Karnataka Assembly Election 2023: ಬೆಂಗಳೂರಿನಲ್ಲಿ ಶೇ. 49 ರಷ್ಟು ಯುವ ಮತದಾರರ ಸಂಖ್ಯೆ ಹೆಚ್ಚಳ

ಮತ ಚಲಾಯಿಸಲು ಅರ್ಹತೆ ಪಡೆದ ಯುವಕರ ಸಂಖ್ಯೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.49 ರಷ್ಟು ಏರಿಕೆ ಆಗಿದೆ.

Karnataka Assembly Election 2023: ಬೆಂಗಳೂರಿನಲ್ಲಿ ಶೇ. 49 ರಷ್ಟು ಯುವ ಮತದಾರರ ಸಂಖ್ಯೆ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
|

Updated on:Mar 29, 2023 | 7:39 AM

ಬೆಂಗಳೂರು: ಚುನಾವಣಾ ಆಯೋಗ (Election Commission) ಯುವ ಮತದಾರರನ್ನು (Young Voters), ಮತದಾನ ಪ್ರಕ್ರಿಯೆಯತ್ತ ಸೆಳೆಯಲು ಸಾಕಷ್ಟು ಪ್ರಯತ್ನಪಡುತ್ತಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಯುವ ಮತದಾರರು, ಮತದಾನದಲ್ಲಿ ಪಾಲ್ಗೊಳ್ಳುವಂತೆ ಚುನಾವಣಾ ಆಯೋಗ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಇದರ ಪ್ರತಿಫಲವಾಗಿ ಮತ ಚಲಾಯಿಸಲು ಅರ್ಹತೆ ಪಡೆದ ಯುವಕರ ಸಂಖ್ಯೆ ಬೆಂಗಳೂರು ನಗರ ಜಿಲ್ಲೆಯಲ್ಲಿ (Bengaluru Urban District) ಶೇ.49 ರಷ್ಟು ಏರಿಕೆ ಆಗಿದೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ (Bengaluru Zilla Panchayat) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಗಪ್ಪ ಮಾತನಾಡಿ, ಬೆಂಗಳೂರಿನಲ್ಲಿ 54,000 ಇದ್ದ ಯುವ ಮತದಾರರ ಸಂಖ್ಯೆ ಈಗ 1.1 ಲಕ್ಷ ದಾಟಿದೆ. ಬೆಂಗಳೂರು ನಗರ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. (ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಮತ್ತು ಯಲಹಂಕ) ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ 65% ಮತದಾನದ ಟಾರ್ಗೆಟ್ ನೀಡಿದ ಚುನಾವಣಾ ಆಯೋಗ

ವಿಶೇಷವಾಗಿ ಈ ಬಾರಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೆಚ್ಚಿನಸಂಖ್ಯೆಯಲ್ಲಿ ಪ್ರಜ್ಞಾವಂತ ಮತದಾರರು ಮತ್ತು ತೃಯಲಿಂಗಿಗಳು ಮುಂದೆ ಬಂದಿದ್ದಾರೆ. ಜಿಲ್ಲೆಯಲ್ಲಿ 16,000 ಇದ್ದ ತೃಯಲಿಂಗಿ ಸಮುದಾಯದ ಮತದಾರರ ಸಂಖ್ಯೆ 30,000 ಕ್ಕೆ ಏರಿದೆ. ಇದು ಶೇ. 53 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು.

ಕೈಗಾರಿಕೆಗಳು, ವಸತಿ ಸಮುಚ್ಚಯಗಳು, ಕಾಲೇಜುಗಳು ಮತ್ತು ಬ್ಯಾಂಕ್‌ಗಳ ಆವರಣದಲ್ಲಿ ಮತದಾನ-ಜಾಗೃತಿ ಚಟುವಟಿಕೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 am, Wed, 29 March 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ