 8 ರಂದು ನಡೆಯಲಿದೆ. ಒಟ್ಟು 183 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿ(BJP), ಅದರ ಸಾಂಪ್ರದಾಯಿಕ ಸ್ಪರ್ಧಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಕಣದಲ್ಲಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿವೆ. ಇಲ್ಲಿ ಮೂರು ಪಕ್ಷಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಚುನಾವಣೆಯ ಫಲಿತಾಂಶದ ನೇರ ಪ್ರಸಾರ ಎಲ್ಲಿ ಮತ್ತು ಯಾವಾಗ ವೀಕ್ಷಿಸಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

ಮತ ಎಣಿಕೆ ಆರಂಭ ಯಾವಾಗ?

ಮತ ಎಣಿಕೆ ಇಂದು ಡಿಸೆಂಬರ್ 8 ರಂದು ಬೆಳಿಗ್ಗೆ 8.00 ಗಂಟೆಗೆ ಆರಂಭವಾಗಲಿದೆ. ಎಣಿಕೆ ಪ್ರಾರಂಭವಾದ ನಂತರ ಆರಂಭಿಕ ಟ್ರೆಂಡ್ ಗೋಚರಿಸುತ್ತವೆ. ಆದಾಗ್ಯೂ ಸ್ಪಷ್ಟ ಚಿತ್ರಣ ಬೆಳಿಗ್ಗೆ 10ರ ನಂತರ ಸಿಗಲಿದೆ. ರಾಜ್ಯದ 37 ಸ್ಥಳಗಳಲ್ಲಿ ಮತ ಎಣಿಕೆ ನಡೆಯಲಿದೆ. ಅದೇ ದಿನ ಎಲ್ಲಾ 182 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಮುಗಿದ ನಂತರ ಸಂಜೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ
Image
HP Election Results LIVE Streaming: ಇಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ; ನೇರ ಪ್ರಸಾರ ಎಲ್ಲಿ, ಯಾವಾಗ ನೋಡಬಹುದು?
Image
ಹಿಮಾಚಲ ಪ್ರದೇಶ-ಗುಜರಾತ್ ಎಕ್ಸಿಟ್ ಪೋಲ್ ಕರ್ನಾಟಕ ಚುನಾವಣೆ ಮೇಲೂ ಪರಿಣಾಮ ಬೀರುತ್ತೆ: ಸಿಎಂ ಬೊಮ್ಮಾಯಿ ವಿಶ್ವಾಸ
Image
Himachal Pradesh Exit Poll 2022: ಸರ್ವೆಯಲ್ಲಿ ಬಹುತೇಕ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ

ನೇರ ಪ್ರಸಾರ  ಎಲ್ಲಿ ನೋಡಬಹುದು?

ಮತಗಳ ಎಣಿಕೆ ಮತ್ತು ಫಲಿತಾಂಶಗಳನ್ನು ನೋಡಲು ನೀವು ಟಿವಿ9, ಎಬಿಪಿ ನ್ಯೂಸ್, ಟೈಮ್ಸ್ ನೌ, ಝೀ ನ್ಯೂಸ್, ಇಂಡಿಯಾ ಟುಡೆ ಮತ್ತು ಆಜ್ ತಕ್ ನಂತಹ ಬಹು ಸುದ್ದಿ ವಾಹಿನಿಗಳಿಗೆ ಟ್ಯೂನ್ ಮಾಡಬಹುದು. ಟಿವಿ9 ಕನ್ನಡ ಡಾಟ್ ಕಾಂ ಸೇರಿದಂತೆ ಅನೇಕ ಸುದ್ದಿ ವೆಬ್‌ಸೈಟ್‌ಗಳು ಫಲಿತಾಂಶದ ಕ್ಷಣಕ್ಷಣದ ಸುದ್ದಿಗಳನ್ನು ಪ್ರಕಟಿಸುತ್ತವೆ.

ಡಿಸೆಂಬರ್ 1 ರಂದು89 ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು 93 ಸ್ಥಾನಗಳಿಗೆ ನಡೆದಿತ್ತು. ರಾಜ್ಯದಲ್ಲಿ ಆಡಳಿತಾರೂಢ ಸರ್ಕಾರ ರಚಿಸಲು ಕನಿಷ್ಠ 92 ಸ್ಥಾನಗಳನ್ನು ಪಡೆಯುವ ರಾಜಕೀಯ ಪಕ್ಷ ಅಧಿಕಾರಕ್ಕೇರಲಿದೆ.

ಗುಜರಾತ್‌ನಲ್ಲಿ ಹಿಂದಿನ ಚುನಾವಣಾ ಫಲಿತಾಂಶಗಳು

2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 99 ಮತ್ತು ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿತ್ತು. ಬಿಟಿಪಿ ಎರಡು ಸ್ಥಾನ, ಎನ್‌ಸಿಪಿ ಒಂದರಲ್ಲಿ ಗೆಲುವು ಸಾಧಿಸಿದರೆ, ಮೂರು ಸ್ಥಾನಗಳು ಪಕ್ಷೇತರ ಅಭ್ಯರ್ಥಿಗಳ ಪಾಲಾಗಿದೆ. ಮ್ಯಾಜಿಕ್ ಸಂಖ್ಯೆ 92 ಅನ್ನು ದಾಟಿದ ಯಾವುದೇ ಪಕ್ಷವನ್ನು ವಿಜೇತ ಎಂದು ಘೋಷಿಸಲಾಗುತ್ತದೆ. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಸ್ಥಾನಗಳಲ್ಲಿ ಗೆದ್ದ 20 ಶಾಸಕರು ಬಿಜೆಪಿಗೆ ಪಕ್ಷಾಂತರ ಆಗಿದ್ದು, ಅವರಲ್ಲಿ ಮೂವರು ಚುನಾವಣೆಗೆ ಮುನ್ನ ರಾಜೀನಾಮೆ ನೀಡಿದರು. ಬಿಜೆಪಿ ಸದನದಲ್ಲಿ 110 ಸದಸ್ಯರನ್ನು ಮತ್ತು ಕಾಂಗ್ರೆಸ್ 60 ಸದಸ್ಯರನ್ನು ಹೊಂದಿತ್ತು.

ಮತ್ತಷ್ಟು ಚುನಾವಣಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Wed, 7 December 22

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್