Breaking News: ಗುಜರಾತ್ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

Gujrat Assembly Elections: ಮಧ್ಯಾಹ್ನ 12 ಗಂಟೆಗೆ ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

Breaking News: ಗುಜರಾತ್ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ
ಚುನಾವಣಾ ಆಯೋಗ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 03, 2022 | 8:02 AM

ದೆಹಲಿ: ದೇಶದ ಗಮನ ಸೆಳೆದಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ (Gujrat Assembly Elections) ಇಂದು (ನ 3, ಗುರುವಾರ) ಕೇಂದ್ರ ಚುನಾವಣಾ ಆಯೋಗವು (Election Commission of India) ದಿನಾಂಕ ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ತವರು ರಾಜ್ಯ ಗುಜರಾತ್​ನಲ್ಲಿ ಜಯಗಳಿಸುವುದು ಬಿಜೆಪಿಗೆ ಆತ್ಮವಿಶ್ವಾಸ ವೃದ್ಧಿಯ ದೃಷ್ಟಿಯಿಂದ ಮಹತ್ವದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಪ್ರಯತ್ನಗಳ ಮೇಲೆಯೂ ಗುಜರಾತ್ ಚುನಾವಣೆಯು ಪ್ರಭಾವ ಬೀರಲಿದೆ.

ಬಿಜೆಪಿ ಈಗಾಗಲೇ ಗುಜರಾತ್​ನಲ್ಲಿ ಚುನಾವಣೆ ಸಿದ್ಧತೆ ಆರಂಭಿಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಜನ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಬಿಜೆಪಿ ಸಮಾವೇಶಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಿರುವುದು ಮೋದಿ ಪ್ರಭಾವ ಪ್ರಕಾಶಿಸುತ್ತಿರುವುದನ್ನು ಸೂಚಿಸಿಸುತ್ತದೆ. ಕಳೆದ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಯಾಸದ ಗೆಲುವು ಸಾಧಿಸಿತ್ತು.

ಮತ್ತೊಂದೆಡೆ ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷವು (ಆಪ್) ಚಟುವಟಿಕೆ ಚುರುಕುಗೊಳಿಸಿದ್ದು, ಪಂಜಾಬ್ ಮಾದರಿಯ ಫಲಿತಾಂಶ ಮರುಕಳಿಸುವ ವಿಶ್ವಾಸದಲ್ಲಿದೆ. ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಹಲವು ಬಾರಿ ಗುಜರಾತ್​ಗೆ ಭೇಟಿ ನೀಡಿದ್ದು ಸಂಘಟನೆ ಚುರುಕುಗೊಳಿಸಲು ಯತ್ನಿಸಿದ್ದಾರೆ. ಗುಜರಾತ್​ನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆಯುವ ನಿರೀಕ್ಷೆಯಿದೆ. ಕಾಂಗ್ರೆಸ್ ಪಕ್ಷದ ಚಟುವಟಿಕೆಗಳು ಹೇಳಿಕೊಳ್ಳುವ ರೀತಿಯಲ್ಲಿ ಕಂಡುಬರುತ್ತಿಲ್ಲ. ಭಾರತ್ ಜೋಡೋ ಯಾತ್ರೆ, ಎಐಸಿಸಿ ಅಧ್ಯಕ್ಷರ ಚುನಾವಣೆ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ಮುಳುಗಿರುವ ಪಕ್ಷದ ನಾಯಕರು ಇನ್ನಷ್ಟೇ ಗುಜರಾತ್​ನತ್ತ ಗಮನ ಹರಿಸಬೇಕಿದೆ.

Published On - 7:51 am, Thu, 3 November 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್