AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Elections: ಕಾಂಗ್ರೆಸ್​ಗೆ ಹಿನ್ನಡೆ; ಮತದಾನಕ್ಕೆ ಕೆಲವೇ ದಿನಗಳಿರುವಾಗ ಬಿಜೆಪಿ ಸೇರಿದ 26 ಕಾಂಗ್ರೆಸ್ ನಾಯಕರು

ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

Himachal Pradesh Elections: ಕಾಂಗ್ರೆಸ್​ಗೆ ಹಿನ್ನಡೆ; ಮತದಾನಕ್ಕೆ ಕೆಲವೇ ದಿನಗಳಿರುವಾಗ ಬಿಜೆಪಿ ಸೇರಿದ 26 ಕಾಂಗ್ರೆಸ್ ನಾಯಕರು
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್ ನಾಯಕರು
TV9 Web
| Edited By: |

Updated on:Nov 08, 2022 | 9:05 AM

Share

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ (Assembly elections in Himachal Pradesh) ಭರದ ಸಿದ್ಧತೆ ನಡೆಯುತ್ತಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ಹಲವು ಭರವಸೆಗಳನ್ನು ಘೋಷಿಸುತ್ತಿವೆ. ಈ ನಡುವೆ ಪಕ್ಷಾಂತರ ಪರ್ವವೂ ಆರಂಭವಾಗಿದ್ದು, ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರಾದ ಧರ್ಮಪಾಲ್ ಠಾಕೂರ್ ಖಂಡ್ (Dharampal Thakur Khand) ಬಿಜೆಪಿಗೆ ಸೇರಿದ್ದಾರೆ. ಖಂಡ್ ಅವರು ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.

ಧರ್ಮಪಾಲ್ ಠಾಕೂರ್ ಖಂಡ್ ಅವರೊಂದಿಗೆ 26 ಇತರ ನಾಯಕರು ಸಹ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮತದಾನಕ್ಕೆ ಕೇವಲ ನಾಲ್ಕು ದಿನ ಬಾಕಿಯಿದೆ. ಕೊನೆಯ ಹಂತದಲ್ಲಿ ನಡೆದಿರುವ ಈ ಬೆಳವಣಿಗೆಯು ಬಿಜೆಪಿಗೆ ಪೂರಕವಾಗಿದ್ದರೆ ಕಾಂಗ್ರೆಸ್​ಗೆ ಆಘಾತಕಾರಿಯಾಗಿದೆ.

ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯ ಉಸ್ತುವಾರಿ ಸುಧಾಮ್ ಸಿಂಗ್ ಸಿಂಗ್ ಸಮಕ್ಷಮದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾದರು. ಶಿಮ್ಲಾ ಕ್ಷೇತ್ರದ ಬಿಜೆಪಿ ಉಮೇದುವಾರ ಸಂಜಯ್ ಸೂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಮುಖ್ಯಮಂತ್ರಿ ಜಯರಾಮ್ ಠಾಕೂರ್ ಬಿಜೆಪಿಗೆ ಸ್ವಾಗತಿಸಿದರು. ‘ಎಲ್ಲರೂ ಜೊತೆಗೂಡಿ ಕೆಲಸ ಮಾಡೋಣ. ಬಿಜೆಪಿಯನ್ನು ಐತಿಹಾಸಿಕ ವಿಜಯದೊಂದಿಗೆ ಮತ್ತೆ ಅಧಿಕಾರಕ್ಕೆ ತರೋಣ’ ಎಂದು ಅವರು ಕರೆ ನೀಡಿದರು. ಇದಕ್ಕೂ ಮೊದಲು ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಗೆಲುವಿನ ಬಗ್ಗೆ ತಮಗೆ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ‘ಹಿಮಾಚಲ ಪ್ರದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಂಬುತ್ತಾರೆ’ ಎಂದು ನಡ್ಡಾ ಹೇಳಿದ್ದರು.

ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

Published On - 9:05 am, Tue, 8 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ