ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾದಲ್ಲಿ ಪ್ರವಾಹ; ಮೂರು ದಿನಗಳಲ್ಲಿ ಸಾವಿಗೀಡಾದವರ ಸಂಖ್ಯೆ 50

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ನಾಪತ್ತೆಯಾದ ಐವರು ಭಾನುವಾರ ಪತ್ತೆಯಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾದಲ್ಲಿ ಪ್ರವಾಹ; ಮೂರು ದಿನಗಳಲ್ಲಿ ಸಾವಿಗೀಡಾದವರ ಸಂಖ್ಯೆ 50
ಪ್ರವಾಹ
Follow us
TV9 Web
| Updated By: Digi Tech Desk

Updated on:Aug 25, 2022 | 4:25 PM

ಕಳೆದ ಮೂರು ದಿನಗಳಿಂದ ಉತ್ತರ ಮತ್ತು ಪೂರ್ವ ಭಾರತದಲ್ಲಿ ಸುರಿಯುತ್ತಿರುವ ಭಾರ ಮಳೆಯಿಂದ ಉಂಟಾದ ಹಠಾತ್ ಪ್ರವಾಹ (flash floods) ಮತ್ತು ಭೂಕುಸಿತದಲ್ಲಿ ಹತ್ತಕ್ಕಿಂತಲೂ ಹೆಚ್ಚು ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ ಇದಕ್ಕಿಂತಲೂ ಹೆಚ್ಚಾಗಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶ (Himachal Pradesh) ಉತ್ತರಾಖಂಡ ಮತ್ತು ಒಡಿಶಾದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮಳೆಯಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ನೂರಾರು ಹಳ್ಳಿಗಳು, ಮಣ್ಣಿನಿಂದ ಮಾಡಿದ ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಜಲಾವೃತವಾಗಿವೆ. ಮುಂದಿನ ಎರಡು ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ನಾಪತ್ತೆಯಾದ ಐವರು ಭಾನುವಾರ ಪತ್ತೆಯಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ. ಮಂಡಿ, ಕಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಗರಿಷ್ಠ ಹಾನಿ ವರದಿಯಾಗಿದೆ.

ಪ್ರವಾಹದಲ್ಲಿ ಮುಳುಗಿದ ರಸ್ತೆ, ಜನರಿಗೆ ಸಂಕಷ್ಟ

  1. ಹಿಮಾಚಲ ಪ್ರದೇಶದಲ್ಲಿ, ಕಳೆದ ಮೂರು ದಿನಗಳಲ್ಲಿ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ತಮ್ಮ ಮನೆಗಳಿಂದ ನಿರಾಶ್ರಿತರಾದ ನಂತರ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.
  2. ಉತ್ತರಾಖಂಡದಲ್ಲಿ, ಶನಿವಾರದಂದು ಸರಣಿ ಮೇಘಸ್ಫೋಟದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ನದಿಗಳು ದಡವನ್ನು ಭೇದಿಸಿ ಕೆಲವು ಮನೆಗಳನ್ನು ಕೊಚ್ಚಿಕೊಂಡು ಹೋಗಿದ್ದರಿಂದ 13 ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸಿಕ್ಕಿಬಿದ್ದವರನ್ನು ಸ್ಥಳಾಂತರಿಸುತ್ತಿವೆ.
  3. ಒಡಿಶಾದಲ್ಲಿ  ಧಾರಾಕಾರ ಮಳೆಯ ನಡುವೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದಾಗಿ ಒಡಿಶಾದಲ್ಲಿ ಸುಮಾರು 8 ಲಕ್ಷ ಜನರು  ಸಂಕಷ್ಟಕ್ಕೆ ಸಿಲುಕಿದ್ದಾರೆ.   ಸಾವಿರಾರು ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ. ಮಳೆಯಿಂದಾಗಿ ವಿದ್ಯುತ್ ಮತ್ತು ನೀರು ಸರಬರಾಜು ಅಡ್ಡಿಪಡಿಸಲಾಗಿದೆ.ರಸ್ತೆಗಳಿಗೆ  ಹಾನಿಗೊಳಿಸಿದೆ. ರಾಜ್ಯವು ಪೀಡಿತ ಪ್ರದೇಶಗಳಿಂದ ಇದುವರೆಗೆ 120,000 ಜನರನ್ನು ಸ್ಥಳಾಂತರಿಸಿದೆ.
  4. ಬಂಗಾಳ ಕೊಲ್ಲಿಯಲ್ಲಿ ಆಳವಾದ ತಗ್ಗು ಪ್ರದೇಶದಿಂದ ಉಂಟಾದ ಭಾರೀ ಮಳೆಯಿಂದಾಗಿ ಮತ್ತು ಜಾರ್ಖಂಡ್‌ನಿಂದ ಗಲುಡಿಹ್ ಬ್ಯಾರೇಜ್ ಮೂಲಕ ನಂತರದ ಪ್ರವಾಹದ ನೀರನ್ನು ಬಿಡುಗಡೆ ಮಾಡುವುದರಿಂದ ಉತ್ತರ ಒಡಿಶಾದಲ್ಲಿರುವ ಎಲ್ಲಾ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
  5. ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಶನಿವಾರ ನಲ್ಕರಿ ನದಿಯ ನೀರಿನಲ್ಲಿ ಐವರು ಕೊಚ್ಚಿ ಹೋಗಿದ್ದರು. ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ರಾಮಗಢದ ಜಿಲ್ಲಾ ಅಧಿಕಾರಿ ಮಾಧ್ವಿ ಮಿಶ್ರಾ ತಿಳಿಸಿದ್ದಾರೆ.

Published On - 8:55 pm, Sun, 21 August 22