AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Assembly Elections 2022: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಅಮಿತ್ ಶಾ

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಅವರ ತವರು ರಾಜ್ಯದಲ್ಲಿ ಸತತ ಏಳನೇ ಅವಧಿಯಲ್ಲಿ ಆಡಳಿತ ನಡೆಸಲು ಸಲುವಾಗಿ ಅನೇಕ ತಂತ್ರಗಳನ್ನು ಮಾಡಿದ್ದಾರೆ.

Gujarat Assembly Elections 2022: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಅಮಿತ್ ಶಾ
Amit Shah
TV9 Web
| Edited By: |

Updated on:Nov 15, 2022 | 1:14 PM

Share

ಗುಜರಾತ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಅವರ ತವರು ರಾಜ್ಯದಲ್ಲಿ ಸತತ ಏಳನೇ ಅವಧಿಯಲ್ಲಿ ಆಡಳಿತ ನಡೆಸಲು ಸಲುವಾಗಿ ಅನೇಕ ತಂತ್ರಗಳನ್ನು ಮಾಡಿದ್ದಾರೆ. ಗುಜರಾತ್​ನ ಮುಂದಿನ ಬಿಜೆಪಿ ಮುಖ್ಯಮಂತ್ರಿ ಅರ್ಭ್ಯಥಿ ಯಾರು ಎಂಬ ಚರ್ಚೆಗಳು ನಡೆಯುತ್ತಿತ್ತು. ಇದೀಗ ಇದಕ್ಕೆ ಅಮಿತ್ ಶಾ ಉತ್ತರ ನೀಡಿದ್ದಾರೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪಟೇಲ್ ಎಂದು ಷಾ ಸ್ಪಷ್ಟವಾಗಿ ಹೇಳಿದ್ದಾರೆ. ಗುಜರಾತ್​ನಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾ ಹೇಳಿದ್ದಾರೆ.

2021ರ ಸೆಪ್ಟೆಂಬರ್‌ನಲ್ಲಿ ಪಟೇಲ್ ಅವರನ್ನು ವಿಜಯ್ ರೂಪಾನಿ ಅವರನ್ನು ಮುಖ್ಯಮಂತ್ರಿಯಾಗಿ ಬದಲಾಯಿಸಿದರು, ಇದು ಅನೇಕರನ್ನು ಆಶ್ಚರ್ಯಗೊಳಿಸಿತು. ಅವರು ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗಧ್ವಿ ಅವರು ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಎಎಪಿಯ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಟ್ವಿಟರ್‌ನಲ್ಲಿ ಈ ಘೋಷಣೆಯನ್ನು ಮಾಡಿದ್ದಾರೆ ಮತ್ತು ರೈತರು, ನಿರುದ್ಯೋಗಿ ಯುವಕರು, ಮಹಿಳೆಯರು, ಉದ್ಯಮಿಗಳಿಗಾಗಿ ವರ್ಷಗಳ ಕಾಲ ಧ್ವನಿ ಎತ್ತಿರುವ ಇಸುದನ್ ಗಧ್ವಿ ಅವರು ಜಾಮ್ ಖಂಭಾಲಿಯಾದಿಂದ ಸ್ಪರ್ಧಿಸಲಿದ್ದಾರೆ.

ಗುಜರಾತ್ ನಮ್ಮ ಪಕ್ಷ ಉತ್ತಮ ಫಲಿತಾಂಶವನ್ನು ಪಡೆಯುತ್ತದೆ. ಶ್ರೀಕೃಷ್ಣನ ಪುಣ್ಯಭೂಮಿಯಿಂದ ಮುಖ್ಯಮಂತ್ರಿಯ ಆಯ್ಕೆ ಆಗುತ್ತದೆ ಎಂದು ಎಎಪಿ ಹೇಳಿದೆ. ಆದರೆ ಕಾಂಗ್ರೆಸ್ ತ್ನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಘೋಷಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಗುಜರಾತ್‌ನ ಒಟ್ಟು 182 ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.

Published On - 1:13 pm, Tue, 15 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ