Gujarat New CM: ಗುಜರಾತ್ ಮುಖ್ಯಮಂತ್ರಿಯಾಗಿ ಡಿ. 12ರಂದು 2ನೇ ಬಾರಿಗೆ ಭೂಪೇಂದ್ರ ಪಟೇಲ್ ಪ್ರಮಾಣವಚನ; ಮೋದಿ, ಅಮಿತ್ ಶಾ ಭಾಗಿ
Gujarat Oath Taking Ceremony Schedule: ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಡಿ. 12ರಂದು 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.
ಅಹಮದಾಬಾದ್: ವಿಧಾನಸಭಾ ಚುನಾವಣೆಯಲ್ಲಿ (Gujarat Assembly Election Results) ಭರ್ಜರಿ ಗೆಲುವು ಕಂಡಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಡಿಸೆಂಬರ್ 12ರಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಭಾಗವಹಿಸಲಿದ್ದಾರೆ. ಕಾಂಗ್ರೆಸ್‌ನ ಡಾ. ಅಮೀ ಯಾಗ್ನಿಕ್ ಅವರಿಗಿಂತ 50,000 ಮತಗಳ ಮುನ್ನಡೆ ಸಾಧಿಸಿ, ಭೂಪೇಂದ್ರ ಪಟೇಲ್ ಗೆಲುವು ಕಂಡಿದ್ದಾರೆ.
ಈ ಬಗ್ಗೆ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದು, “ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ವಿಜಯಕ್ಕಾಗಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಅಭಿನಂದಿಸಿದ್ದಾರೆ. ಗುಜರಾತ್ನ ಜನರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದಿದ್ದಾರೆ.
ಘಟ್ಲೋಡಿಯಾ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ಕಾಂಗ್ರೆಸ್‌ನ ಡಾ. ಅಮೀ ಯಾಗ್ನಿಕ್ ಅವರಿಗಿಂತ 50,000 ಮತಗಳ ಮುನ್ನಡೆ ಸಾಧಿಸಿ, ಗೆಲುವು ಕಂಡಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಶುಭಾಶಯ ಕೋರಿದ್ದಾರೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಭೂಪೇಂದ್ರ ಪಟೇಲ್ ಅವರು ಶೇ. 80.86ರಷ್ಟು ಮತಗಳನ್ನು ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಮಿ ಯಾಗ್ನಿಕ್ ಶೇ. 9.81ರಷ್ಟು ಮತಗಳನ್ನು ಪಡೆದು ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಹಾಗೇ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಜಯ್ ಪಟೇಲ್ ಶೇ. 6.73ರಷ್ಟು ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
The results of #GujaratElections are quite clear. People have made up their minds to further continue with the journey of development in Gujarat. We humbly accept the mandate of the people. Every worker of BJP is committed to public service: Gujarat CM Bhupendra Patel pic.twitter.com/aujLVwiQpX
— ANI (@ANI) December 8, 2022
ಇದನ್ನೂ ಓದಿ: Gujarat Election Results 2022: ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ಗೆ 50,000 ಮತಗಳ ಅಂತರದ ಭರ್ಜರಿ ಗೆಲುವು
ಭೂಪೇಂದ್ರ ಪಟೇಲ್ ಅವರು 2017ರಲ್ಲಿ 1.17 ಲಕ್ಷ ಮತಗಳ ಭಾರೀ ಅಂತರದಿಂದ ಈ ಸ್ಥಾನವನ್ನು ಗೆದ್ದಿದ್ದರು. ಈ ಚುನಾವಣೆಯ ನಂತರ ಭೂಪೇಂದ್ರ ಪಟೇಲ್ ಅವರನ್ನೇ ಮತ್ತೆ ಮುಖ್ಯಮಂತ್ರಿಯಾಗಿ ನೇಮಿಸಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ. ಹೀಗಾಗಿ, ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗುವ ಭೂಪೇಂದ್ರ ಪಟೇಲ್ ಅವರ ಹಾದಿ ಸುಗಮವಾದಂತಾಗಿದೆ.
ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:06 pm, Thu, 8 December 22