ಚಾಮರಾಜನಗರದಿಂದ ಸ್ಪರ್ಧಿಸುತ್ತಾರಾ ಸೋಮಣ್ಣ: ಸ್ವಪಕ್ಷದ ಕಾರ್ಯಕರ್ತರಿಂದಲೇ ವಸತಿ ಸಚಿವರಿಗೆ ಗೋಬ್ಯಾಕ್ ಚಳುವಳಿ ಎಚ್ಚರಿಕೆ

ಸೋಮಣ್ಣ ಅವರಿಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಕೊಡಬಾರದು. ಸೋಮಣ್ಣ ಅವರಿಗೆ ಉಸ್ತುವಾರಿ ಕೊಟ್ಟರೆ ಗೋಬ್ಯಾಕ್ ಚಳವಳಿ ಮಾಡುತ್ತೇವೆ. ವಿ.ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಊಹಾಪೋಹವಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಸೋಮಣ್ಣರನ್ನು ಕಣಕ್ಕಿಳಿಸಬಾರದು. ಕಳೆದ ಬಾರಿ ಚುನಾವಣೆಯಲ್ಲಿ ಸೋಮಣ್ಣ ಪಕ್ಷದ ಪರ ಕೆಲಸ‌ ಮಾಡಿಲ್ಲ ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಹೇಳಿದ್ದಾರೆ.

ಚಾಮರಾಜನಗರದಿಂದ ಸ್ಪರ್ಧಿಸುತ್ತಾರಾ ಸೋಮಣ್ಣ: ಸ್ವಪಕ್ಷದ ಕಾರ್ಯಕರ್ತರಿಂದಲೇ ವಸತಿ ಸಚಿವರಿಗೆ ಗೋಬ್ಯಾಕ್ ಚಳುವಳಿ ಎಚ್ಚರಿಕೆ
ವಸತಿ ಸಚಿವ ವಿ ಸೋಮಣ್ಣ

Updated on: Mar 21, 2023 | 2:54 PM

ಚಾಮರಾಜನಗರ: ವಸತಿ ಸಚಿವ ವಿ. ಸೋಮಣ್ಣ (V Somanna) ಬಿಜೆಪಿ (BJP) ತೊರೆದು ಕಾಂಗ್ರೆಸ್​ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇದಕ್ಕೆ ಸೋಮಣ್ಣ ಸ್ಪಷ್ಟನೆ ನೀಡುತ್ತಲೇ ಇದ್ದಾರೆ. ಆದರೆ ಈಗ ಮೊತ್ತೊಂದು ಅಲೆ ಎದ್ದಿದ್ದು, ಸೋಮಣ್ಣ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಬಿಟ್ಟು ಚಾಮರಾಜನಗರದಿಂದ (Chamarajanagar) ಸ್ಪರ್ಧಿಸುತ್ತಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಹೌದು ಬೆಂಗಳೂರಲ್ಲಿ (Bengaluru) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿ.ಸೋಮಣ್ಣ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿದರು. ವರುಣಾದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ದ ನೀವು ಸ್ಪರ್ಧೆ ಮಾಡ್ತಿರಾ ಎಂಬ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನನ್ನನ್ನು ಯಾಕೆ ವರುಣಾಗೆ ತಂದು ಹಾಕ್ತೀರಿ? ಆ ರೀತಿಯ ಗೊಂದಲಗಳು ಬೇಡ. ನಮ್ಮ ಪಕ್ಷದಲ್ಲಿ ಸಾಕಷ್ಟು ಅಭ್ಯರ್ಥಿಗಳು ಇದ್ದಾರೆ. ಸಿದ್ದರಾಮಯ್ಯ ವಿರುದ್ಧ ತಕ್ಕ ಅಭ್ಯರ್ಥಿಯನ್ನು ನಮ್ಮ ಪಾರ್ಟಿ ಹಾಕುತ್ತದೆ ಎಂದು ಹೇಳಿದರು.

ಸೋಮಣ್ಣಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಕೊಡಬಾರದು

ಇನ್ನು ಸೋಮಣ್ಣಗೆ ಚಾಮರಾಜನಗರದಲ್ಲಿ ಸೆಟಲ್​ ಆಗುವಂತೆ ಬಿಜೆಪಿ ಹೈಕಮಾಂಡ ಸೂಚನೆ ನೀಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಸೋಮಣ್ಣ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ. ಸೋಮಣ್ಣ ಅವರಿಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಕೊಡಬಾರದು. ಸೋಮಣ್ಣ ಅವರಿಗೆ ಉಸ್ತುವಾರಿ ಕೊಟ್ಟರೆ ಗೋಬ್ಯಾಕ್ ಚಳವಳಿ ಮಾಡುತ್ತೇವೆ ಎಂದು ಸ್ವತಃ ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರಗಳಲ್ಲ; ಸಿಟಿ ರವಿ ಮತ್ತೆ ಕ್ಯಾತೆ

ಬಿ.ವೈ.ವಿಜಯೇಂದ್ರಗೆ ಹಳೇ ಮೈಸೂರು ಭಾಗದ ಉಸ್ತುವಾರಿ ನೀಡಬೇಕು. ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಊಹಾಪೋಹವಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಸೋಮಣ್ಣರನ್ನು ಕಣಕ್ಕಿಳಿಸಬಾರದು. ಕಳೆದ ಬಾರಿ ಚುನಾವಣೆಯಲ್ಲಿ ಸೋಮಣ್ಣ ಪಕ್ಷದ ಪರ ಕೆಲಸ‌ ಮಾಡಿಲ್ಲ. ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದ ಅಭ್ಯರ್ಥಿಗೆ ಮನೆಯನ್ನು ಗಿಫ್ಟ್ ಕೊಟ್ಟಿದ್ದಾರೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲೂ ಸೋಮಣ್ಣ ಪಕ್ಷದ ಪರ ಕೆಲಸ ಮಾಡಿಲ್ಲ. ಹಾಗಾಗಿ ಸಚಿವ ಸೋಮಣ್ಣ ಇಲ್ಲಿಂದ ಸ್ಪರ್ಧಿಸಲು ಅವಕಾಶ ನೀಡಬಾರದು. ಜಿಲ್ಲೆಗೆ ಸೋಮಣ್ಣ ಬೇಕು ಎಂದು ಹೇಳುವವರು ಕೆಲ ಬೆಂಬಲಿಗರು ಮಾತ್ರ. ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಲು ಬಿಡಲ್ಲ. ಅವರು ಜನ ಸಂಕಲ್ಪ ರಥಯಾತ್ರೆಯಲ್ಲೂ ಪಾಲ್ಗೊಳ್ಳಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ರೀತಿ ನಡೆದುಕೊಂಡಿದ್ದಾರೆ. ಪಕ್ಷದ ಅಧಿಕಾರದಲ್ಲಿರುವವರು ಸೋಮಣ್ಣ ಜಿಲ್ಲೆಗೆ ಬೇಡ ಎಂದು ಹೇಳುತ್ತಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ