Gujarat Election Results 2022: ಗುಜರಾತ್‌ನಲ್ಲಿ ಭಾರೀ ಗೆಲುವಿನ ಮೂಲಕ 1985ರ ಕಾಂಗ್ರೆಸ್ನ ದಾಖಲೆ ಮುರಿಯಲು ಬಿಜೆಪಿ ಸಿದ್ಧತೆ; ಕಾರ್ಯಕರ್ತರ ಸಂಭ್ರಮಾಚರಣೆ
ಗುಜರಾತ್ 27 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. 182 ಸದಸ್ಯ ಬಲದ ಗುಜರಾತ್ ಅಸೆಂಬ್ಲಿಯಲ್ಲಿ ಬಿಜೆಪಿ 117-151 ಸೀಟುಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ.
ಅಹಮದಾಬಾದ್: ಬಹಳ ಕುತೂಹಲ ಮೂಡಿಸಿದ್ದ ಗುಜರಾತ್ (Gujarat Assembly Elections) ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ (Himachal Pradesh Assembly Election Results) ಮತ ಎಣಿಕೆ ನಡೆಯುತ್ತಿದೆ. ಗುಜರಾತ್‌ನಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತವರು ರಾಜ್ಯ ಗುಜರಾತ್‌ನಲ್ಲಿ 1985ರಲ್ಲಿ ಕಾಂಗ್ರೆಸ್ 149 ಮತಗಳನ್ನು ಪಡೆದಿತ್ತು. ಆ ದಾಖಲೆಯನ್ನು ಹಿಂದಿಕ್ಕಿ ಈ ಬಾರಿ ಬಿಜೆಪಿ ದಾಖಲೆ ನಿರ್ಮಿಸುವ ಸಾಧ್ಯತೆಯಿದೆ.
ಗುಜರಾತ್ 182 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಬಹುಮತ ಸಿಗಬೇಕೆಂದರೆ 92 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ಸದ್ಯದ ಅಂಕಿ-ಅಂಶವನ್ನು ಗಮನಿಸಿದರೆ ಭಾರೀ ಗೆಲುವು ಖಚಿತವಾಗಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಗುಜರಾತ್‌ನಲ್ಲಿ ತನ್ನ ಅತ್ಯುತ್ತಮ ಪ್ರದರ್ಶನದ ಹಾದಿಯಲ್ಲಿದೆ. ಗುಜರಾತ್‌ನಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ: Assembly Elections 2022: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಬಿಜೆಪಿ
ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ದಾಖಲೆಯ 7ನೇ ಬಾರಿಗೆ ಬಿಜೆಪಿ ಕಣ್ಣಿಟ್ಟಿದೆ. ಗುಜರಾತ್‌ನಲ್ಲಿ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆಯನ್ನು ಮಾಡಲು ಆಕ್ರಮಣಕಾರಿ ಪ್ರಚಾರವನ್ನು ಆರಂಭಿಸಿದ ಆಮ್ ಆದ್ಮಿ ಪಕ್ಷ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
BJP heading towards a landslide victory in Gujarat with the party leading on 149 of the 182 seats, as per the official EC trends.#GujaratElectionResult pic.twitter.com/igFiUXvrpX
— ANI (@ANI) December 8, 2022
ಗೋಧ್ರಾ ಹತ್ಯಾಕಾಂಡದ ನಂತರ ನಡೆದ 2002ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅತ್ಯುತ್ತಮ ಸ್ಕೋರ್ 127 ಆಗಿತ್ತು. ಅಂದಿನಿಂದ ಬಿಜೆಪಿ ಅಧೋಗತಿಯಲ್ಲಿ ಸಾಗಿತ್ತು. 2017ರಲ್ಲಿ ಬಿಜೆಪಿ ಮತ್ತೆ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಈ ಬಾರಿ ಗುಜರಾತ್‌ನ ಪ್ರತಿಯೊಂದು ಪ್ರದೇಶದಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಇಲ್ಲಿಯವರೆಗೆ ಬಿಜೆಪಿ ಶೇ. 55, ಕಾಂಗ್ರೆಸ್ ಶೇ. 27 ಮತ್ತು ಎಎಪಿ ಶೇ. 13.3ರಷ್ಟು ಮತಗಳನ್ನು ಪಡೆದಿವೆ.
ಗುಜರಾತ್‌ನಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆಯ ಮತದಾನ ನಡೆದಿದೆ. 182 ಸದಸ್ಯ ಬಲದ ಅಸೆಂಬ್ಲಿಗೆ ಮತ ಎಣಿಕೆ ಮುಗಿದ ಕೂಡಲೇ ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಗುಜರಾತ್ ವಿಧಾನಸಭೆ ಚುನಾವಣೆ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ನಡುವಿನ ಹೋರಾಟವಾಗಿದೆ. ಗುಜರಾತ್ 27 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. 182 ಸದಸ್ಯ ಬಲದ ಗುಜರಾತ್ ಅಸೆಂಬ್ಲಿಯಲ್ಲಿ ಬಿಜೆಪಿ 117-151 ಸೀಟುಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ 127 ಅಸೆಂಬ್ಲಿ ಸ್ಥಾನಗಳನ್ನು ಗೆದ್ದುಕೊಂಡಿದ್ದು ಅತ್ಯುತ್ತಮ ಸಾಧನೆಯಾಗಿದೆ. ಹಿಂದೆ 1985ರಲ್ಲಿ ಕಾಂಗ್ರೆಸ್ 182ರಲ್ಲಿ 149 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 150 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ, ಕಾಂಗ್ರೆಸ್ನ ದಾಖಲೆಯನ್ನು ಬಿಜೆಪಿ ಮುರಿಯುವ ಸಾಧ್ಯತೆ ಹೆಚ್ಚಾಗಿದೆ.