ಗುಜರಾತ್​​ನ ಐತಿಹಾಸಿಕ ಗೆಲುವಿಗೆ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

ಧನ್ಯವಾದಗಳು ಗುಜರಾತ್. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮೋದಿ ಟ್ವೀಟ್

ಗುಜರಾತ್​​ನ ಐತಿಹಾಸಿಕ ಗೆಲುವಿಗೆ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 08, 2022 | 6:46 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ತಮ್ಮ ತವರು ರಾಜ್ಯ ಗುಜರಾತ್‌ಗೆ (Gujarat) ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ (Gujarat Assembly Polls) ಅದ್ಭುತ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ ಎಂದು ಅವರು ಹೇಳಿದ್ದಾರೆ. ಧನ್ಯವಾದಗಳು ಗುಜರಾತ್. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಕ್ಷದ ಕಾರ್ಯಕರ್ತರನ್ನು ಶ್ಲಾಘಿಸಿದ ಮೋದಿ, ಪ್ರತಿಯೊಬ್ಬರೂ ಚಾಂಪಿಯನ್ ಆಗಿದ್ದಾರೆ ಎಂದು ಹೇಳಿದರು. ಕಠಿಣ ಪರಿಶ್ರಮಿಗಳಾದ ಗುಜರಾತಿನ ಎಲ್ಲ ಬಿಜೆಪಿ ಕಾರ್ಯಕರ್ತರಲ್ಲಿ ನಾನು ನೀವು ಪ್ರತಿಯೊಬ್ಬರೂ ಚಾಂಪಿಯನ್! ಎಂದು ಹೇಳಬಯಸುತ್ತೇನೆ. ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡ ಹಿಮಾಚಲ ಪ್ರದೇಶದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗುಡ್ಡಗಾಡು ರಾಜ್ಯದ ಮತದಾರರು ಬಿಜೆಪಿಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಮುಂಬರುವ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು ಮತ್ತು ಜನರ ಸಮಸ್ಯೆಗಳನ್ನು ಎತ್ತಲು ತಮ್ಮ ಪಕ್ಷವು ಕೆಲಸ ಮಾಡುತ್ತದೆ ಎಂದು ಹೇಳಿದರು. ಬಿಜೆಪಿಯ ಮೇಲಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಹಿಮಾಚಲ ಪ್ರದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು ಮತ್ತು ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನಾವು ಶ್ರಮಿಸುತ್ತೇವೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ