AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕರಾವಳಿಯಲ್ಲಿ ಚುನಾವಣೆಯಿಂದ ಹಿಂದೆ ಸರಿದ ಎಡಪಕ್ಷಗಳು

ಈ ಬಾರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಎಡಪಕ್ಷಗಳು ನಿರ್ಧಿರಿಸಿವೆ. ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದನ್ನು ತಡೆಯಲು ಕರಾವಳಿ ಜಿಲ್ಲೆಗಳ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸದಿರಲು ಸಿಪಿಐ(ಎಂ) ಮತ್ತು ಸಿಪಿಐ ಪಕ್ಷಗಳು ನಿರ್ಧರಿಸಿವೆ.

Karnataka Assembly Election 2023: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕರಾವಳಿಯಲ್ಲಿ ಚುನಾವಣೆಯಿಂದ ಹಿಂದೆ ಸರಿದ ಎಡಪಕ್ಷಗಳು
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
| Updated By: ವಿವೇಕ ಬಿರಾದಾರ|

Updated on:Apr 14, 2023 | 7:40 AM

Share

ಮಂಗಳೂರು: ವಿಧಾನಸಭೆ ಚುನಾವಣೆಗೆ(Karnataka Assembly Election) ದಿನಾಂಕ ನಿಗದಿಯಾಗಿದೆ. ಈಗಾಗಲೇ ಬಿಜೆಪಿ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಬಾರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಎಡಪಕ್ಷಗಳು ನಿರ್ಧಿರಿಸಿವೆ. ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದನ್ನು ತಡೆಯಲು ಕರಾವಳಿ ಜಿಲ್ಲೆಗಳ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸದಿರಲು ಸಿಪಿಐ(ಎಂ) ಮತ್ತು ಸಿಪಿಐ ಪಕ್ಷಗಳು ನಿರ್ಧರಿಸಿವೆ. ಹೌದು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ಪ್ರದೇಶದಲ್ಲಿ ಜಾತ್ಯತೀತ ಮತಗಳನ್ನು ಕ್ರೋಢೀಕರಿಸಬೇಕು ಎಂದು ಉಭಯ ಪಕ್ಷಗಳು ತೀರ್ಮಾನಿಸಿವೆ.

ಸಾಕಷ್ಟು ಪ್ರಭಾವ ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲು ಖಚಿತವಾಗಲು ಎಡಪಕ್ಷಗಳು ಚುನಾವಣಾ ಕಣದಿಂದ ದೂರ ಉಳಿಯಲು ನಿರ್ಧರಿಸಿವೆ.  ಈ ಬಗ್ಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಕರಾವಳಿ ಜಿಲ್ಲೆಗಳಲ್ಲಿ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೂ, ಜಾತ್ಯತೀತ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಸಕ್ರಿಯರಾಗಿದ್ದೇವೆ. ಎರಡು ಪಕ್ಷಗಳು ತಮ್ಮ ಚುನಾವಣಾ ಕಾರ್ಯತಂತ್ರವನ್ನು ರೂಪಿಸಲು ಏಪ್ರಿಲ್ 18 ರಂದು ಇಲ್ಲಿನ ಟೌನ್ ಹಾಲ್‌ನಲ್ಲಿ ಸಭೆ ಕರೆದಿದ್ದೇವೆ. ಈ ಸಂದರ್ಭದಲ್ಲಿ ಜಾತ್ಯಾತೀತ ಪಕ್ಷಗಳಲ್ಲಿ ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಬೆಂಬಲಿಸಲು  ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಚುನಾವಣೆಯಲ್ಲಿ ಒಳ ಮೀಸಲಾತಿ ಕಿಚ್ಚು; ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ

1962 ರಲ್ಲಿ ಸಿಪಿಐ ನಾಯಕ ಎ ಕೃಷ್ಣ ಶೆಟ್ಟಿ ಅವರು ಹಿಂದಿನ ಉಳ್ಳಾಲ (ಈಗ ಮಂಗಳೂರು) ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್‌ನ ಬಿ ಎಂ ಇದ್ದಿನಬ್ಬ ಅವರನ್ನು ಸೋಲಿಸಿದಾಗ ಕರಾವಳಿ ಕರ್ನಾಟಕವು ಎಡಪಕ್ಷಗಳ ದೃಢವಾದ ನೆಲೆಯಾಗಿತ್ತು. ಎಡಪಕ್ಷಗಳ ಯುವ ಘಟಕಗಳು ಕರಾವಳಿ ಜಿಲ್ಲೆಗಳಲ್ಲಿ ವಿವಿಧ ಸಾಮಾಜಿಕ ಸಮಸ್ಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳನ್ನು ಸೋಲಿಸುವುದೇ ಎಡಪಕ್ಷಗಳ ಗುರಿಯಾಗಿದೆ ಎಂದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:23 am, Fri, 14 April 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ