Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ

ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ
ಸಿಎನ್​ಜಿ ಮತ್ತು ಪಿನ್​ಜಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 18, 2022 | 9:16 AM

ಗಾಂಧಿನಗರ: ದೇಶದಲ್ಲಿ ಸಾಲುಸಾಲು ಚುನಾವಣೆಗಳು ಇನ್ನೇನು ಘೋಷಣೆಯಾಗಲಿವೆ. ಹಿಮಾಚಲ ಪ್ರದೇಶಕ್ಕೆ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 12ರಂದು ಮತದಾನ ಹಾಗೂ ಡಿಸೆಂಬರ್ 8ಕ್ಕೆ ಫಲಿತಾಂಶ ಎಂದು ಚುನಾವಣಾ ಆಯೋಗವು ಘೋಷಿಸಿದೆ. ಚುನಾವಣಾ ಆಯೋಗವು ನಾಲ್ಕು ದಿನಗಳ ಹಿಂದೆ (ಅ 14) ನಡೆಸಿದ ಸುದ್ದಿಗೋಷ್ಠಿಯಲ್ಲಿಯೇ ಗುಜರಾತ್​ ರಾಜ್ಯದ ವಿಧಾನಸಭೆ ಚುನಾವಣೆಯೂ ಘೋಷಣೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಅಚ್ಚರಿಯೆಂಬಂತೆ ಅಂದು ಆಯೋಗವು ಗುಜರಾತ್​ ಚುನಾವಣೆಯ ದಿನಾಂಕವನ್ನು ಘೋಷಿಸಲಿಲ್ಲ. ಈ ನಡುವೆ ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

ದೀಪಾವಳಿ ಹಬ್ಬಸಾಲು ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಸಿಎನ್​ಜಿ (Compressed Natural Gas – CNG) ಮತ್ತು ಪಿಎನ್​ಜಿ (Piped Natural Gas – PNG) ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (Value Added Tax – VAT) ಶೇ 10ರಷ್ಟು ಕಡಿಮೆ ಮಾಡಿದೆ. ಇದರ ಜೊತೆಗೆ ಉಜ್ವಲ ಯೋಜನೆಯ 38 ಲಕ್ಷ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಗ್ಯಾಸ್ ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಈ ರಿಯಾಯ್ತಿಗಳು ಜಾರಿಗೆ ಬಂದರೆ ಗುಜರಾತ್ ಸರ್ಕಾರಕ್ಕೆ ₹ 1,650 ಕೋಟಿ ಹೊರೆ ಬೀಳಲಿದೆ.

‘ಸರ್ಕಾರವು ಸಿಎನ್​ಜಿ ಮತ್ತು ಪೈಪ್​ಲೈನ್ ಮೂಲಕ ಸರಬರಾಜಾಗುವ ಅಡುಗೆ ಅನಿಲ (ಪಿಎನ್​ಜಿ) ಮೇಲಿನ ವ್ಯಾಟ್​ ಪ್ರಮಾಣವನ್ನು ಶೇ 10ರಷ್ಟು ಕಡಿಮೆ ಮಾಡಿದೆ. ಇದರಿಂದ ಗೃಹಿಣಿಯರು, ಆಟೊ ಚಾಲಕರು ಮತ್ತು ಸಿಎನ್​ಜಿ ಮೂಲಕ ವಾಹನಗಳನ್ನು ಚಾಲನೆ ಮಾಡುವವರಿಗೆ ಅನುಕೂಲವಾಗುತ್ತದೆ’ ಎಂದು ಗುಜರಾತ್ ಸರ್ಕಾರದ ಸಚಿವ ಜಿತ್ತು ವಘಾನಿ ಹೇಳಿದರು.

ಗುಜರಾತ್​ನಲ್ಲಿ ಸಿಎನ್​ಜಿ ಮತ್ತು ಪಿಎನ್​ಜಿ ಪ್ರಮಾಣವು ಶೇ 15ರಷ್ಟು ಇದೆ. ಮುಂದಿನ ದಿನಗಳಲ್ಲಿ ತೆರಿಗೆ ಪ್ರಮಾಣವು ಶೇ 5ಕ್ಕೆ ಕುಸಿಯಲಿದೆ ಎಂದು ಉದ್ಯಮದ ಮೂಲಗಳು ಹೇಳಿವೆ. ಗುಜರಾತ್​ನಲ್ಲಿ ಸಿಎನ್​ಜಿ ದರವು ಒಂದು ಕೆಜಿಗೆ ₹ 6 ಮತ್ತು ಪಿಎನ್​ಜಿ ದರವು ಒಂದು ಮೀಟರ್ ಮೀಟರ್​ಗೆ ₹ 5ರಷ್ಟು ಕಡಿಮೆಯಾಗಲಿದೆ. ತೆರಿಗೆ ಕಡಿತದ ನಂತರ ರಾಜ್ಯ ಸರ್ಕಾರದ ಮೇಲೆ ₹ 1,000 ಕೋಟಿಯಷ್ಟು ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

‘ಗುಜರಾತ್​ನಲ್ಲಿ ಉಜ್ವಲಾ ಯೋಜನೆಯ ಅನ್ವಯ 38 ಲಕ್ಷ ಕುಟುಂಬಗಳಿಗೆ ಎಲ್​ಪಿಜಿ ಸಂಪರ್ಕ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಎಲ್ಲ ಕುಟುಂಬಗಳಿಗೂ ವರ್ಷಕ್ಕೆ 2 ಉಚಿತ ಸಿಲಿಂಡರ್ ನೀಡಲು ಮುಂದಾಗಿದ್ದು, ಅದಕ್ಕಾಗಿ ₹ 650 ಕೋಟಿ ವೆಚ್ಚ ಮಾಡಲಿದೆ’ ಎಂದು ಸಚಿವರು ವಿವರಿಸಿದ್ದಾರೆ. ‘ಸಿಲಿಂಡರ್​ ಖರೀದಿಸಿದ ಮೂರು ದಿನಗಳ ಒಳಗೆ ಸಬ್ಸಿಡಿ ಮೊತ್ತವು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ