Gujarat Election 2022: ಅತಿ ಹೆಚ್ಚು ಸಂಖ್ಯೆಯಲ್ಲಿ ಮತ ಚಲಾಯಿಸಲು ಜನತೆಗೆ ಪ್ರಧಾನಿ ಮನವಿ; ಅಹಮದಾಬಾದ್‌ನಲ್ಲಿ ಮೋದಿ ಮತದಾನ
ಪ್ರಧಾನಿ ಮೋದಿ ಈಗಾಗಲೇ ಅಹಮದಾಬಾದ್ನ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದಾರೆ.
ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯ (Gujarat Assembly Election 2022) 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದೆ. ಇದರ ಜೊತೆಗೆ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು ಕೂಡ ನಡೆಯುತ್ತಿವೆ. ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಜನರಿಗೆ ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಅಹಮದಾಬಾದ್ನ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದಾರೆ.
ಮೋದಿ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ ಇಂದು 2ನೇ ಮತ್ತು ಅಂತಿಮ ಹಂತದ ಚುನಾವಣೆ ನಡೆಯುತ್ತಿದೆ. ಮಧ್ಯ ಮತ್ತು ಉತ್ತರ ಗುಜರಾತ್ ಜಿಲ್ಲೆಗಳಲ್ಲಿ ಹರಡಿರುವ 93 ಸ್ಥಾನಗಳಿಗೆ ಇಂದು ಮತದಾನ ಆರಂಭವಾಗಿದೆ. 800ಕ್ಕೂ ಹೆಚ್ಚು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
Ahmedabad, Gujarat | Prime Minister Narendra Modi casts his vote for the second phase of Gujarat Assembly elections at Nishan Public school, Ranip#GujaratElections pic.twitter.com/snnbWEjQ8N
— ANI (@ANI) December 5, 2022
ಗುಜರಾತ್ ಚುನಾವಣೆಯ 2ನೇ ಹಂತದಲ್ಲಿ ಮತ ಚಲಾಯಿಸುತ್ತಿರುವ ಎಲ್ಲರಿಗೂ, ವಿಶೇಷವಾಗಿ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ. ನಾನು ಸುಮಾರು 9 ಗಂಟೆಗೆ ಅಹಮದಾಬಾದ್‌ನಲ್ಲಿ ನನ್ನ ಮತ ಚಲಾಯಿಸಲಿದ್ದೇನೆ ಎಂದು ಪ್ರಧಾನಿ ಮೋದಿ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: Gujarat Election 2022: ಗುಜರಾತ್ನಲ್ಲಿ ಇಂದು ಮತ್ತು ನಾಳೆ ಪ್ರಧಾನಿ ಮೋದಿಯಿಂದ ಅಬ್ಬರದ ಪ್ರಚಾರ
ಗುಜರಾತ್‌ನ 14 ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ನಡೆಯುತ್ತಿದೆ. 2ನೇ ಹಂತದ ಮತದಾನದಲ್ಲಿ ಬಿಜೆಪಿ, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ 61 ರಾಜಕೀಯ ಪಕ್ಷಗಳಿಂದ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಆಮ್ ಆದ್ಮಿ ಪಾರ್ಟಿ ಎಲ್ಲಾ 93 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ 90 ಸ್ಥಾನಗಳಲ್ಲಿ ಮತ್ತು ಅದರ ಮೈತ್ರಿ ಪಕ್ಷವಾದ ಎನ್‌ಸಿಪಿ 2 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇತರ ಪಕ್ಷಗಳ ಪೈಕಿ, ಭಾರತೀಯ ಬುಡಕಟ್ಟು ಪಕ್ಷ (BTP) 12 ಅಭ್ಯರ್ಥಿಗಳನ್ನು ಮತ್ತು ಬಹುಜನ ಸಮಾಜ ಪಕ್ಷ (BSP) 44 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾಮನಿರ್ದೇಶಿತರಲ್ಲಿ 285 ಸ್ವತಂತ್ರ ಅಭ್ಯರ್ಥಿಗಳೂ ಇದ್ದಾರೆ. 1.29 ಕೋಟಿ ಪುರುಷರು ಮತ್ತು 1.22 ಕೋಟಿ ಮಹಿಳೆಯರು ಸೇರಿದಂತೆ ಒಟ್ಟು 2.51 ಕೋಟಿ ಮತದಾರರು ಇಂದು ನಡೆಯುತ್ತಿರುವ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.
Cast my vote in Ahmedabad. Urging all those voting today to turnout in record numbers and vote. pic.twitter.com/m0X16uCtjA
— Narendra Modi (@narendramodi) December 5, 2022
ಇದನ್ನೂ ಓದಿ: Gujarat Election 2022: ಗುಜರಾತ್‌ನ 14 ಜಿಲ್ಲೆಗಳಲ್ಲಿ ಇಂದು ಚುನಾವಣೆ; ಪ್ರಧಾನಿ ಮೋದಿ, ಅಮಿತ್ ಶಾ ಮತದಾನ
ಚುನಾವಣಾ ಆಯೋಗ 14,975 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇದಕ್ಕಾಗಿ 1.13 ಲಕ್ಷ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 18ರಿಂದ 19 ವರ್ಷದೊಳಗಿನ 5.96 ಲಕ್ಷ ಮತದಾರರಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:59 am, Mon, 5 December 22