ಅರ್ಬನ್ ನಕ್ಸಲರು ಹೊಸ ರೂಪದಲ್ಲಿ ಗುಜರಾತಿಗೆ ನುಗ್ಗಲು ಪ್ರಯತ್ನಿಸುತ್ತಿದ್ದಾರೆ: ಮೋದಿ

ಅರ್ಬನ್ ನಕ್ಸಲರು ಮೇಲಿಂದ ಕಾಲಿಡುತ್ತಿದ್ದಾರೆ. ನಮ್ಮ ಯುವ ಪೀಳಿಗೆಯನ್ನು ನಾಶಮಾಡಲು ನಾವು ಬಿಡುವುದಿಲ್ಲ. ದೇಶವನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿರುವ ಅರ್ಬನ್ ನಕ್ಸಲರ ವಿರುದ್ಧ ನಮ್ಮ ಮಕ್ಕಳಿಗೆ ಎಚ್ಚರಿಕೆ ನೀಡಬೇಕು

ಅರ್ಬನ್ ನಕ್ಸಲರು ಹೊಸ ರೂಪದಲ್ಲಿ ಗುಜರಾತಿಗೆ ನುಗ್ಗಲು ಪ್ರಯತ್ನಿಸುತ್ತಿದ್ದಾರೆ: ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 10, 2022 | 8:07 PM

ಭರೂಚ್: ‘ಅರ್ಬನ್ ನಕ್ಸಲರು’ (Urban Naxals)ಹೊಸ ರೂಪದಲ್ಲಿ ಗುಜರಾತ್‌ಗೆ (Gujarat) ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ.  ಆದರೆ ರಾಜ್ಯವು ಯುವಕರ ಜೀವನವನ್ನು ನಾಶಮಾಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಹೇಳಿದ್ದಾರೆ. ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ದೇಶದ ಮೊದಲ ಬೃಹತ್ ಡ್ರಗ್ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡುತ್ತಿದ್ದರವರು. “ಅರ್ಬನ್ ನಕ್ಸಲರು ಹೊಸ ರೂಪಗಳೊಂದಿಗೆ ರಾಜ್ಯವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ತಮ್ಮ ವೇಷಭೂಷಣಗಳನ್ನು ಬದಲಾಯಿಸಿದ್ದಾರೆ. ಅವರು ನಮ್ಮ ಮುಗ್ಧ ಮತ್ತು ಶಕ್ತಿಯುತ ಯುವಕರನ್ನು ಅವರನ್ನು ಅನುಸರಿಸುವಂತೆ ದಾರಿ ತಪ್ಪಿಸುತ್ತಿದ್ದಾರೆ” ಎಂದು ಮೋದಿ ಆಮ್ ಆದ್ಮಿ ಪಕ್ಷದ (AAP) ವಿರುದ್ಧ ಮುಸುಕಿನ ದಾಳಿ ನಡೆಸಿದರು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಅಸೆಂಬ್ಲಿ ಚುನಾವಣೆಗೆ ಆಮ್ ಆದ್ಮಿ ಭರದ ಸಿದ್ಧತೆ ನಡೆಸುತ್ತಿದೆ.

ಅರ್ಬನ್ ನಕ್ಸಲರು ಮೇಲಿಂದ ಕಾಲಿಡುತ್ತಿದ್ದಾರೆ. ನಮ್ಮ ಯುವ ಪೀಳಿಗೆಯನ್ನು ನಾಶಮಾಡಲು ನಾವು ಬಿಡುವುದಿಲ್ಲ. ದೇಶವನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿರುವ ಅರ್ಬನ್ ನಕ್ಸಲರ ವಿರುದ್ಧ ನಮ್ಮ ಮಕ್ಕಳಿಗೆ ಎಚ್ಚರಿಕೆ ನೀಡಬೇಕು. ಅವರು ವಿದೇಶಿ ಶಕ್ತಿಗಳ ಏಜೆಂಟ್. ಗುಜರಾತ್ ಅವರ ವಿರುದ್ಧ ತಲೆ ಕೆಡಿಸಿಕೊಳ್ಳುವುದಿಲ್ಲ, ಗುಜರಾತ್ ಅವರನ್ನು ನಾಶಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

2014 ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗ ಭಾರತದ ಆರ್ಥಿಕತೆಯು ವಿಶ್ವದಲ್ಲಿ 10 ನೇ ಸ್ಥಾನದಲ್ಲಿತ್ತು ಮತ್ತು ಅದು ಈಗ ಐದನೇ ಸ್ಥಾನಕ್ಕೆ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅರ್ಬನ್ ನಕ್ಸಲರಿಂದಾಗಿ ನರ್ಮದಾ ನದಿಗೆ ಸರ್ದಾರ್ ಸರೋವರ ಅಣೆಕಟ್ಟು ಕಟ್ಟುವ ಮುನ್ನ ನಾವು 40-50 ವರ್ಷಗಳ ಸಮಯವನ್ನು ವ್ಯರ್ಥ ಮಾಡಿದ್ದೇವೆ. ಇಂದು ವಿವಿಧ ಪ್ರಯತ್ನಗಳ ನಂತರ ಸರ್ದಾರ್ ಸರೋವರ ಅಣೆಕಟ್ಟು ನಿರ್ಮಾಣ ಪೂರ್ಣಗೊಂಡಿದೆ ಎಂದು ಗುಜರಾತ್‌ನ ಆನಂದ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ