ಸಿದ್ದರಾಮಯ್ಯಗೆ ತಾರಾಬಲ: ವರುಣಾ ಕ್ಷೇತ್ರದಲ್ಲಿ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ

ಈ ಬಾರಿ ವರುಣಾ ವಿಧಾನಸಭೆ ಚುನಾವಣೆ ಭಾರೀ ಕುತೂಹಲ ಮೂಡಿಸಿದ್ದು, ಸಿದ್ದರಾಮಯ್ಯ ಅವರಿಗೆ ಅಳಿವು ಉಳಿವಿನ ಪ್ರತಿಷ್ಠೆಯಾಗಿದೆ. ಇನ್ನು ಸಿದ್ದರಾಮಯ್ಯನವರ ಪರ ಸಿನಿಮಾ ನಟ-ನಟಿಯರು ಪ್ರಚಾರಕ್ಕಿಳಿಯಲಿದ್ದಾರೆ.

ಸಿದ್ದರಾಮಯ್ಯಗೆ ತಾರಾಬಲ: ವರುಣಾ ಕ್ಷೇತ್ರದಲ್ಲಿ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ
Follow us
ರಮೇಶ್ ಬಿ. ಜವಳಗೇರಾ
|

Updated on: May 01, 2023 | 3:00 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆಯ (Election 2023) ಕಾವು ಜೋರಾಗಿದ್ದು, ಕನ್ನಡ ಚಿತ್ರರಂಗದ (Kannada Cinema Industry) ಘಟಾನುಘಟಿ ನಾಯಕರು ಈ ಬಾರಿ ಎಲೆಕ್ಷನ್ ಅಖಾಡಕ್ಕಿಳಿದು ನೆಚ್ಚಿನ ನಾಯಕರ ಪರ ಅಬ್ಬರದ ಪ್ರಚಾರಕ್ಕಿಳಿದಿದ್ದಾರೆ. ಬಿಜೆಪಿ ನಾಯಕರ ಪರ ಸ್ಟಾರ್ ಪ್ರಚಾರಕರಾಗಿ ನಟ ಕಿಚ್ಚ ಸುದೀಪ್ (Actor Sudeep)​ ಎಲ್ಲೆಡೆ ಅಬ್ಬರಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್​ ಪರ ಪ್ರಚಾರಕ್ಕೆ ಶಿವರಾಜ್​ ಕುಮಾರ್, ರಮ್ಯಾ ​ ಎಂಟ್ರಿ ಕೊಟ್ಟಿದ್ದಾರೆ. ಮುಖ್ಯವಾಗಿ ಸಿದ್ದರಾಮಯ್ಯನವರ ಪರವಾಗಿ ವರುಣಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿ ರಮ್ಯಾ, ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಭರ್ಜರಿ ಪ್ರಚಾರ ಮಾಡಲಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಗಳ ಪರ ಶಿವಣ್ಣ ಪ್ರಚಾರ

ಹೌದು..ಅತ್ತ ಬಿಜೆಪಿ ಪರ ಕಿಚ್ಚ ಸುದೀಪ್​ ಪ್ರಚಾರಕ್ಕಿಳಿದಿದ್ದರೆ, ಮತ್ತ ಹ್ಯಾಟ್ರಿಕ್ ಶಿವರಾಜ್​ ಕುಮಾರ್ ಸಹ ಕಾಂಗ್ರೆಸ್​ನ ಕೆಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ತಮ್ಮ ಪತ್ನಿಯ ಸಹೋದರ ಮಧುಬಂಗಾರಪ್ಪ ಪರ ಸೊರಬದಲ್ಲಿ ಶಿವಣ್ಣ ಪ್ರಚಾರ ಮಾಡಲಿದ್ದಾರೆ. ಹಾಗೇ ಹೆಂಡತಿ ಕಡೆಯಿಂದ ಸಂಬಂಧಿಯಾಗುವ ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಜಗದೀಶ್ ಶೆಟ್ಟರ್​ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿರುವ ವರುಣಾದಲ್ಲಿ ಮೇ 04ರಂದಯ ಪ್ರಚಾರ ಮಾಡಲಿದ್ದಾರೆ. ಇನ್ನು ಬೀದರ್​ನಲ್ಲಿ ಅಶೋಕ್ ಖೇಣಿ ಪರ ಪ್ರಚಾರಕ್ಕಿಳಿಯಲಿದ್ದಾರೆ.

ವರುಣಾದಲ್ಲಿ ತಾರಾ ಮೆರುಗು

ಕಾಂಗ್ರೆಸ್ (Congress) ಸ್ಟಾರ್ ಪ್ರಚಾರಕಿಯಾಗಿರುವ ಮಾಜಿ ಸಂಸದೆ, ನಟಿ ರಮ್ಯಾ (Ramya) ಈ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಕಾಂಗ್ರೆಸ್​​ನ ಸ್ಟಾರ್​ ಪ್ರಚಾರಕಿಯಾಗಿರುವ ರಮ್ಯಾ ಮೇ 4ರಂದು ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರ ಪ್ರಚಾರ ಮಾಡಲಿದ್ದಾರೆ. ಹಾಗೇ ನಟ ದುನಿಯಾ ವಿಜಯ್ ಸಹ ಸಿದ್ದರಾಮಯ್ಯ ಪರ ಕ್ಯಾಂಪೇನ್ ಮಾಡಲಿದ್ದಾರೆ. ಮೇ 4ರಂದು ಸಿದ್ದರಾಮಯ್ಯ ಜೊತೆಗೆ ಶಿವಣ್ಣ, ರಮ್ಯಾ, ರೋಡ್ ಶೋ ನಲ್ಲಿ ಭಾಗಿಯಾಗುತ್ತಿರುವುದು ವಿಶೇಷವಾಗಿದೆ. ಇನ್ನು ದುನಿಯಾ ವಿಜಿ ಮೇ 5ರಂದು ವರುಣಾದಲ್ಲಿ ಪ್ರಚಾರ ಮಾಡಲಿದ್ದಾರೆ.

ಹಲವೆಡೆ ರಮ್ಯಾ ಪ್ರಚಾರ

ಮೇ 6ರಂದು ಬಬಲೇಶ್ವರ (Babaleshwar) ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ರಮ್ಯಾ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ (M.B.Patil) ಪರ ಮತಯಾಚಿಸಲಿದ್ದಾರೆ. ನಂತರ ಬೆಂಗಳೂರಿನ (Bengaluru) ಸರ್ವಜ್ಞ ನಗರದಲ್ಲಿ (Sarvagnanagar) ಕೆ.ಜೆ.ಜಾರ್ಜ್ (K.J.George) ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ ಮಂಡ್ಯ (Mandya) ಜಿಲ್ಲೆಯಲ್ಲೂ ಸಹ ಪ್ರಚಾರಕ್ಕೆ ಮುಂದಾಗಿದ್ದಾರೆ.

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ