PM Modi Speech ಮೊದಲ ಬಾರಿ ಮತದಾನ ಮಾಡಿದ ಮತದಾರರು ನಾಲ್ಕು ರಾಜ್ಯಗಳಲ್ಲಿ ಬಿಜೆಪಿಯ ಗೆಲುವನ್ನು ಖಚಿತಪಡಿಸಿದ್ದಾರೆ: ಮೋದಿ

PM Modi Speech Highlights "ನಾವು 2019 ರಲ್ಲಿ (ಕೇಂದ್ರದಲ್ಲಿ) ಸರ್ಕಾರವನ್ನು ರಚಿಸಿದಾಗ, 2017 ರ (ಉತ್ತರ ಪ್ರದೇಶದಲ್ಲಿ) ಗೆಲುವಿನಿಂದಾಗಿ ಇದು ಸಾಧ್ಯವಾಗಿದ್ದು ಎಂದು 'ತಜ್ಞರು' ಹೇಳಿದರು. 2022 ರ ಚುನಾವಣಾ ಫಲಿತಾಂಶವು  2024 ರ ಲೋಕಸಭಾ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅದೇ 'ತಜ್ಞರು' ಹೇಳುತ್ತಾರೆ ಎಂದು ನಾನು ನಂಬುತ್ತೇನೆ.

PM Modi Speech ಮೊದಲ ಬಾರಿ ಮತದಾನ ಮಾಡಿದ ಮತದಾರರು ನಾಲ್ಕು ರಾಜ್ಯಗಳಲ್ಲಿ ಬಿಜೆಪಿಯ ಗೆಲುವನ್ನು ಖಚಿತಪಡಿಸಿದ್ದಾರೆ: ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 10, 2022 | 9:33 PM

ದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷವು (BJP) ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಿಜೆಪಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಕಾರಣರಾಗಿದ್ದು ಮೊದಲ ಬಾರಿಗೆ ಮತದಾನ ಮಾಡಿದ ಮತದಾರರು ಎಂದು ಹೇಳಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮೊದಲ ಬಾರಿಗೆ ಮತದಾರರು ಚುನಾವಣೆಯಲ್ಲಿ ಭಾಗವಹಿಸಿ ಬಿಜೆಪಿಯ ಗೆಲುವನ್ನು ಖಚಿತಪಡಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ” ಎಂದು ಹೇಳಿದರು. “ಬಿಜೆಪಿ ಕಾರ್ಯಕರ್ತರು ಈ ವರ್ಷದ ಮಾರ್ಚ್ 10 ರಿಂದ ಹೋಳಿ ಪ್ರಾರಂಭವಾಗಲಿದೆ ಎಂದು ನನಗೆ ಭರವಸೆ ನೀಡಿದ್ದರು ಮತ್ತು ಅವರು ತಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಈ ಕಾರ್ಯಕರ್ತರು 24×7 ಕೆಲಸ ಮಾಡಿದರು. ಅವರು ರಾಜ್ಯಾದ್ಯಂತ ಜನರ ವಿಶ್ವಾಸವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಅವರು ಹೇಳಿದರು. ಈ ಗೆಲುವನ್ನು ಜೀತ್ ಕಾ ಚೌಕಾ ಎಂದು ಬಣ್ಣಿಸಿದ ಮೋದಿ “ಪ್ರಜಾಪ್ರಭುತ್ವದ ಹಬ್ಬ”ದಲ್ಲಿ ಭಾಗವಹಿಸಿದ್ದಕ್ಕಾಗಿ ಮತ್ತು ಬಿಜೆಪಿಯ ಈ ಗೆಲುವನ್ನು ಖಚಿತಪಡಿಸಿದ್ದಕ್ಕಾಗಿ ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಮಣಿಪುರ, ಉತ್ತರ ಪ್ರದೇಶ ಮತ್ತು ಗೋವಾದಲ್ಲಿ ಅಧಿಕಾರದಲ್ಲಿದ್ದರೂ ಬಿಜೆಪಿಯ ಮತಗಳಿಕೆ ಹೆಚ್ಚಿದೆ, ರಾಜ್ಯದಲ್ಲಿ ಬಿಜೆಪಿಯ ಸ್ಥಾನಗಳು ಹೆಚ್ಚಿವೆ ಎಂದು ಅವರು ಹೇಳಿದರು. ಗೋವಾದಲ್ಲಿ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪು ಎಂದು ಸಾಬೀತಾಗಿದೆ. ಗೋವಾದ ಜನರು ಬಿಜೆಪಿಗೆ ಸತತ ಮೂರನೇ ಬಾರಿಗೆ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿದ್ದಾರೆ. ಉತ್ತರಾಖಂಡದಲ್ಲೂ ಇತಿಹಾಸ ನಿರ್ಮಿಸಿದ್ದೇವೆ.ಪ್ರಥಮ ಬಾರಿಗೆ ಪಕ್ಷವೊಂದು ಸತತವಾಗಿ ಅಧಿಕಾರಕ್ಕೆ ಬಂದಿದೆ ಎಂದರು.

ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಲ್ಕು ರಾಜ್ಯಗಳಲ್ಲಿ ಅಧಿಕಾರವನ್ನು ಉಳಿಸಿಕೊಂಡಿರುವುದರಿಂದ, ಇಂದಿನ ಚುನಾವಣಾ ತೀರ್ಪು 2024 ರ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸಿದೆ ಎಂದು ತಜ್ಞರು ಹೇಳಲಿದ್ದಾರೆ ಎಂದು ಮೋದಿ ಟಾಂಗ್ ನೀಡಿದ್ದಾರೆ.

“ನಾವು 2019 ರಲ್ಲಿ (ಕೇಂದ್ರದಲ್ಲಿ) ಸರ್ಕಾರವನ್ನು ರಚಿಸಿದಾಗ, 2017 ರ (ಉತ್ತರ ಪ್ರದೇಶದಲ್ಲಿ) ಗೆಲುವಿನಿಂದಾಗಿ ಇದು ಸಾಧ್ಯವಾಗಿದ್ದು ಎಂದು ‘ತಜ್ಞರು’ ಹೇಳಿದರು. 2022 ರ ಚುನಾವಣಾ ಫಲಿತಾಂಶವು  2024 ರ ಲೋಕಸಭಾ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅದೇ ‘ತಜ್ಞರು’ ಹೇಳುತ್ತಾರೆ ಎಂದು ನಾನು ನಂಬುತ್ತೇನೆ. ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷವು ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ, ಬಿಜೆಪಿಯ ಬಡವರ ಪರ ಮತ್ತು ಸಕ್ರಿಯ ಆಡಳಿತವನ್ನು ಬಲವಾಗಿ ಸಮರ್ಥಿಸಿದ್ದೇ ಇದಕ್ಕೆ ಕಾರಣ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಹಿಂದೆ ವಿದ್ಯುತ್, ಅನಿಲ ಮತ್ತು ನೀರಿನಂತಹ ಮೂಲಭೂತ ಸೌಕರ್ಯಗಳಿಗಾಗಿ ಜನರು ಸರ್ಕಾರಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಬಡವರಿಗಾಗಿ ಹಲವಾರು ಘೋಷಣೆಗಳು ಮತ್ತು ಯೋಜನೆಗಳನ್ನು ಮಾಡಲಾಯಿತು, ಆದರೆ ಅಂತಹ ಯೋಜನೆಗಳ ಪ್ರಯೋಜನಗಳು ಅರ್ಹ ಮತ್ತು ಅಗತ್ಯವಿರುವ ಬಡವರಿಗೆ ತಲುಪಲಿಲ್ಲ.

ಉತ್ತಮ ಆಡಳಿತ ಮತ್ತು ಅಂತಹ ಯೋಜನೆಗಳ ವಿತರಣೆಯು ಬಹಳ ಮುಖ್ಯ ಎಂದು ಬಿಜೆಪಿ ಅರ್ಥಮಾಡಿಕೊಂಡಿದೆ ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ನಾವು ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.

ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಅಭೂತಪೂರ್ವ ಎರಡನೇ ಅವಧಿಗೆ ಬಿಜೆಪಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲು ಸಿದ್ಧವಾಗಿದೆ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ನಲ್ಲಿ ಐತಿಹಾಸಿಕ ವಿಜಯದ ಸಾಧಿಸಿದೆ.

ಇದನ್ನೂ ಓದಿPM Modi Address Live: ಬಿಜೆಪಿ ಪ್ರಚಂಡ ಗೆಲುವಿಗೆ ಮಹಿಳೆಯರೇ ಕಾರಣ: ಪ್ರಧಾನಿ ನರೇಂದ್ರ ಮೋದಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್