Gujarat Election Results: ಗುಜರಾತ್​​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಲು ಬಿಜೆಪಿ ಸಜ್ಜು; ಡೋಲು ಬಾರಿಸಿ, ನೃತ್ಯ ಮಾಡಿ ಕಾರ್ಯಕರ್ತರ ಸಂಭ್ರಮಾಚರಣೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಅಂತರದಿಂದ ಮುನ್ನಡೆ ಸಾಧಿಸಿದ್ದು, ಗೆಲುವು ನಿಶ್ಚಿತವಾಗಿದೆ. ಹೀಗಾಗಿ, ಗುಜರಾತ್​ನ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

Gujarat Election Results: ಗುಜರಾತ್​​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಲು ಬಿಜೆಪಿ ಸಜ್ಜು; ಡೋಲು ಬಾರಿಸಿ, ನೃತ್ಯ ಮಾಡಿ ಕಾರ್ಯಕರ್ತರ ಸಂಭ್ರಮಾಚರಣೆ
ಗುಜರಾತ್​ನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
Follow us
| Updated By: ಸುಷ್ಮಾ ಚಕ್ರೆ

Updated on: Dec 08, 2022 | 12:08 PM

ಅಹಮದಾಬಾದ್: ಗುಜರಾತ್​ನಲ್ಲಿ (Gujarat Assembly Elections) ಬಿಜೆಪಿ ಈ ಬಾರಿ ದಿಗ್ವಿಜಯ ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ. ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮೀರಿ ಬಿಜೆಪಿ ಗುಜರಾತ್​ನಲ್ಲಿ (Gujarat Results) ಜಯಭೇರಿ ಬಾರಿಸಲಿದೆ. 182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್​ನಲ್ಲಿ ಬಿಜೆಪಿ (BJP) ಈಗಾಗಲೇ 154 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಬಿಜೆಪಿಯ ಎದುರು ಕಾಂಗ್ರೆಸ್​ಗೆ ಮತ್ತೊಮ್ಮೆ ಮುಖಭಂಗವಾಗುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಗುಜರಾತ್​ನಲ್ಲಿ ಬಿಜೆಪಿ ಕಾರ್ಯಕರ್ತರು ಗರ್ಭಾ ನೃತ್ಯ ಮಾಡಿ, ಡೋಲು ಬಾರಿಸಿ ರಸ್ತೆಗಳಲ್ಲಿ, ಮೈದಾನಗಳಲ್ಲಿ, ಬಿಜೆಪಿ ಕಚೇರಿಗಳ ಬಳಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಇನ್ನೂ ಚುನಾವಣಾ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು ಬಿಜೆಪಿಯ ಧ್ವಜಗಳನ್ನು ಹಿಡಿದು, ಡೋಲು ಬಾರಿಸಿ, ಕುಣಿದು ಕುಪ್ಪಳಿಸುತ್ತಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಅಂತರದಿಂದ ಮುನ್ನಡೆ ಸಾಧಿಸಿದ್ದು, ಗೆಲುವು ನಿಶ್ಚಿತವಾಗಿದೆ. ಹೀಗಾಗಿ, ಗುಜರಾತ್​ನ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಇದನ್ನೂ ಓದಿ: Assembly Election Results 2022 LIVE: ಗುಜರಾತ್​ನಲ್ಲಿ ಬಿಜೆಪಿಗೆ ಭಾರೀ ಅಂತರದ ಗೆಲುವು ಖಚಿತ; ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಮುನ್ನಡೆ

ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಗುಜರಾತ್‌ನಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ ಬಹುಮತವನ್ನು ಮೀರಿ ಬಿಜೆಪಿ 154 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ 19 ಸ್ಥಾನಗಳೊಂದಿಗೆ ಹಿಂದುಳಿದಿದೆ. ಆಡಳಿತ ಪಕ್ಷಕ್ಕಿಂತ ಕಾಂಗ್ರೆಸ್ ಬಹಳ ದೂರದಲ್ಲಿದೆ. ಎಎಪಿ ಕೇವಲ 6 ಸ್ಥಾನಗಳಲ್ಲಿ ಮುಂದಿದೆ. 1995ರಿಂದ ಗುಜರಾತ್ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಯಾವುದೇ ಚುನಾವಣೆಯಲ್ಲಿ ಸೋತಿಲ್ಲ.

ಗುಜರಾತ್​ನಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆಯ ಮತದಾನ ನಡೆದಿದೆ. 182 ಸದಸ್ಯ ಬಲದ ಅಸೆಂಬ್ಲಿಗೆ ಮತ ಎಣಿಕೆ ಮುಗಿದ ಕೂಡಲೇ ಗುಜರಾತ್ ಚುನಾವಣಾ ಫಲಿತಾಂಶ 2022 ಪ್ರಕಟವಾಗಲಿದೆ. ಗುಜರಾತ್ ವಿಧಾನಸಭೆ ಚುನಾವಣೆ 2022 ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ನಡುವೆ ಹೋರಾಟವಾಗಿದೆ. ಗುಜರಾತ್ 27 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. 182 ಸದಸ್ಯ ಬಲದ ಗುಜರಾತ್ ಅಸೆಂಬ್ಲಿಯಲ್ಲಿ ಬಿಜೆಪಿ 117-151 ಸೀಟುಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ 127 ಅಸೆಂಬ್ಲಿ ಸ್ಥಾನಗಳನ್ನು ಗೆದ್ದುಕೊಂಡಿದ್ದು ಅತ್ಯುತ್ತಮ ಸಾಧನೆಯಾಗಿದೆ. ಹಿಂದೆ 1985ರಲ್ಲಿ ಕಾಂಗ್ರೆಸ್ 182ರಲ್ಲಿ 149 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 150 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ, ಕಾಂಗ್ರೆಸ್​ನ ದಾಖಲೆಯನ್ನು ಬಿಜೆಪಿ ಮುರಿಯುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: Gujarat Election Results 2022: ಗುಜರಾತ್​​ನಲ್ಲಿ ಭಾರೀ ಗೆಲುವಿನ ಮೂಲಕ 1985ರ ಕಾಂಗ್ರೆಸ್​ನ ದಾಖಲೆ ಮುರಿಯಲು ಬಿಜೆಪಿ ಸಿದ್ಧತೆ; ಕಾರ್ಯಕರ್ತರ ಸಂಭ್ರಮಾಚರಣೆ

ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ 8 ಗಂಟೆಗೆ ಚುನಾವಣೆಯ ಮತ ಎಣಿಕೆ ಆರಂಭವಾಯಿತು. ಆಡಳಿತಾರೂಢ ಬಿಜೆಪಿ ಎಲ್ಲಾ 182 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಹೊಸದಾಗಿ ಗುಜರಾತ್ ಚುನಾವಣಾ ಅಖಾಡಕ್ಕೆ ಪ್ರವೇಶಿಸಿದ ಆಮ್ ಆದ್ಮಿ ಪಕ್ಷ (ಎಎಪಿ) 181 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ 179 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ