AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೆಜಿ ಚಿನ್ನಾಭರಣ ಜಪ್ತಿ, ಬೆಳಗಾವಿಯಲ್ಲಿ 9 ಲಕ್ಷ ವಶಕ್ಕೆ

ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿ ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿರುವ ನಗದು ಚಿನ್ನಾಭರಣ ಇತ್ಯಾದಿ ವಸ್ತುಗಳನ್ನು ಜಪ್ತಿ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೆಜಿ ಚಿನ್ನಾಭರಣ ಜಪ್ತಿ, ಬೆಳಗಾವಿಯಲ್ಲಿ 9 ಲಕ್ಷ ವಶಕ್ಕೆ
ಕುಡಚಿ ಚೆಕ್​ಪೋಸ್ಟ್​ನಲ್ಲಿ ಪತ್ತೆಯಾದ ಹಣ (ಬಲ ಚಿತ್ರ) ಮತ್ತು ಚಿನ್ನಾಭರಣ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on:Apr 12, 2023 | 10:07 PM

Share

ಬೆಂಗಳೂರು: ಪಾರದರ್ಶಕ ಚುನಾವಣೆಗಾಗಿ (Karnataka Assembly Elections 2023) ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿ ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿರುವ ನಗದು ಚಿನ್ನಾಭರಣ ಇತ್ಯಾದಿ ವಸ್ತುಗಳನ್ನು ಜಪ್ತಿ (Gold Seized) ಮಾಡುತ್ತಿದ್ದಾರೆ. ಅದರಂತೆ ಬೆಂಗಳೂರು ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಕೆಜಿಗೂ ಅಧಿಕ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ನಿರ್ಮಲ್ ಎಂಬಾತನ ವಾಹನವನ್ನು ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ನಗರತ್ ಪೇಟೆಯಲ್ಲಿ ತಡೆದು ತಪಾಸಣೆ ನಡೆಸಲಾಗಿದೆ. ಈ ವೇಳೆ 2.5 ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ವಿಚಾರಣೆ ವೇಳೆ ಈ ಚಿನ್ನಾಭರಣಗಳಿಗೆ ದಾಖಲೆ ಇಲ್ಲ ಎಂಬುದು ತಿಳಿದುಬಂದ ಹಿನ್ನೆಲೆ ಪೊಲೀಸರು ಜಪ್ತಿ ಮಾಡಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಾರ್ಚ್ 29ರಿಂದ ಈವರೆಗೆ ಬೆಂಗಳೂರಲ್ಲಿ 53.83 ಕೋಟಿ ರೂಪಾಯಿಗೂ ಅಧಿಕ ಹಣ, ಮದ್ಯ, ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಬರೋಬ್ಬರಿ 1187 ಎಫ್​ಐಆರ್​ ದಾಖಲಾಗಿವೆ. 8.26 ಕೋಟಿ ರೂ. ನಗದು, 22.16 ಕೋಟಿ ರೂ. ಮೌಲ್ಯದ ಮದ್ಯ, 9.51 ಕೋಟಿ ರೂ. ಮೌಲ್ಯದ ಡ್ರಗ್ಸ್, 4.73 ಲಕ್ಷ ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು, 4.87 ಕೋಟಿ ರೂ. ಮೌಲ್ಯದ ಉಡುಗೊರೆ ಮತ್ತು 4.27 ಕೋಟಿ ರೂ. ಮೌಲ್ಯದ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಮಾ.29ರಿಂದ ರಾಜ್ಯದಲ್ಲಿ ಈವರೆಗೆ 126.14 ಕೋಟಿ ರೂ. ಹಣ, ವಸ್ತು ಜಪ್ತಿ: ಬೆಂಗಳೂರು ಪಾಲೆಷ್ಟು? ಇಲ್ಲಿದೆ ಅಂಕಿ ಅಂಶ

ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಹಣ ಸಾಗಾಟ

ಬೆಳಗಾವಿ: ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, 9 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಕುಡಚಿ ಚೆಕ್​ಪೋಸ್ಟ್​ನಲ್ಲಿ ಕಾರೊಂದನ್ನು ತಡೆದು ತಪಾಸಣೆ ನಡೆಸಿದಾಗ 8 ಲಕ್ಷ ನಗದು ಪತ್ತೆಯಾಗಿದೆ. ಪ್ರಾಥಮಿಕ ವಿಚಾರಣೆ ವೇಳೆ ದಾಖಲೆ ಇಲ್ಲದಿರುವುದು ತಿಳಿದುಬಂದಿದೆ. ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಇತ್ತ ಚಿಕ್ಕಾಲಗುಡ್ಡ ಚೆಕ್​ಪೋಸ್ಟ್​ನಲ್ಲೂ ಒಂದು ಕಾರನ್ನು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 1 ಲಕ್ಷ ನಗದು ಪತ್ತೆಯಾಗಿದೆ. ಕೂಡಲೇ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸದ್ಯ ಚುನಾವಣಾ ಅಧಿಕಾರಿಗಳು ಎರಡು ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭರ್ಜರಿ ಭೇಟೆ

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್​ಗಳಲ್ಲಿ 20 ಲಕ್ಷ ರೂಪಾಯಿ ನಗದು, ಲಕ್ಷಾಂತರ ಮೌಲ್ಯದ ಗಿಫ್ಟ್‌ಗಳನ್ನು ಜಪ್ತಿ ಮಾಡಲಾಗಿದೆ. ಕಡೂರು ಚೆಕ್‌ಪೋಸ್ಟ್‌ನಲ್ಲಿ 6 ಲಕ್ಷಕ್ಕೂ ಹೆಚ್ಚು, ತರೀಕೆರೆ ಚೆಕ್‌ಪೋಸ್ಟ್‌ನಲ್ಲಿ 3 ಲಕ್ಷಕ್ಕೂ, ಲಕ್ಕವಳ್ಳಿ ಎಂ.ಎನ್.ಕ್ಯಾಂಪ್‌ನಲ್ಲಿ ಒಂದು ಲಕ್ಷ ನಗದು ಸೀಜ್​ ಮಾಡಲಾಗಿದೆ. ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 7.5 ಲಕ್ಷ ಮೌಲ್ಯದ 760 ಜೀನ್ಸ್‌ ಪ್ಯಾಂಟ್‌ ಮತ್ತು ಬೀರೂರಿನಲ್ಲಿ 68 ಸಾವಿರಕ್ಕೂ ಮೌಲ್ಯದ 47 ಕುಕ್ಕರ್‌, 77 ಸೀರೆಗಳನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹಾಗಾಗಿ ಜಿಲ್ಲೆಯ ಚೆಕ್​ಪೋಸ್ಟ್​ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:07 pm, Wed, 12 April 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ