ಭರವಸೆ ಈಡೇರಿಸಲಾಗುವುದು: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ನಂತರ ರಾಹುಲ್ ಗಾಂಧಿ ಭರವಸೆ

ಕಾಂಗ್ರೆಸ್ ಗುಜರಾತ್ ಜನರ ಆದೇಶವನ್ನು "ವಿನಮ್ರವಾಗಿ ಸ್ವೀಕರಿಸುತ್ತದೆ" ಎಂದು ರಾಹುಲ್ ಹೇಳಿದ್ದಾರೆ. "ನಾವು ಪುನರ್ರಚನೆ ಮಾಡುತ್ತೇವೆ, ಶ್ರಮಿಸುತ್ತೇವೆ. ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.

ಭರವಸೆ ಈಡೇರಿಸಲಾಗುವುದು: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ನಂತರ ರಾಹುಲ್ ಗಾಂಧಿ ಭರವಸೆ
ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 08, 2022 | 7:44 PM

ತಮ್ಮ ಪಕ್ಷಕ್ಕೆ ನಿರ್ಣಾಯಕ ಜನಾದೇಶ ನೀಡಿದ ಹಿಮಾಚಲ ಪ್ರದೇಶದ(Himachal Pradesh) ಜನತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)ಗುರುವಾರ ಧನ್ಯವಾದ ಅರ್ಪಿಸಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಎಲ್ಲಾ ಚುನಾವಣೆಯ ಭರವಸೆಗಳನ್ನು ಈಡೇರಿಸುತ್ತದೆ ಎಂದು ಅವರು ಹೇಳಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಇದುವರೆಗೆ 32 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪ್ರಸ್ತುತ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ ಇತ್ತೀಚಿನ ಅಂಕಿಅಂಶಗಳು ತಿಳಿಸಿವೆ. ಅರ್ಕಿ, ಬೈಜನಾಥ್, ಬರ್ಸರ್, ಭಟ್ಟಿಯತ್, ಚಂಬಾ, ಚಿಂತ್‌ಪೂರ್ಣಿ, ಧರ್ಮಪುರ್, ಧರ್ಮಶಾಲಾ, ಡೂನ್, ಫತೇಪುರ್, ಗ್ಯಾಗ್ರೆಟ್, ಘುಮರ್ವಿನ್, ಹರೋಲಿ, ಇಂದೋರಾ, ಜೈಸಿಂಗ್‌ಪುರ, ಜವಾಲಾಮುಖಿ, ಜವಾಲಿ, ಜುಬ್ಬಲ್-ಕೋಟ್‌ಖೈ, ಕಸೌಲಿ, ಕೊತ್ತಿಖಾಯ್, ಕಸುಲಿ, ಕಿನ್ನಾ ಕುಲು, ಕುಟ್ಲೆಹರ್, ಲಾಹೌಲ್ ಮತ್ತು ಸ್ಪಿತಿ, ಮನಾಲಿ, ನಗ್ರೋಟಾ, ನಹಾನ್, ಪಾಲಂಪುರ್, ರಾಂಪುರ್, ರೋಹ್ರು, ಶಾಹಪುರ್, ಶಿಲ್ಲೈ, ಶಿಮ್ಲಾ, ಶಿಮ್ಲಾ ಗ್ರಾಮಾಂತರ, ಸೋಲನ್, ಶ್ರೀ ರೇಣುಕಾಜಿ, ಸುಜಾನ್‌ಪುರ್ ಮತ್ತು ಥಿಯೋಗ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ನಾದೌನ್‌ನಲ್ಲಿ ಮುನ್ನಡೆ ಸಾಧಿಸುತ್ತಿದೆ. ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಒಟ್ಟು 40 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ.

ಕಾಂಗ್ರೆಸ್ ಗುಜರಾತ್ ಜನರ ಆದೇಶವನ್ನು “ವಿನಮ್ರವಾಗಿ ಸ್ವೀಕರಿಸುತ್ತದೆ” ಎಂದು ರಾಹುಲ್ ಹೇಳಿದ್ದಾರೆ. “ನಾವು ಪುನರ್ರಚನೆ ಮಾಡುತ್ತೇವೆ, ಶ್ರಮಿಸುತ್ತೇವೆ. ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶದಲ್ಲಿ ಪಕ್ಷದ ಗೆಲುವಿಗೆ ಕಾರಣ ರಾಹುಲ್ ಗಾಂಧಿ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.”ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ ಕೂಡ ನಮಗೆ ಸಹಾಯ ಮಾಡಿದೆ” ಎಂದು  ಖರ್ಗೆ ಹೇಳಿದ್ದಾರೆ.ಹಿಮಾಚಲದಲ್ಲಿ  ರಾಹುಲ್ ಗಾಂಧಿ ಪ್ರಚಾರ ಮಾಡಲಿಲ್ಲ. ಆದರೆ  ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಿಮಾಚಲದಾದ್ಯಂತ ಹುರುಪಿನಿಂದ ಪ್ರಚಾರ ಮಾಡಿದ್ದಾರೆ. ಪ್ರಿಯಾಂಕಾ  ಗಾಂಧಿ ಅವರಿಗೆ ಧನ್ಯವಾದ ಸಲ್ಲಿಸಿದ ಖರ್ಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಶೀರ್ವಾದವೂ ನಮ್ಮೊಂದಿಗಿದೆ ಎಂದು ಅವರು ಹೇಳಿದರು.

“ಜನರಿಗೆ, ನಮ್ಮ ಕಾರ್ಯಕರ್ತರು ಮತ್ತು ನಾಯಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅವರ ಪ್ರಯತ್ನದಿಂದಾಗಿ ಈ ಫಲಿತಾಂಶ ಬಂದಿದೆ” ಎಂದು ಖರ್ಗೆ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ