Himachal Pradesh Election Result 2022: ಸೆರಾಜ್ ಕ್ಷೇತ್ರದಿಂದ ಹಾಲಿ ಸಿಎಂ ಜೈರಾಮ್ ಠಾಕೂರ್ ಗೆಲುವು

ಜೈರಾಮ್ ಠಾಕೂರ್ ಅವರು ತಮ್ಮ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಸೆರಾಜ್‌ನಿಂದ ಸತತ ಆರನೇ ಬಾರಿಗೆ 20,000 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.

Himachal Pradesh Election Result 2022: ಸೆರಾಜ್ ಕ್ಷೇತ್ರದಿಂದ ಹಾಲಿ ಸಿಎಂ ಜೈರಾಮ್ ಠಾಕೂರ್ ಗೆಲುವು
ಜೈರಾಮ್ ಠಾಕೂರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 08, 2022 | 12:50 PM

ಹಿಮಾಚಲ ಪ್ರದೇಶ(Himachal Pradesh) ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ (Jairam Thakur) ಭಾರಿ ಗೆಲುವು ದಾಖಲಿಸಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ, ಜೈರಾಮ್ ಠಾಕೂರ್ ಅವರು ತಮ್ಮ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಸೆರಾಜ್‌ನಿಂದ(Seraj) ಸತತ ಆರನೇ ಬಾರಿಗೆ 20,000 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತದ ಗಡಿ ದಾಟಿದೆ. ಇಲ್ಲಿಯವರೆಗಿನ ಟ್ರೆಂಡ್‌ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಿಕಟ ಸ್ಪರ್ಧೆ ದಾಖಲಾಗಿದೆ. ಕಾಂಗ್ರೆಸ್ ಪಕ್ಷವು 68 ಸ್ಥಾನಗಳಲ್ಲಿ 38 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸೋಮವಾರ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಾಗ  ಜನರು ಎಣಿಕೆ ದಿನದವರೆಗೆ ಕಾಯಬೇಕು ಎಂದು ಠಾಕೂರ್ ಹೇಳಿದ್ದಾರೆ. “ಹಿಮಾಚಲದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸುತ್ತಿದೆ ಎಂದು ಹಲವಾರು ಎಕ್ಸಿಟ್ ಪೋಲ್‌ಗಳು ತೋರಿಸಿವೆ. ಆದರೆ ಕೆಲವು ಭಾಗಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿ ಕಂಡುಬರಲಿದೆ ಎಂದು ಕೆಲವರು ಹೇಳಿದ್ದಾರೆ. ಅಂತಿಮ ಫಲಿತಾಂಶಕ್ಕಾಗಿ ನಾವು ಡಿಸೆಂಬರ್ 8 ರವರೆಗೆ ಕಾಯಬೇಕು. ನಮ್ಮ ವಿಶ್ಲೇಷಣೆಯ ಪ್ರಕಾರ, ಅಲ್ಲಿ ಸರಳ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಉತ್ತಮ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

57ರ ಹರೆಯದ ಠಾಕೂರ್ 1998 ರಿಂದ ಸೆರಾಜ್‌ನಲ್ಲಿ ಗೆಲ್ಲುತ್ತಿದ್ದು ಐದು ಬಾರಿ ಶಾಸಕರಾಗಿದ್ದಾರೆ.ಸೆರಾಜ್  ಕ್ಷೇತ್ರವನ್ನು  ಮೊದಲು ಚಾಚಿಯೋಟ್ ಎಂದು ಕರೆಯಲಾಗುತ್ತಿತ್ತು.

ಅಕ್ಟೋಬರ್‌ನಲ್ಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಅವರು ಮತ್ತೊಮ್ಮೆ ತಮ್ಮನ್ನು ಆಯ್ಕೆ ಮಾಡುವಂತೆ ಮತದಾರರಲ್ಲಿ ಬೇಡಿದ್ದರು. 1993 ರಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದನ್ನು ನೆನಪಿಸಿಕೊಂಡ ಅವರು ನಾನು 1993 ರ ಚುನಾವಣೆಗೆ ಸ್ಪರ್ಧಿಸಿದಾಗ, 60 ಮತಗಟ್ಟೆಗಳಲ್ಲಿ ಕೇವಲ ಒಬ್ಬರು ಅಥವಾ ಇಬ್ಬರು ಪಕ್ಷದ ಕಾರ್ಯಕರ್ತರು ಇದ್ದರು. ಕೆಲವು ಬೂತ್‌ಗಳಲ್ಲಿ ಯಾರೂ ಇರಲಿಲ್ಲ. ಏರುವಾಗ ಸುಸ್ತಾಗಿ, ನಿಲ್ಲಿಸಿದೆವು, ಕುಳಿತೆವು ಆದರೆ ಮತ್ತೆ ಶುರುಮಾಡಿದೆವು ಎಂಬುದಕ್ಕೆ ಸೆರಾಜ್ ನ ಬೆಟ್ಟಗಳೇ ಸಾಕ್ಷಿ. ಆ ಕಾಲದ ಅನೇಕ ಸಹಚರರಿಗೆ ವಯಸ್ಸಾಗಿದೆ ಆದರೆ ಇನ್ನೂ ನನ್ನ ಹಿಂದೆ ಅವರು ಬಂಡೆಯಂತೆ ನಿಂತಿದ್ದಾರೆ ಎಂದಿದ್ದರು. ಈ ವರ್ಷದ ಆರಂಭದಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ತಮ್ಮ ತವರು ನೆಲದಲ್ಲಿ ₹59 ಕೋಟಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಿದ್ದರು.

ಇದನ್ನೂ ಓದಿ
Image
Gujarat Election Results: ಗುಜರಾತ್​​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಲು ಬಿಜೆಪಿ ಸಜ್ಜು; ಡೋಲು ಬಾರಿಸಿ, ನೃತ್ಯ ಮಾಡಿ ಕಾರ್ಯಕರ್ತರ ಸಂಭ್ರಮಾಚರಣೆ
Image
Assembly Elections 2022: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಬಿಜೆಪಿ
Image
Himachal Pradesh Exit Poll 2022: ಸರ್ವೆಯಲ್ಲಿ ಬಹುತೇಕ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ

ಅವರ ವಿರುದ್ಧ ಕಾಂಗ್ರೆಸ್‌ನ ಚೇತ್ರಂ ಠಾಕೂರ್ ಸ್ಪರ್ಧಿಸಿದ್ದಾರೆ. ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12 ರಂದು ಮತದಾನ ನಡೆದಿತ್ತು. 2017ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಗೆದ್ದಿತ್ತು.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Thu, 8 December 22

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್