ಏ.30ರಂದು ಮೋದಿಗೆ ಮೈಸೂರಿನ ವೀಳ್ಯದೆಲೆಯೊಂದಿಗೆ ಸ್ವಾಗತದ ಜೊತೆ ವಿಶೇಷ ಉಡುಗೊರೆ ಸಿದ್ಧ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾನುವಾರ (ಏ.30) ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದು, ಗನ್ ಹೌಸ್ ವೃತ್ತದಿಂದ ಆರಂಭವಾಗಿ ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತದವರೆಗೆ ಸುಮಾರು 4 ಕಿ ಮೀ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋನಲ್ಲಿ ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಹೇಳಿದ್ದಾರೆ.

ಏ.30ರಂದು ಮೋದಿಗೆ ಮೈಸೂರಿನ ವೀಳ್ಯದೆಲೆಯೊಂದಿಗೆ ಸ್ವಾಗತದ ಜೊತೆ ವಿಶೇಷ ಉಡುಗೊರೆ ಸಿದ್ಧ
ಏ.30 ರಂದು ಮೈಸೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Apr 28, 2023 | 1:01 PM

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ(Karnataka Assembly Election) ಹಿನ್ನೆಲೆ ಭಾನುವಾರ (ಏ.30) ಸಂಜೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್(S. A. Ramadas) ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ‘ಭಾನುವಾರ ಸಂಜೆ ಬೇಲೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ಓವಲ್ ಮೈದಾನಕ್ಕೆ ಪ್ರಧಾನಿ ಮೋದಿ ಬಂದಿಳಿಯಲಿದ್ದು, ಬಳಿಕ ಕಾರಿನ‌ ಮೂಲಕ ಗನ್ ಹೌಸ್ ವೃತ್ತದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದರು.

ರೋಡ್ ಶೋ ನಲ್ಲಿ ಭಾಗಿಯಾಗಲಿರುವ ಮೋದಿ

ಪ್ರತಾಪ್ ಸಿಂಹ ಮತ್ತು ರಾಮದಾಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಪ್ರಧಾನಿ ಮೋದಿ ರೋಡ್ ಶೋನಲ್ಲಿ ಭಾಗಿಯಾಗಲಿದ್ದು, ಈ ವೇಳೆ ನಾದಸ್ವರ ವಾದನದೊಂದಿಗೆ ಮೋದಿಗೆ ಸ್ವಾಗತ ಕೋರಲಾಗುತ್ತದೆ. ಅಲ್ಲದೇ ಮೈಸೂರಿನ‌ ವಿಶೇಷತೆಗಳಾಗಿರುವ ವಸ್ತುಗಳನ್ನು ಮೋದಿಗೆ ಉಡುಗೊರೆಯಾಗಿ ಸಲ್ಲಿಕೆ ಮಾಡಲಾಗುತ್ತದೆ. ನಂತರ ಗನ್ ಹೌಸ್ ವೃತ್ತದಿಂದ ರೋಡ್ ಶೋ ಆರಂಭವಾಗಿ ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತ ರೋಡ್ ಶೋನಲ್ಲಿ ಸುಮಾರು 4 ಕಿ ಮೀ ಪ್ರಧಾನಿ ನರೇಂದ್ರ ಮೋದಿ ಸಾಗಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಹೇಳಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ: ರಾಜಕೀಯ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು

ನೂರಕ್ಕೂ ಹೆಚ್ಚು ನಾದಸ್ವರ ತಂಡದಿಂದ ಪ್ರಧಾ‌ನಿಗಳ ಸ್ವಾಗತ

ಪ್ರಧಾನಿ ಮೋದಿ ರೋಡ್​ ಶೋ ವೇಳೆ ಗನ್ ಹೌಸ್​ನಿಂದ ಕೆ ಆರ್ ಸರ್ಕಲ್​ವರೆಗೆ ಜನರು ಸಾಂಪ್ರದಾಯಿಕ ವಸ್ತ್ರ ತೊಟ್ಟು, ಆಯಾ ಸ್ಥಳಗಳಲ್ಲಿ ನಿಂತು ಮೈಸೂರಿನ ವಿಳ್ಯದೆಲೆ, ಶ್ರೀಗಂಧ, ಮೈಸೂರ್ ಸಿಲ್ಕ್ ಪದಾರ್ಥಗಳನ್ನು ನೀಡಿ ಪ್ರಧಾನಿಗಳನ್ನು ಸ್ವಾಗತ ಮಾಡಲಾಗುವುದು. ಜೊತೆಗೆ ರೋಡ್​ ಶೋ ಸಾಗುವ ರಸ್ತೆಯಲ್ಲಿ ಮೋದಿ ನಡೆದು ಬಂದ ಹಾದಿ, ವಿಶ್ವಕ್ಕೆ ಕೊಟ್ಟ ಮಾರ್ಗದರ್ಶನದ ಪರಿಕಲ್ಪನೆ ತೋರಿಸುವಂತಹಕಟೌಟ್​ಗಳ ಅಳವಡಿಕೆ‌ ಮಾಡಿ, ಅಲ್ಲಲ್ಲಿ ಸ್ವಾಗತ ಕಮಾನು ನಿರ್ಮಾಣ ಮಾಡಲಾಗುವುದು ಎಂದರು.

ಮೈಸೂರಿನ 5 ಕ್ಷೇತ್ರಗಳ ಜನ ಭಾಗಿ

ಇನ್ನು ಮೋದಿ ರೋಡ್​ ಶೋ ವೇಳೆ ಮೈಸೂರಿನ 5 ಕ್ಷೇತ್ರಗಳ ಜನ ಭಾಗವಹಿಸಲಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಹಿರಿಯ ನಾಗರಿಕರಿಗೆ ದೇವರಾಜ ಮಾರುಕಟ್ಟೆ, ಹಳೆ ಎಪಿಎಂಸಿ ಸರ್ಕಲ್, ಗನ್ ಹೌಸ್ ಸೇರಿದಂತೆ 5 ಕಡೆ ಕೂರಲು ಬೇಕಾದ ವ್ಯವಸ್ಥೆ ಮಾಡಲಾಗುವುದು. ಇನ್ನು ಕೇವಲ ರೋಡ್ ಶೋ ಮಾತ್ರ ಇರಲಿದೆ. ಮೇ 6 ನೇ ತಾರೀಖು ನಂಜನಗೂಡಿನಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:09 am, Fri, 28 April 23

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್