ಅಹಮದಾಬಾದ್: ಗುಜರಾತ್‌ನಲ್ಲಿ (Gujarat Assembly Elections) ಬಿಜೆಪಿ ಈ ಬಾರಿ ದಿಗ್ವಿಜಯ ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ. ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮೀರಿ ಬಿಜೆಪಿ ಗುಜರಾತ್‌ನಲ್ಲಿ (Gujarat Results) ಜಯಭೇರಿ ಬಾರಿಸಲಿದೆ. 182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಬಿಜೆಪಿ (BJP) ಈಗಾಗಲೇ 154 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಬಿಜೆಪಿಯ ಎದುರು ಕಾಂಗ್ರೆಸ್ಗೆ ಮತ್ತೊಮ್ಮೆ ಮುಖಭಂಗವಾಗುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಗರ್ಭಾ ನೃತ್ಯ ಮಾಡಿ, ಡೋಲು ಬಾರಿಸಿ ರಸ್ತೆಗಳಲ್ಲಿ, ಮೈದಾನಗಳಲ್ಲಿ, ಬಿಜೆಪಿ ಕಚೇರಿಗಳ ಬಳಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಇನ್ನೂ ಚುನಾವಣಾ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು ಬಿಜೆಪಿಯ ಧ್ವಜಗಳನ್ನು ಹಿಡಿದು, ಡೋಲು ಬಾರಿಸಿ, ಕುಣಿದು ಕುಪ್ಪಳಿಸುತ್ತಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಅಂತರದಿಂದ ಮುನ್ನಡೆ ಸಾಧಿಸಿದ್ದು, ಗೆಲುವು ನಿಶ್ಚಿತವಾಗಿದೆ. ಹೀಗಾಗಿ, ಗುಜರಾತ್ನ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
#WATCH | Celebrations at Gandhinagar BJP office as the party sweeps Gujarat elections
BJP leading on 149 seats of total 182 seats, as per ECI trends pic.twitter.com/rfuAusbO3z
— ANI (@ANI) December 8, 2022
ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಗುಜರಾತ್‌ನಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ ಬಹುಮತವನ್ನು ಮೀರಿ ಬಿಜೆಪಿ 154 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ 19 ಸ್ಥಾನಗಳೊಂದಿಗೆ ಹಿಂದುಳಿದಿದೆ. ಆಡಳಿತ ಪಕ್ಷಕ್ಕಿಂತ ಕಾಂಗ್ರೆಸ್ ಬಹಳ ದೂರದಲ್ಲಿದೆ. ಎಎಪಿ ಕೇವಲ 6 ಸ್ಥಾನಗಳಲ್ಲಿ ಮುಂದಿದೆ. 1995ರಿಂದ ಗುಜರಾತ್ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಯಾವುದೇ ಚುನಾವಣೆಯಲ್ಲಿ ಸೋತಿಲ್ಲ.
#WATCH | Women BJP workers in Gandhinagar celebrate by dancing as the party heads towards a landslide victory in Gujarat
BJP leading on 152 of the 182 seats, as per the official EC trends. pic.twitter.com/XlajLlNlYd
— ANI (@ANI) December 8, 2022
ಗುಜರಾತ್‌ನಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆಯ ಮತದಾನ ನಡೆದಿದೆ. 182 ಸದಸ್ಯ ಬಲದ ಅಸೆಂಬ್ಲಿಗೆ ಮತ ಎಣಿಕೆ ಮುಗಿದ ಕೂಡಲೇ ಗುಜರಾತ್ ಚುನಾವಣಾ ಫಲಿತಾಂಶ 2022 ಪ್ರಕಟವಾಗಲಿದೆ. ಗುಜರಾತ್ ವಿಧಾನಸಭೆ ಚುನಾವಣೆ 2022 ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ನಡುವೆ ಹೋರಾಟವಾಗಿದೆ. ಗುಜರಾತ್ 27 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. 182 ಸದಸ್ಯ ಬಲದ ಗುಜರಾತ್ ಅಸೆಂಬ್ಲಿಯಲ್ಲಿ ಬಿಜೆಪಿ 117-151 ಸೀಟುಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ 127 ಅಸೆಂಬ್ಲಿ ಸ್ಥಾನಗಳನ್ನು ಗೆದ್ದುಕೊಂಡಿದ್ದು ಅತ್ಯುತ್ತಮ ಸಾಧನೆಯಾಗಿದೆ. ಹಿಂದೆ 1985ರಲ್ಲಿ ಕಾಂಗ್ರೆಸ್ 182ರಲ್ಲಿ 149 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 150 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ, ಕಾಂಗ್ರೆಸ್ನ ದಾಖಲೆಯನ್ನು ಬಿಜೆಪಿ ಮುರಿಯುವ ಸಾಧ್ಯತೆ ಹೆಚ್ಚಾಗಿದೆ.
Gujarat | Celebrations at ‘Shri Kamalam’, the BJP office in Gandhinagar, as trends indicate the party’s clear lead in the State elections
BJP-144, Congress-20, AAP-6 & Others-5, as per ECI trends. pic.twitter.com/rMv0WGlBcc
— ANI (@ANI) December 8, 2022
ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ 8 ಗಂಟೆಗೆ ಚುನಾವಣೆಯ ಮತ ಎಣಿಕೆ ಆರಂಭವಾಯಿತು. ಆಡಳಿತಾರೂಢ ಬಿಜೆಪಿ ಎಲ್ಲಾ 182 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಹೊಸದಾಗಿ ಗುಜರಾತ್ ಚುನಾವಣಾ ಅಖಾಡಕ್ಕೆ ಪ್ರವೇಶಿಸಿದ ಆಮ್ ಆದ್ಮಿ ಪಕ್ಷ (ಎಎಪಿ) 181 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ 179 ಸ್ಥಾನಗಳಲ್ಲಿ ಸ್ಪರ್ಧಿಸಿದೆ.