ಗುಜರಾತ್​ನ ಜನ ಈ ಬಾರಿ ಎಲ್ಲ ದಾಖಲೆಯನ್ನೂ ಮುರಿಯುತ್ತಾರೆ; ಸೂರತ್ ರೋಡ್​​ಶೋನಲ್ಲಿ ಪ್ರಧಾನಿ ಮೋದಿ

Gujarat Assembly Elections 2022: ಸೂರತ್​ನಲ್ಲಿ ಮರೆಯಲಾಗದ ಸಂಜೆಯನ್ನು ಕಳೆದಿದ್ದೇನೆ. ಬಿಜೆಪಿಯೇ ಜನರ ಆದ್ಯತೆಯ ಆಯ್ಕೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೂರತ್ ರೋಡ್​​ ಶೋನ ವಿಡಿಯೋ ಶೇರ್ ಮಾಡಿದ್ದಾರೆ.

ಗುಜರಾತ್​ನ ಜನ ಈ ಬಾರಿ ಎಲ್ಲ ದಾಖಲೆಯನ್ನೂ ಮುರಿಯುತ್ತಾರೆ; ಸೂರತ್ ರೋಡ್​​ಶೋನಲ್ಲಿ ಪ್ರಧಾನಿ ಮೋದಿ
ಸೂರತ್ ರೋಡ್​​ಶೋನಲ್ಲಿ ಪ್ರಧಾನಿ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 28, 2022 | 11:22 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾನುವಾರ ಸಂಜೆ ಗುಜರಾತ್‌ನ ಸೂರತ್‌ನಲ್ಲಿ ಬೃಹತ್ ರೋಡ್‌ಶೋ (Surat Road Show) ನಡೆಸಿದರು. ಈ ವೇಳೆ ಮಾತನಾಡಿದ ಅವರು, ಗುಜರಾತ್​ ಚುನಾವಣೆಯಲ್ಲಿ (Gujarat Assembly Elections 2022) ಈ ಬಾರಿ ಇಲ್ಲಿನ ಮತದಾರರು ಎಲ್ಲ ದಾಖಲೆಗಳನ್ನೂ ಮುರಿಯುತ್ತಾರೆ. ಅವರು ಬಿಜೆಪಿಗೆ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ನೀಡುತ್ತಾರೆ ಎಂಬ ವಿಶ್ವಾಸ, ನಂಬಿಕೆ ನನಗಿದೆ ಎಂದಿದ್ದಾರೆ. ಸೂರತ್ ವಿಮಾನ ನಿಲ್ದಾಣದಿಂದ ನಗರದ ಪ್ರಮುಖ ಕೇಂದ್ರವಾದ ವರಚ್ಚಾವರೆಗಿನ 27 ಕಿ.ಮೀ ಮಾರ್ಗದ ರೋಡ್‌ಶೋದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಲಕ್ಷಾಂತರ ಜನರು ನಿಂತು, ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.

ಈ ವಿಡಿಯೋವನ್ನು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸೂರತ್​ನಲ್ಲಿ ಮರೆಯಲಾಗದ ಸಂಜೆಯನ್ನು ಕಳೆದಿದ್ದೇನೆ. ಬಿಜೆಪಿಯೇ ಜನರ ಆದ್ಯತೆಯ ಆಯ್ಕೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇಲ್ಲಿದೆ. ನಮ್ಮ ಅಭಿವೃದ್ಧಿ ಕಾರ್ಯಗಳಿಂದಾಗಿ ಜನರನ್ನು ತಲುಪಲು ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಸೂರತ್‌ನ 12 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1ರಂದು ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೂರತ್​​ನಲ್ಲಿ ಮೋದಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ರಾತ್ರಿಯಾದರೂ ರಸ್ತೆಗಳ ಪಕ್ಕದಲ್ಲಿ, ಕಟ್ಟಡಗಳ ಮೇಲೆ ನಿಂತುಕೊಂಡು ಲಕ್ಷಾಂತರ ಜನರು ಮೋದಿಯನ್ನು ಸ್ವಾಗತಿಸುತ್ತಿರುವ ವಿಡಿಯೋ, ಫೋಟೋಗಳು ವೈರಲ್ ಆಗಿವೆ. ಅಲ್ಲದೆ, ಜನರು ಮೋದಿ ಮೋದಿ ಎಂದು ಜೋರಾಗಿ ಘೋಷಣೆ ಕೂಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರಿನ ಡೋರ್​​ನಲ್ಲಿ ನಿಂತುಕೊಂಡು ರಸ್ತೆಯುದ್ದಕ್ಕೂ ಜನರತ್ತ ಕೈಬೀಸಿದ್ದಾರೆ.

ಇದನ್ನೂ ಓದಿ: ಉಗ್ರರನ್ನು ಟಾರ್ಗೆಟ್ ಮಾಡುವಂತೆ ನಾವು ಹೇಳಿದೆವು, ಅವರು ಮೋದಿಯನ್ನು ಟಾರ್ಗೆಟ್ ಮಾಡಿದರು: ಪ್ರಧಾನಿ ಮೋದಿ

ಇದಕ್ಕೂ ಮುನ್ನ 2 ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಗುಜರಾತ್ ಭಯೋತ್ಪಾದನೆಯ ಬೇಗೆಯಲ್ಲಿ ಹಲವು ವರ್ಷಗಳ ಕಾಲ ನರಳಿತ್ತು. ಗುಜರಾತ್ ನಲ್ಲಿದ್ದ ಬಿಜೆಪಿ ಸರ್ಕಾರ ಭಯೋತ್ಪಾದಕರ ಸ್ಲೀಪರ್ ಸೆಲ್ ಗಳನ್ನು ನಿಗ್ರಹಿಸುವ ಮೂಲಕ ಉಗ್ರವಾದವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದರೆ, ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರ ಭಯೋತ್ಪಾದಕರನ್ನು ಬಿಡುಗಡೆ ಮಾಡುವ ಕೆಲಸ ಮಾಡುತ್ತಿತ್ತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಜರಾತಿನಲ್ಲಿ ಅಂತಿಮ ಸುತ್ತಿನ ಪ್ರಚಾರ: ಸೂರತ್​​ನಲ್ಲಿ ನಡೆಯಲಿದೆ ಅರವಿಂದ ಕೇಜ್ರಿವಾಲ್, ಮೋದಿ ರ್ಯಾಲಿ

ನಾವು ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದನೆಯನ್ನು ಟಾರ್ಗೆಟ್ ಮಾಡಿ ಎಂದು ಮನವಿ ಮಾಡಿದರೆ ಅವರು ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದರು. ಅದರಿಂದಾಗಿ ಭಯೋತ್ಪಾದಕರಿಗೆ ಭಯವೇ ಇಲ್ಲದಂತಾಯಿತು. ಭಯೋತ್ಪಾದನೆ ಹೆಚ್ಚಾಗಿ ಈಗ ದೊಡ್ಡ ನಗರಗಳಿಗೂ ವ್ಯಾಪಿಸಿದೆ ಎಂದು ಮೋದಿ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ವ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು