AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಹಿಮಾಚಲ ಪ್ರದೇಶ ಚುನಾವಣೆ: 46 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಈ ಕೆಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪತ್ರಿಕಾ ಪ್ರಕಟಣೆ ತಿಳಿಸಿದೆ.

Breaking News ಹಿಮಾಚಲ ಪ್ರದೇಶ ಚುನಾವಣೆ: 46 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷ
TV9 Web
| Edited By: |

Updated on:Oct 18, 2022 | 9:44 PM

Share

ದೆಹಲಿ: ನವೆಂಬರ್ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ (Himachal Pradesh Assembly elections) ಕಾಂಗ್ರೆಸ್ 46 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ (Congress) ಕೇಂದ್ರ ಚುನಾವಣಾ ಸಮಿತಿಯು ಈ ಕೆಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪತ್ರಿಕಾ ಪ್ರಕಟಣೆ ತಿಳಿಸಿದೆ. ಪಟ್ಟಿಯಲ್ಲಿರುವ ಪ್ರಮುಖ ಹೆಸರುಗಳಲ್ಲಿ ವಿಕ್ರಮಾದಿತ್ಯ ಸಿಂಗ್, ಮಾಜಿ ಮುಖ್ಯಮಂತ್ರಿ ಎಂ ವೀರಭದ್ರ ಸಿಂಗ್ ಅವರ ಪುತ್ರ, ವಿರೋಧ ಪಕ್ಷದ ನಾಯಕ (LoP) ಮುಖೇಶ್ ಅಗ್ನಿಹೋತ್ರಿ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಇದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಖೇಶ್ ಅಗ್ನಿಹೋತ್ರಿ ಹರೋಲಿಯಿಂದ ಸ್ಪರ್ಧಿಸಲಿದ್ದು, ಆಶಾ ಕುಮಾರಿ ಡಾಲ್ಹೌಸಿಯಿಂದ ಸ್ಪರ್ಧಿಸಲಿದ್ದಾರೆ. ರಾಜ್ಯ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರಾದ ಸುಖವಿಂದರ್ ಸಿಂಗ್ ಸುಖು ಅವರ  ನಾದೌನ್ ಮತ್ತು ಕುಲದೀಪ್ ಸಿಂಗ್ ರಾಥೋಡ್ ಅವರು ಥಿಯೋಗ್‌ನಿಂದ ಕಣಕ್ಕಿಳಿಯಲಿದ್ದಾರೆ.

57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು  ಇಂದು ಬಿಡುಗಡೆ ಮಾಡಲಾಗುವುದು ಮತ್ತು ಉಳಿದ 11 ಅಭ್ಯರ್ಥಿಗಳ ಹೆಸರನ್ನು ನಂತರ ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಭಾನುವಾರ ಹೇಳಿದ್ದರು. ಅದೇ ದಿನ ಸಂಜೆ, ಕಾಂಗ್ರೆಸ್ ಎಲ್ಲಾ 68 ಅಭ್ಯರ್ಥಿಗಳ ಹೆಸರನ್ನು ಸೋಮವಾರ ಘೋಷಿಸಲಿದೆ ಎಂದು ಲಂಬಾ ಹೇಳಿದರು.ಅಂತಿಮವಾಗಿ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಮಂಗಳವಾರ) ಪ್ರಕಟಿಸಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ನಂತರ ಪ್ರಕಟಿಸಲಾಗುವುದು.

ಹಿಮಾಚಲ ಪ್ರದೇಶದ  68 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.  ಪ್ರಸ್ತುತ ಇಲ್ಲಿನ ವಿಧಾನಸಭೆಯಲ್ಲಿ ಬಿಜೆಪಿ 43 ಸದಸ್ಯರನ್ನು ಹೊಂದಿದೆ. ಕಾಂಗ್ರೆಸ್‌ನ 22, ಇಬ್ಬರು ಪಕ್ಷೇತರರು  ಮತ್ತು ಒಬ್ಬ ಸಿಪಿಎಂ ಶಾಸಕ ಇದ್ದಾರೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ನವೆಂಬರ್ 12 ರಂದು ನಡೆಯಲಿರುವ ರಾಜ್ಯ ಚುನಾವಣೆಗೆ ಮಂಡಿ ಜಿಲ್ಲೆಯ ಸೆರಾಜ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಂಗಳವಾರ ತಿಳಿಸಿದೆ.

ಅಕ್ಟೋಬರ್ 17 ರಂದು ರಾಜ್ಯ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 27 ರಂದು ಪತ್ರಿಕೆಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 29 ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 55,74,793 ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

Published On - 9:15 pm, Tue, 18 October 22