ಡಿ. 8ಕ್ಕೆ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ; ಕಾಂಗ್ರೆಸ್​ಗೆ ಆಪರೇಷನ್ ಕಮಲದ ಭೀತಿ

HP Assembly Election Results: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರಕ್ಕೆ ಹೆದರಿರುವ ಕಾಂಗ್ರೆಸ್ ತನ್ನ ಶಾಸಕರನ್ನು ಛತ್ತೀಸ್‌ಗಢಕ್ಕೆ ಕರೆದೊಯ್ಯುವ ಪ್ಲಾನ್ ಮಾಡಿದೆ.

ಡಿ. 8ಕ್ಕೆ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ; ಕಾಂಗ್ರೆಸ್​ಗೆ ಆಪರೇಷನ್ ಕಮಲದ ಭೀತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 26, 2022 | 1:11 PM

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ (Himachal Pradesh Elections 2022) ಮತದಾನ ಅಂತ್ಯವಾಗಿದೆ. ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿದೆ. ಈ ಮಧ್ಯೆ ಕಾಂಗ್ರೆಸ್​ಗೆ (Congress) ತನ್ನ ಶಾಸಕರನ್ನು ಕಳೆದುಕೊಳ್ಳುವ ಅಭದ್ರತೆ ಕಾಡುತ್ತಿದೆ. ಈ ಬಾರಿ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ ನಡುವೆ ನೇರಾನೇರ ಫೈಟ್ ನಡೆದಿದೆ. ಯಾವುದೇ ಪಕ್ಷ ಗೆದ್ದರೂ ಅಂಚಿನ ಗೆಲುವಾಗಿರಲಿದೆ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ. ಹೀಗಾಗಿ, ಆಪರೇಷನ್ ಕಮಲದ‌ ಮೂಲಕ ಶಾಸಕರ ಖರೀದಿ ನಡೆಯಬಹುದು ಎನ್ನುವ ಆತಂಕದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೇರೆಡೆ ಶಿಫ್ಟ್ ಮಾಡಲು ಈಗಾಗಲೇ ಹೈಕಮಾಂಡ್ ಸೂಚನೆ ನೀಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರಕ್ಕೆ ಹೆದರಿರುವ ಕಾಂಗ್ರೆಸ್ ತನ್ನ ಶಾಸಕರನ್ನು ಛತ್ತೀಸ್‌ಗಢಕ್ಕೆ ಕರೆದೊಯ್ಯುವ ಪ್ಲಾನ್ ಮಾಡಿದೆ. ಡಿಸೆಂಬರ್ 8ರಂದು ನಡೆಯುವ ಮತ ಎಣಿಕೆಯ ನಂತರ ಸ್ಪಷ್ಟ ಬಹುಮತ ಸಿಗದೆ ಇದ್ದರೆ ಎನ್ನುವ ಆತಂಕದಲ್ಲಿ ಹೈಕಮಾಂಡ್ ಕಾರ್ಯೋನ್ಮುಖವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರು ಡಿಸೆಂಬರ್ 7ರಂದು ಹಿಮಾಚಲ ಪ್ರದೇಶದಲ್ಲಿ ಬೀಡು ಬಿಡಲು ಸಿದ್ಧತೆ ನಡೆಸಿದ್ದಾರೆ. ಅಭ್ಯರ್ಥಿಗಳ ರಕ್ಷಿಸುವ ಹೊಣೆಯನ್ನು ರಾಜ್ಯ ಚುನಾವಣಾ ಮೇಲ್ವಿಚಾರಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೊತ್ತಿದ್ದಾರೆ.

ಇದನ್ನೂ ಓದಿ: HP Assembly Elections 2022: ಹಿಮಾಚಲ ಪ್ರದೇಶದಲ್ಲಿ ಮತದಾನ; 2ನೇ ಬಾರಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಕಾಂಗ್ರೆಸ್‌ನ ಕೇಂದ್ರ ಮತ್ತು ರಾಜ್ಯ ನಾಯಕರು ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಗೋವಾ ಮತ್ತು ಮಹಾರಾಷ್ಟ್ರದ ಉದಾಹರಣೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕರು ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಅದೇ ಭಯ ಈಗ ಹಿಮಾಚಲದಲ್ಲೂ ಕಾಂಗ್ರೆಸ್ ಪಕ್ಷದ ನಾಯಕರನ್ನು ಕಾಡಲಾರಂಭಿಸಿದೆ.

ಈ ಬಾರಿ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಹಲವು ಬಂಡಾಯಗಾರರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದಾರೆ. ಅನೇಕ ಸ್ವತಂತ್ರ ಅಭ್ಯರ್ಥಿಗಳು ಪ್ರಬಲವಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೆ ಸರ್ಕಾರ ರಚನೆಗೆ ಮೈತ್ರಿ ರಾಜಕಾರಣ ಶುರುವಾಗಲಿದೆ. ಇದರಿಂದ ಭಯಗೊಂಡಿರುವ ಕಾಂಗ್ರೆಸ್ ಈಗಲೇ ಮುಂಬರುವ ಯೋಜನೆಗೆ ಚಾಲನೆ ನೀಡಿದೆ. ಸ್ಪಷ್ಟ ಬಹುಮತ ಸಿಗದಿದ್ದಲ್ಲಿ ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸಲು ಛತ್ತೀಸ್‌ಗಢ ಅತ್ಯಂತ ಸುರಕ್ಷಿತ ಸ್ಥಳವಾಗಿದೆಬೆಂದು ಹೈಕಮಾಂಡ್ ಅರಿತಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ಫೈಟ್ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಹಿಮಾಚಲದ ಶಾಸಕರನ್ನು ರಾಜಸ್ಥಾನಕ್ಕೆ ಕರೆದುಕೊಂಡು ಹೋಗಲು ಹೈಕಮಾಂಡ್ ಒಪ್ಪಿಲ್ಲ.

ಇದನ್ನೂ ಓದಿ: HP Assembly Elections 2022: ಹಿಮಾಚಲ ಪ್ರದೇಶ ಚುನಾವಣೆ; ಮತಯಂತ್ರ ಸೇರಿತು 412 ಅಭ್ಯರ್ಥಿಗಳ ಭವಿಷ್ಯ

ಈ ಹಿಂದೆ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಾಜೀವ್ ಶುಕ್ಲಾ ಅವರು ಎಲ್ಲಾ ಅಭ್ಯರ್ಥಿಗಳೊಂದಿಗೆ ಆನ್‌ಲೈನ್ ಸಭೆಯಲ್ಲಿ ಕುದುರೆ ವ್ಯಾಪಾರದ ಬಗ್ಗೆ ಚರ್ಚಿಸಿದ್ದರು. ಬಿಜೆಪಿ ಹಿಮಾಚಲದಲ್ಲಿ ಸರ್ಕಾರ ರಚಿಸಲು ಎಲ್ಲಾ ತಂತ್ರಗಳನ್ನು ಅನುಸರಿಸಬಹುದು ಎಂದು‌ ಶುಕ್ಲಾ ತಮ್ಮ ಎಲ್ಲಾ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

(ವರದಿ: ಹರೀಶ್, ನವದೆಹಲಿ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ