ಭರೂಚ್: ‘ಅರ್ಬನ್ ನಕ್ಸಲರು’ (Urban Naxals)ಹೊಸ ರೂಪದಲ್ಲಿ ಗುಜರಾತ್‌ಗೆ (Gujarat) ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ರಾಜ್ಯವು ಯುವಕರ ಜೀವನವನ್ನು ನಾಶಮಾಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಹೇಳಿದ್ದಾರೆ. ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ದೇಶದ ಮೊದಲ ಬೃಹತ್ ಡ್ರಗ್ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡುತ್ತಿದ್ದರವರು. “ಅರ್ಬನ್ ನಕ್ಸಲರು ಹೊಸ ರೂಪಗಳೊಂದಿಗೆ ರಾಜ್ಯವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ತಮ್ಮ ವೇಷಭೂಷಣಗಳನ್ನು ಬದಲಾಯಿಸಿದ್ದಾರೆ. ಅವರು ನಮ್ಮ ಮುಗ್ಧ ಮತ್ತು ಶಕ್ತಿಯುತ ಯುವಕರನ್ನು ಅವರನ್ನು ಅನುಸರಿಸುವಂತೆ ದಾರಿ ತಪ್ಪಿಸುತ್ತಿದ್ದಾರೆ” ಎಂದು ಮೋದಿ ಆಮ್ ಆದ್ಮಿ ಪಕ್ಷದ (AAP) ವಿರುದ್ಧ ಮುಸುಕಿನ ದಾಳಿ ನಡೆಸಿದರು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಅಸೆಂಬ್ಲಿ ಚುನಾವಣೆಗೆ ಆಮ್ ಆದ್ಮಿ ಭರದ ಸಿದ್ಧತೆ ನಡೆಸುತ್ತಿದೆ.
ಅರ್ಬನ್ ನಕ್ಸಲರು ಮೇಲಿಂದ ಕಾಲಿಡುತ್ತಿದ್ದಾರೆ. ನಮ್ಮ ಯುವ ಪೀಳಿಗೆಯನ್ನು ನಾಶಮಾಡಲು ನಾವು ಬಿಡುವುದಿಲ್ಲ. ದೇಶವನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿರುವ ಅರ್ಬನ್ ನಕ್ಸಲರ ವಿರುದ್ಧ ನಮ್ಮ ಮಕ್ಕಳಿಗೆ ಎಚ್ಚರಿಕೆ ನೀಡಬೇಕು. ಅವರು ವಿದೇಶಿ ಶಕ್ತಿಗಳ ಏಜೆಂಟ್. ಗುಜರಾತ್ ಅವರ ವಿರುದ್ಧ ತಲೆ ಕೆಡಿಸಿಕೊಳ್ಳುವುದಿಲ್ಲ, ಗುಜರಾತ್ ಅವರನ್ನು ನಾಶಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
#WATCH | PM Narendra Modi got down from his car to accept people’s greetings in Jamnagar, Gujarat earlier this evening. pic.twitter.com/t7iLTOs3eK
— ANI (@ANI) October 10, 2022
2014 ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗ ಭಾರತದ ಆರ್ಥಿಕತೆಯು ವಿಶ್ವದಲ್ಲಿ 10 ನೇ ಸ್ಥಾನದಲ್ಲಿತ್ತು ಮತ್ತು ಅದು ಈಗ ಐದನೇ ಸ್ಥಾನಕ್ಕೆ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಅರ್ಬನ್ ನಕ್ಸಲರಿಂದಾಗಿ ನರ್ಮದಾ ನದಿಗೆ ಸರ್ದಾರ್ ಸರೋವರ ಅಣೆಕಟ್ಟು ಕಟ್ಟುವ ಮುನ್ನ ನಾವು 40-50 ವರ್ಷಗಳ ಸಮಯವನ್ನು ವ್ಯರ್ಥ ಮಾಡಿದ್ದೇವೆ. ಇಂದು ವಿವಿಧ ಪ್ರಯತ್ನಗಳ ನಂತರ ಸರ್ದಾರ್ ಸರೋವರ ಅಣೆಕಟ್ಟು ನಿರ್ಮಾಣ ಪೂರ್ಣಗೊಂಡಿದೆ ಎಂದು ಗುಜರಾತ್‌ನ ಆನಂದ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದ್ದಾರೆ.