Himachal Pradesh Result 2022: ಹಿಮಾಚಲ ಪ್ರದೇಶದಲ್ಲಿ ಬಿಜೆಪಿ-ಕಾಂಗ್ರೆಸ್​ಗೆ ಪಕ್ಷೇತರರ ಕಂಟಕ

ಪಕ್ಷೇತರರು ಸಾಕಷ್ಟು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಮತಬುಟ್ಟಿಗೆ ಕೈಹಾಕಿರುವುದು ಮತಎಣಿಕೆ ಮುಂದುವರಿದಂತೆ ಸ್ಪಷ್ಟವಾಗುತ್ತಿದೆ.

Himachal Pradesh Result 2022: ಹಿಮಾಚಲ ಪ್ರದೇಶದಲ್ಲಿ ಬಿಜೆಪಿ-ಕಾಂಗ್ರೆಸ್​ಗೆ ಪಕ್ಷೇತರರ ಕಂಟಕ
ಬಿಜೆಪಿ ಮತ್ತು ಕಾಂಗ್ರೆಸ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 08, 2022 | 10:45 AM

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸಮಬಲದ ಪೈಪೋಟಿಯಲ್ಲಿದ್ದು, ಎರಡೂ ಪಕ್ಷಗಳ ನಡುವಣ ಅಂತರ ಐದಕ್ಕಿಂತಲೂ ಕಡಿಮೆಯಿದೆ. ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚನೆ ವೇಳೆ ಪಕ್ಷೇತರರೇ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಕಂಡುಬರುತ್ತಿದೆ. ಬೆಳಿಗ್ಗೆ 10:45ರ ವೇಳೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 33, ಕಾಂಗ್ರೆಸ್ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಆರಂಭದಲ್ಲಿ ಕಾಂಗ್ರೆಸ್​ 35 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.

ಸುಮಾರು 5 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಬಹುದು ಎಂದು ಹೇಳಲಾಗುತ್ತಿದೆ. ಆರಂಭದಲ್ಲಿ ಬಿಜೆಪಿಯು 20 ಕ್ಷೇತ್ರಗಳಲ್ಲಿ ಗೆಲುವು ನಿಚ್ಚಳ ಎಂದು ಹೇಳಿಕೊಂಡಿತ್ತು. ಕಾಂಗ್ರೆಸ್ ಪಕ್ಷವು ತಾನು 40ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿ, ನಿಚ್ಚಳ ಬಹುಮತ ಪಡೆಯುವುದಾಗಿ ಭರವಸೆ ವ್ಯಕ್ತಪಡಿಸಿತ್ತು. ಆದರೆ ಪಕ್ಷೇತರರು ಸಾಕಷ್ಟು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಮತಬುಟ್ಟಿಗೆ ಕೈಹಾಕಿರುವುದು ಮತಎಣಿಕೆ ಮುಂದುವರಿದಂತೆ ಸ್ಪಷ್ಟವಾಗುತ್ತಿದೆ. ಇನ್ನು ಗೆಲುವು ಘೋಷಣೆಯಾಗದೆ, ಆದರೆ ಗೆಲುವು ಖಾತ್ರಿ ಎನಿಸಿರುವ ಅಭ್ಯರ್ಥಿಗಳನ್ನು ಬಿಜೆಪಿಯು ಈಗಾಗಲೇ ಸಂಪರ್ಕಿಸುತ್ತಿದೆ ಎಂದು ಕಾಂಗ್ರೆಸ್ ದೂರಿದೆ.

ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಹೈಜಾಕ್ ಮಾಡಬಹುದು ಎಂಬ ಭೀತಿಯಲ್ಲಿರುವ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳು ರೆಸಾರ್ಟ್​ಗೆ ಕಳುಹಿಸಿಕೊಟ್ಟಿದೆ. ಹಿಮಾಚಲ ಪ್ರದೇಶದಲ್ಲಿ ನಿಚ್ಚಳ ಬಹುಮತ ಸಾಧ್ಯವಾಗದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತುರ್ತು ಸಭೆ ನಡೆಸಿ, ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಅಧಿಕಾರಕ್ಕೆ ಬರಲು ಯಾವುದೇ ಪಕ್ಷಕ್ಕೆ 35 ಸದಸ್ಯ ಬಲ ಅಗತ್ಯವಿದೆ.

ಗುಜರಾತ್​ನಲ್ಲಿ ಕಾಂಗ್ರೆಸ್ ಹಿನ್ನಡೆಗೆ ಆಪ್ ಕೂಡ ಕಾರಣ

ಗುಜರಾತ್​ನಲ್ಲಿ ಕಾಂಗ್ರೆಸ್ ಪಕ್ಷವು ಈ ಬಾರಿ ಅಧಿಕಾರದ ಸನಿಹಕ್ಕೆ ಸುಳಿಯುವುದಿಲ್ಲ ಎನ್ನುವುದು ಸೂರ್ಯ ನೆತ್ತಿಗೇರಿದಂತೆ ಸ್ಪಷ್ಟವಾಗುತ್ತಿದೆ. ಇದಕ್ಕೆ ಕಾರಣಗಳೇನಿರಬಹುದು ಎಂಬ ವಿಶ್ಲೇಷಣೆಗಳೂ ಈಗಾಗಲೇ ಆರಂಭವಾಗಿದೆ. ಗುಜರಾತ್​ನಲ್ಲಿ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್​ಗೆ ಮಾರಕ ಹೊಡೆತ ನೀಡಿದೆ. ಪಾಟಿದಾರ್ ಸಮುದಾಯವು ನಿರ್ಣಾಯಕ ಸಂಖ್ಯೆಯಲ್ಲಿರುವ ಜೆಟ್​ಪುರ್, ಧೊರಜಿ, ಕಮ್​ರೇಜ್, ಕರ್ಣ್​ರಾಜ್ ಮತ್ತು ನಿಕೋಲ್ ಕ್ಷೇತ್ರಗಳಲ್ಲಿ ಆಪ್ ಮುನ್ನಡೆ ಸಾಧಿಸಿದೆ. ವೀರಗ್ರಾಮ್ ಕ್ಷೇತ್ರದಲ್ಲಿ ಆಪ್​ನ ಅಮರ್​ಸಿನ್ಹಾ ಠಾಕೂರ್ ಎದುರು ಬಿಜೆಪಿಯ ಹಾರ್ದಿಕ್ ಪಟೇಲ್ ಅಲ್ಪ ಮತಗಳ ಮುನ್ನಡೆ ಸಾಧಿಸಿದ್ದಾರೆ.

Published On - 10:44 am, Thu, 8 December 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ