ಪ್ರಚಾರ ಪಡೆಯುವುದಕ್ಕಾಗಿ ಇನ್​​ಸ್ಟಾಗ್ರಾಮ್ ಪೋಸ್ಟ್; ಗುಜರಾತ್ ಚುನಾವಣಾ ಅಧಿಕಾರಿ ಕರ್ತವ್ಯದಿಂದ ವಜಾ

ಅಧಿಕಾರಿಗೆ ಇಂದೇ ಕ್ಷೇತ್ರವನ್ನು ತೊರೆಯುವಂತೆಯೂ ಆದೇಶಿಸಲಾಗಿದೆ.  ವೀಕ್ಷಕರ ಕರ್ತವ್ಯಗಳಿಗಾಗಿ ಅವರಿಗೆ ಒದಗಿಸಿದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಅವರು ತಕ್ಷಣವೇ ಕಳೆದುಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ.

ಪ್ರಚಾರ ಪಡೆಯುವುದಕ್ಕಾಗಿ ಇನ್​​ಸ್ಟಾಗ್ರಾಮ್ ಪೋಸ್ಟ್; ಗುಜರಾತ್ ಚುನಾವಣಾ ಅಧಿಕಾರಿ ಕರ್ತವ್ಯದಿಂದ ವಜಾ
ಅಭಿಷೇಕ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 18, 2022 | 2:35 PM

ದೆಹಲಿ: ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಹುದ್ದೆಯನ್ನು ಸ್ಪಷ್ಟವಾಗಿ ತೋರಿಸಿದ್ದಕ್ಕಾಗಿ ಅಧಿಕಾರಿಯೊಬ್ಬರನ್ನು ಗುಜರಾತ್ ಚುನಾವಣಾ ವೀಕ್ಷಕ(Gujarat election observer) ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ಅಭಿಷೇಕ್ ಸಿಂಗ್ ಅವರು ತಮ್ಮ ಹುದ್ದೆಯ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಂಡಿದ್ದು ತಮ್ಮ ಅಧಿಕೃತ ಸ್ಥಾನವನ್ನು ಪ್ರಚಾರ ಪಡೆಯುವುದಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.ಉತ್ತರ ಪ್ರದೇಶ ಕೇಡರ್ ಅಧಿಕಾರಿಯಾಗಿರುವ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಬಾಪುನಗರ ಮತ್ತು ಅಸರ್ವಾ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಅಧಿಕಾರಿಯ ಇನ್‌ಸ್ಟಾ ಪೋಸ್ಟ್ ಬಗ್ಗೆ “ತೀರಾ ಗಂಭೀರವಾದ ನಿಲುವು ತೆಗೆದುಕೊಂಡಿದೆ. ಆದ್ದರಿಂದ, “ಸಾಮಾನ್ಯ ವೀಕ್ಷಕರಾಗಿ ಅವರ ಕರ್ತವ್ಯದಿಂದ ತಕ್ಷಣವೇ ತೆಗೆದುಹಾಕಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣೆ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಅಧಿಕಾರಿಗೆ ಇಂದೇ ಕ್ಷೇತ್ರವನ್ನು ತೊರೆಯುವಂತೆಯೂ ಆದೇಶಿಸಲಾಗಿದೆ.  ವೀಕ್ಷಕರ ಕರ್ತವ್ಯಗಳಿಗಾಗಿ ಅವರಿಗೆ ಒದಗಿಸಿದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಅವರು ತಕ್ಷಣವೇ ಕಳೆದುಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ.

ಸಿಂಗ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.

ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ