HP Assembly Elections 2022: ಮತದಾನದಲ್ಲಿ ಹೊಸ ದಾಖಲೆ ಸೃಷ್ಟಿಸಿ; ಹಿಮಾಚಲ ಪ್ರದೇಶದ ಜನರಿಗೆ ಮೋದಿ ಮನವಿ
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು 55 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಇಂದು ವಿಧಾನಸಭಾ ಚುನಾವಣೆ (Himachal Pradesh Elections 2022) ನಡೆಯುತ್ತಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಮತದಾರರಿಗೆ ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇಂದು ಮೊದಲ ಬಾರಿಗೆ ಮತದಾನ ಮಾಡಲಿರುವ ಯುವ ಮತದಾರರಿಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.
“ಇಂದು ಹಿಮಾಚಲ ಪ್ರದೇಶದ ಎಲ್ಲಾ ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ದೇವಭೂಮಿಯ ಎಲ್ಲಾ ಮತದಾರರು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ ಉತ್ಸಾಹದಿಂದ ಭಾಗವಹಿಸಲು ಮತ್ತು ಮತದಾನದ ಹೊಸ ದಾಖಲೆಯನ್ನು ಸೃಷ್ಟಿಸಲು ನಾನು ವಿನಂತಿಸುತ್ತೇನೆ” ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
हिमाचल प्रदेश की सभी विधानसभा सीटों के लिए आज मतदान का दिन है। देवभूमि के समस्त मतदाताओं से मेरा निवेदन है कि वे लोकतंत्र के इस उत्सव में पूरे उत्साह के साथ भाग लें और वोटिंग का नया रिकॉर्ड बनाएं। इस अवसर पर पहली बार वोट देने वाले राज्य के सभी युवाओं को मेरी विशेष शुभकामनाएं।
— Narendra Modi (@narendramodi) November 12, 2022
ಇಂದು ಪ್ರಥಮ ಬಾರಿಗೆ ಮತದಾನ ಮಾಡಲಿರುವ ರಾಜ್ಯದ ಎಲ್ಲಾ ಯುವ ಜನತೆಗೆ ನನ್ನ ವಿಶೇಷ ಶುಭಾಶಯಗಳು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: HP Assembly Elections 2022: ಹಿಮಾಚಲ ಪ್ರದೇಶದಲ್ಲಿ ಇಂದು ವಿಧಾನಸಭಾ ಚುನಾವಣೆ; ಮತದಾನ ಆರಂಭ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಮಾಚಲ ಪ್ರದೇಶದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ “ಬಲಿಷ್ಟ ಸರ್ಕಾರ”ವನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶವನ್ನು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿಡುವ ಮೂಲಕ ದೇವಭೂಮಿಯ ಜನರ ಆಕಾಂಕ್ಷೆಗಳನ್ನು ಬಲಿಷ್ಠ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮಾತ್ರ ಈಡೇರಿಸಬಲ್ಲದು. ನಾನು ಹಿಮಾಚಲದ ಮತದಾರರಿಗೆ, ವಿಶೇಷವಾಗಿ ತಾಯಂದಿರು, ಸಹೋದರಿಯರು ಮತ್ತು ಯುವಜನರಿಗೆ ಬಲಶಾಲಿ ಸರ್ಕಾರವನ್ನು ಆಯ್ಕೆ ಮಾಡುವಂತೆ ಮನವಿ ಮಾಡುತ್ತೇನೆ. ರಾಜ್ಯದ ಸುವರ್ಣ ಭವಿಷ್ಯಕ್ಕಾಗಿ ಗರಿಷ್ಠ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಅಮಿತ್ ಶಾ ಹೇಳಿದ್ದಾರೆ.
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು 55 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:23 am, Sat, 12 November 22