Haryana Assembly Elections: ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಹರಿಯಾಣ ಚುನಾವಣೆಗೂ ಮುಂಚಿತವಾಗಿ ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ಮತ್ತು ಎಎಪಿ ಹರಿಯಾಣ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಮಾತುಕತೆಯಲ್ಲಿ ತೊಡಗಿವೆ.
ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ರೈಲ್ವೆ ಇಲಾಖೆಯ ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭೇಟಿ ಮಾಡಿ, ಮಾತುಕತೆ ನಡೆಸಿದ್ದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ನಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಚರ್ಚೆಗಳು ಹರಿದಾಡಿದ್ದವು. ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಸೇರುವ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಇಂದು ಮಧ್ಯಾಹ್ನ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಲ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಅಧಿಕೃತ ಸೇರ್ಪಡೆಗೂ ಮುನ್ನ ಅವರು ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾದರು.
VIDEO | Wrestlers Vinesh Phogat (@Phogat_Vinesh) and Bajrang Punia (@BajrangPunia) join Congress in the presence party general secretary KC Venugopal (@kcvenugopalmp) and other leaders in Delhi.
(Full video available on PTI Videos – https://t.co/n147TvqRQz) pic.twitter.com/xlV0VOMeXA
— Press Trust of India (@PTI_News) September 6, 2024
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರನ್ನು ಭೇಟಿಯಾದರು. ಬಳಿಕ ನಡೆದ ಸರಳ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಬ್ಬರೂ ಕುಸ್ತಿಪಟುಗಳನ್ನು ಬರಮಾಡಿಕೊಳ್ಳಲಾಯಿತು.
ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ; ರೈಲ್ವೆ ಇಲಾಖೆಗೆ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ
ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರನ್ನು ಹೊರತುಪಡಿಸಿ ಬಜರಂಗ್ ಪುನಿಯಾ ಅವರಿಗೆ ಟಿಕೆಟ್ ನೀಡದಿದ್ದರೆ ಅವರಿಗೆ ಕಾಂಗ್ರೆಸ್ ಸಂಘಟನೆಯಲ್ಲಿ ಸೂಕ್ತ ಹುದ್ದೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಮುಂದಿನ ತಿಂಗಳು ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
#WATCH | Delhi: Vinesh Phogat and Bajrang Punia join the Congress party
Party’s general secretary KC Venugopal, party leader Pawan Khera, Haryana Congress chief Udai Bhan and AICC in-charge of Haryana, Deepak Babaria present at the joining. pic.twitter.com/BrqEFtJCKn
— ANI (@ANI) September 6, 2024
2023ರಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಆಗಿನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ನಡೆದ ಪ್ರತಿಭಟನೆಯಲ್ಲಿ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಭಾಗವಹಿಸಿದ್ದರು.
ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಫೋಗಟ್ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಆದರೆ, ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದರೂ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:33 pm, Fri, 6 September 24