Kichcha Sudep: ಬೊಮ್ಮಾಯಿ ಪರವಷ್ಟೇ ಸುದೀಪ್ ಪ್ರಚಾರವಾ? ಇಲ್ಲಿದೆ ಸುದೀಪ್ ಚುನಾವಣಾ ಪ್ರಚಾರದ ಇತಿಹಾಸ

ಸುದೀಪ್ ಅವರು ಚುನಾವಣೆ ಸಂದರ್ಭದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವುದು ಇದೇ ಮೊದಲಲ್ಲ. 2018ರ ಚುನಾವಣೆಯಲ್ಲಿಯೂ ಅವರು ಕೆಲವು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.

Kichcha Sudep: ಬೊಮ್ಮಾಯಿ ಪರವಷ್ಟೇ ಸುದೀಪ್ ಪ್ರಚಾರವಾ? ಇಲ್ಲಿದೆ ಸುದೀಪ್ ಚುನಾವಣಾ ಪ್ರಚಾರದ ಇತಿಹಾಸ
ಕಿಚ್ಚ ಸುದೀಪ್
Follow us
Ganapathi Sharma
|

Updated on:Apr 05, 2023 | 3:38 PM

ಬೆಂಗಳೂರು: ಕಿಚ್ಚ ಸುದೀಪ್ (Kichcha Sudeep) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ (CM Basavaraj Bommai) ಬೆಂಬಲ ನೀಡಲು ಇಷ್ಟಪಡುತ್ತೇನೆ ಎಂದು ಬುಧವಾರ ಬಹಿರಂಗವಾಗಿ ಘೋಷಿಸಿದ್ದಾರೆ. ಜತೆಗೆ, ಬಸವರಾಜ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ, ಯಾವುದೇ ಪಕ್ಷದ ಟಿಕೆಟ್ ಕೇಳಿಯೂ ಇಲ್ಲ. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಇದೆ. ಆದರೆ, ನನಗೆ ಬೆಂಬಲ ನೀಡಿದವರ, ನನ್ನ ಏಳಿಗೆಗೆ ಕಾರಣರಾವದರ ಪರವಾಗಿ ಪ್ರಚಾರ ಮಾಡುತ್ತೇನೆ. ಚಿತ್ರರಂಗಕ್ಕೆ ಬಂದಾಗ ಕೆಲವೇ ಕೆಲವರು ನನ್ನಪರ ನಿಂತಿದ್ದರು. ಅಂಥವರಲ್ಲಿ ನನ್ನ ಮಾಮ ಸಿಎಂ ಬೊಮ್ಮಾಯಿ ಕೂಡ ಒಬ್ಬರು. ಅವರನ್ನು ನಾನು ಮಾಮ ಎಂದೇ ಕರೆಯುತ್ತೇನೆ. ನಾನು ಅವರ ಪರವಾಗಿ ನಿಲ್ಲಲಿದ್ದೇನೆ ಎಂದು ಘೋಷಿಸಿದ್ದಾರೆ.

ಈ ಮಧ್ಯೆ, ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ಸುದೀಪ್​ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ. ನಾನು ಹೇಳಿದ ಕಡೆ ನಟ ಸುದೀಪ್​ ಪ್ರಚಾರ ಮಾಡುತ್ತಾರೆ ಎಂದೂ ಹೇಳಿದ್ದಾರೆ. ಹಾಗಿದ್ದರೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಾತ್ರ ಸುದೀಪ್ ಪ್ರಚಾರ ಮಾಡಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಸುದೀಪ್ ಅವರು ಚುನಾವಣೆ ಸಂದರ್ಭದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವುದು ಇದೇ ಮೊದಲಲ್ಲ. 2018ರ ಚುನಾವಣೆಯಲ್ಲಿಯೂ ಅವರು ಕೆಲವು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.

ಶ್ರೀರಾಮುಲು ಪರ ಪ್ರಚಾರ ಮಾಡಿದ್ದ ಸುದೀಪ್

2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸುದೀಪ್ ಅವರು ಶ್ರೀರಾಮುಲು ಅವರನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದರು. ಜತೆಗೆ, ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಚುನಾವಣಾ ಪ್ರಚಾರ ನಡೆಸಲು ತೆರಳಿದ್ದರು. ಆದರೆ, ಕೊನೇ ಕ್ಷಣದಲ್ಲಿ ಚುನಾವಣಾ ಆಯೋಗ ತಡೆ ನೀಡಿದ್ದರಿಂದ ಪ್ರಚಾರ ಕಾರ್ಯದಲ್ಲಿ ಭಾಗವಹಿಸದೇ ಹಿಂತಿರುಗಬೇಕಾಗಿ ಬಂದಿತ್ತು. ಶ್ರೀರಾಮುಲು ಪರ ನಟ ಸುದೀಪ್ ಚುನಾವಣಾ ಪ್ರಚಾರ ನಡೆಸಲು ಆಯೋಗ ಬೆಳಿಗ್ಗೆ 9ರಿಂದ 12 ಗಂಟೆವರೆಗೂ ಸಮಯ ನೀಡಿತ್ತು. ಆದರೆ, ಸುದೀಪ್ ಅವರು ಮಧ್ಯಾಹ್ನ 1 ಗಂಟೆಗೆ ಬಂದ ಕಾರಣ ಬೇರೆ ಪಕ್ಷಗಳ ಪ್ರಚಾರಕ್ಕೆ ಸಮಯ ನಿಗದಿಯಾಗಿರುವ ಕಾರಣ ಅವರಿಗೆ ಅವಕಾಶ ದೊರೆತಿರಲಿಲ್ಲ.

ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಮುಂದಾಗಿದ್ದರೇ ಸುದೀಪ್?

ಸುದೀಪ್ ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದರು ಎಂಬ ವಿಚಾರ 2018ರಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ರಾಮುಲು ವಿರುದ್ಧ ಪ್ರಚಾರಕ್ಕೆ ಸುದೀಪ್ ಅಣಿಯಾಗಿದ್ದಾರೆ ಎಂಬ ಊಹಾಪೋಹಗಳೂ ಹರಿದಾಡಿದ್ದವು. ಆದರೆ ಈ ಬಗ್ಗೆ ನಂತರ ಸ್ಪಷ್ಟನೆ ನೀಡಿದ್ದ ಸುದೀಪ್, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರವಾಗಿ ಪ್ರಚಾರಕ್ಕೆ ಮುಂದಾಗಿದ್ದೇನೆಯೇ ಹೊರತು, ಇದು ರಾಮುಲು ವಿರುದ್ಧದ ಪ್ರಚಾರ ಅಲ್ಲ. ಹಾಗೆಂದು ಬಿಂಬಿಸಬೇಕಾಗಿಲ್ಲ ಎಂದು ಹೇಳಿದ್ದರು. ಮತ್ತೊಂದು ಕಡೆ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಪ್ರಚಾರಕ್ಕೆ ಕರೆದಿರುವುದು ಸತ್ಯ. ಆದರೆ ನಾನಿನ್ನು ಅದನ್ನು ಒಪ್ಪಿಕೊಂಡಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: Kichcha Sudeep: ನನ್ನ ಜೊತೆಗೆ ಬಿಜೆಪಿ ಪರವೂ ನಟ ಕಿಚ್ಚ ಸುದೀಪ್ ಪ್ರಚಾರ ಮಾಡುತ್ತಾರೆ: ಸಿಎಂ ಬಸವರಾಜ ಬೊಮ್ಮಾಯಿ

ನಂತರ ಹಠಾತ್ ನಿರ್ಧಾರ ಬದಲಿಸಿದ್ದ ಅವರು, ಇನ್ನು ಮುಂದೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಇದಕ್ಕೂ ಮುನ್ನ, ತಮ್ಮ ಆತ್ಮೀಯ ಸ್ನೇಹಿತರಾದ ರಾಜು ಗೌಡ ಪರ ಚುನಾವಣಾ ಪ್ರಚಾರ ನಡೆಸಿದ್ದರು.

ಇನ್ನು ಮುಂದೆ ಚುನಾವಣಾ ಪ್ರಚಾರ ಮಾಡಲ್ಲ ಎಂದಿದ್ದ ಸುದೀಪ್

ಇನ್ನು ಮುಂದೆ ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ. ಗೆಳೆಯರ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿದ್ದೇನೆ. ಜನರಿಗೆ ನನ್ನ ಮೇಲೆ ಅಭಿಮಾನ ಇದೆ ಎಂಬುದು ನಿಜ. ಆದರೆ ನಾನು ಭಾಗವಹಿಸುವುದರಿಂದ ಚುನಾವಣಾ ಫಲಿತಾಂಶ ಬದಲಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ಅಷ್ಟು ದೊಡ್ಡ ವ್ಯಕ್ತಿಯೂ ನಾನಲ್ಲ ಎಂದು 2018ರ ಮೇ ತಿಂಗಳಲ್ಲಿ ಸುದೀಪ್ ಟ್ವೀಟ್ ಮಾಡಿದ್ದರು. ಆದರೆ, ನಂತರ ಆ ಟ್ವೀಟ್​ ಅನ್ನು ಡಿಲೀಟ್ ಮಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Wed, 5 April 23

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ