AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Elections: ಆರ್​ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಡಿಕೆ ಸುರೇಶ್ ವಿರುದ್ಧ ಎಫ್​ಐಆರ್

ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಮತಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಇನ್ನಿಲ್ಲಸದ ಕಸರತ್ತು ನಡೆಸುತ್ತಿದ್ದು, ಆಮಿಷ ಒಡ್ಡುತ್ತಿರುವ ಪ್ರಕರಣಗಳೂ ಬೆಳಕಿಗೆ ಬರುತ್ತಿವೆ. ಅದರಂತೆ ಕಂಡಕಂಡಲ್ಲಿ ಚುನಾವಣಾಧಿಕಾರಿಗಳು ದಾಳಿಯೂ ನಡೆಸುತ್ತಿದ್ದಾರೆ.

Karnataka Elections: ಆರ್​ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಡಿಕೆ ಸುರೇಶ್ ವಿರುದ್ಧ ಎಫ್​ಐಆರ್
ಕುಸುಮಾ ಹೆಚ್ ಮತ್ತು ಡಿಕೆ ಸುರೇಶ್ ವಿರುದ್ಧ ಎಫ್​ಐಆರ್
Rakesh Nayak Manchi
Rakesh Nayak Manchi|

Updated on:Apr 07, 2023 | 5:32 PM

Share

ಮುಖ್ಯಾಂಶಗಳು

  • ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತದಾರರಿಗೆ ತವಾ ಹಂಚಿಕೆ
  • ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳ ದಾಳಿ, ಕುಸುಮಾ ಹಾಗೂ ಡಿ.ಕೆ.ಸುರೇಶ್ ಭಾವ ಚಿತ್ರ ಇದ್ದ ಬಾಕ್ಸ್​ಗಳು ಪತ್ತೆ
  • ಮತದಾರರಿಗೆ ಆಮಿಷ ಒಡ್ಡಿದ ಹಿನ್ನೆಲೆ ಕುಸುಮಾ ಹಾಗೂ ಡಿ.ಕೆ.ಸುರೇಶ್ ವಿರುದ್ಧ ಎಫ್​ಐಆರ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ (Rajarajeshwari Constituency) ಮತದಾರರಿಗೆ ಆಮಿಷ ಒಡ್ಡಿದ ಆರೋಪದ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ (Kusuma H), ಸಂಸದ ಡಿಕೆ ಸುರೇಶ್ (DK Suresh) ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಕ್ಷೇತ್ರದಲ್ಲಿ ಮತದಾರರಿಗೆ ತವಾ ಹಂಚುತ್ತಿದ್ದ ಮಾಹಿತಿ ತಿಳಿದು ಚುನಾವಣೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಚುನಾವಣಾ ಅಧಿಕಾರಿಗಳನ್ನ ಕಂಡು ತವಾ ಹಂಚುತ್ತಿದ್ದವರು ಪರಾರಿಯಾಗಿದ್ದಾರೆ. ಆದರೆ ಪರಾರಿಯಾಗುವ ವೇಳೆ ಓರ್ವ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಸ್ಥಳದಲ್ಲಿ ಪತ್ತೆಯಾದ ಬಾಕ್ಸ್​ಗಳನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿದಾಗ ಅಭ್ಯರ್ಥಿ ಕುಸುಮಾ ಹಾಗೂ ಡಿ.ಕೆ.ಸುರೇಶ್ ಭಾವ ಚಿತ್ರ ಕಂಡುಬಂದಿದೆ. ಸದ್ಯ 3 ಕರ್ಟನ್ ಬಾಕ್ಸ್ ಹಾಗೂ 3 ತವಾ ಬಾಕ್ಸ್​ಗಳನ್ನ ವಶಕ್ಕೆ‌ ಪಡೆಯಲಾಗಿದ್ದು, ಚುನಾವಣಾ ಅಧಿಕಾರಿಗಳಿಂದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಧಿಕಾರಿಗಳ ದೂರು ಆಧರಿಸಿ ಪೊಲೀಸರು ಕುಸುಮಾ, ಡಿಕೆ ಸುರೇಶ್ ಹಾಗೂ ಜಗದೀಶ್ ಎಂಬವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಮುಳಬಾಗಲು ಕಾಂಗ್ರೆಸ್‌ ಟಿಕೆಟ್​ ಆಕಾಂಕ್ಷಿ ವಿರುದ್ದ ಎಫ್​ಐಆರ್​, ಕಾರಣವೇನು?

ಕುಸುಮಾ.ಎಚ್, ಕಳೆದ ಬಾರಿ ಅಂದರೆ ನವೆಂಬರ್ 03, 2020ಕ್ಕೆ ನಡೆದ ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಳಿಕ ಬಿಜೆಪಿಯ ಎನ್. ಮುನಿರತ್ನ ಅವರ ವಿರುದ್ಧ ಸೋಲು ಕಂಡಿದ್ದರು. ಈಗ ಎರಡನೇ ಬಾರಿಗೆ ಆರ್.ಆರ್.ನಗರದಲ್ಲಿ ತಮ್ಮ ರಾಜಕೀಯ ಭವಿಷ್ಯ ಬರೆಯಲು ಮುಂದಾಗಿದ್ದು, ಇದೀಗ ಮತ್ತೊಮ್ಮೆ ಮುನಿರತ್ನ ವಿರುದ್ಧ ಅಖಾಡಕ್ಕಿಳಿದಿದ್ದಾರೆ.

ಮುನಿರತ್ನರನ್ನು ರಾಜಕೀಯವಾಗಿ ಮಣಿಸಲು ಯತ್ನಿಸುತ್ತಿರುವ ಕುಸುಮಾ, ಪ್ರಚೋದನಕಾರಿ ಹೇಳಿಕೆ ಆರೋಪಿಸಿ ದೂರು ನೀಡಿದ್ದಾರೆ. ಸಚಿವ ಮುನಿರತ್ನ ಅವರು ಸಾರ್ವಜನಿಕ ಸಭೆಯಲ್ಲಿ ತಮಿಳಿನಲ್ಲಿ ಮಾತನಾಡುತ್ತ ‘ತಮಿಳು ಭಾಷಿಕರು ಕನ್ನಡ ಭಾಷಿಕರ ಮೇಲೆ ಹಲ್ಲೆ ಮಾಡುವಂತೆ’ ಸೂಚನೆ ನೀಡಿರುವ ಹೇಳಿಕೆ ಸಮೇತ ದೂರು ನೀಡಿದ್ದಾರೆ. ಈ ಮೂಲಕ ತಮಿಳು ಮತ್ತು ಕನ್ನಡಿಗರ ನಡುವೆ ಸಂಘರ್ಷಕ್ಕೆ ಎಡೆಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಕಲಬುರಗಿ: ಜೆಡಿಎಸ್ ಮುಖಂಡ ಮತ್ತು ಪೊಲೀಸ್ ಕಮಿಷನರ್ ನಡುವೆ ವಾಗ್ವಾದ, ನಾಸೀರ್ ಹುಸೇನ್ ವಿರುದ್ಧ ದೂರು ದಾಖಲು

ರಾಜಕೀಯದ ಜೊತೆಗೆ ಸಮಾಜ ಸೇವೆ, ಬರವಣಿಗೆಯಂತಹ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಕುಸುಮಾ ಅವರು ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲೇ ಕುಸುಮಾ ಅವರ ಹೆಸರನ್ನು ಪ್ರಕಟಿಸಿದೆ. ಹೀಗಿದ್ದು ಹೇಗಾದರೂ ಮಾಡಿ ಈ ಬಾರಿ ಗೆಲುವು ಸಾಧಿಸಲು ಶಥಾಉ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಬಳಿಕ ಗೆಲುವು ಯಾರಿಗೆ ಒಲಿಯುತ್ತೆ ಕಾದುನೋಡಬೇಕಾಗಿದೆ.

Published On - 5:31 pm, Fri, 7 April 23

Follow Us
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ