ಮತ ಎಣಿಕೆಗೆ ಎರಡು ದಿನ ಬೇಕೆ? ಏಕೆಂದು ಬಲ್ಲವರು ತಿಳಿಸುತ್ತೀರಾ? ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಪ್ರಶ್ನೆ ಎತ್ತಿದ ಉಪೇಂದ್ರ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ನಟ ಉಪೇಂದ್ರ ಪ್ರಶ್ನೊಂದು ಎತ್ತಿದ್ದು, ಭಾರೀ ಚರ್ಚೆ ಹುಟ್ಟುಹಾಕಿದೆ.

ಮತ ಎಣಿಕೆಗೆ ಎರಡು ದಿನ ಬೇಕೆ? ಏಕೆಂದು ಬಲ್ಲವರು ತಿಳಿಸುತ್ತೀರಾ? ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಪ್ರಶ್ನೆ ಎತ್ತಿದ ಉಪೇಂದ್ರ
Upendra
Follow us
ರಮೇಶ್ ಬಿ. ಜವಳಗೇರಾ
|

Updated on:Mar 29, 2023 | 2:08 PM

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕೊನೆಗೂ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯೋಗದ (election commission of india) ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಇಂದು(ಮಾರ್ಚ್ 29) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಇದೇ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ನಟ ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ(Upendra) ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯೊಂದನ್ನು ಎತ್ತಿದ್ದು, ಸಂಚಲನ ಮೂಡಿಸಿದೆ. ಅಲ್ಲದೇ ಈ ಪ್ರಶ್ನೆ ಮೂಲಕ ಉಪ್ಪಿ ಸಾರ್ವಜನಿಕರ ತಲೆಗೆ ಹುಳಬಿಟ್ಟಿದ್ದಾರೆ.

ಇದನ್ನೂ ಓದಿ: Karnataka Election 2023 Schedule: ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ, ಮೇ 10ರಂದು ಮತದಾನ, ಮೇ 13ಕ್ಕೆ ಫಲಿತಾಂಶ

ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಶನಿವಾರದಂದು ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆಗೆ ಎರಡು ದಿನ ಬೇಕೆ? ಬಲ್ಲವರು ತಿಳಿಸುತ್ತೀರಾ? ಎಂದು ಟ್ವೀಟ್ ಮಾಡಿದ್ದಾರೆ. ಉಪೇಂದ್ರ ಅವರು ಹೀಗೆ ಯಾಕೆ ಕೇಳಿದ್ದಾರೆ? ಅವರ ತಲೆಯಲ್ಲಿ ಹೇಗೆ ಬಂತು? ಇದರ ಹಿಂದಿನ ಮರ್ಮವೇನು? ಉಪೇಂದ್ರ ಅವರಿಗೆ ಚುನಾವಣೆ ವ್ಯವಸ್ಥೆ ಮೇಲೆಯೇ ಅನುಮಾನ ಬಂತಾ? ಹೀಗೆ ನಾನಾ ಆಯಾಮಗಳಲ್ಲಿ ಸಾರ್ವಜನಕರಿಲ್ಲಿ ಪ್ರಶ್ನೆಗಳ ಜೊತಗೆ ಚರ್ಚೆಗಳು ಸಹ ಶುರುವಾಗಿವೆ.

ಸದ್ಯ ಉಪೇಂದ್ರ ಅವರು ಟ್ವಿಟರ್​ನಲ್ಲಿ ವ್ಯಕ್ತಪಡಿಸಿರುವ ಗೊಂದಲದ ಬಗ್ಗೆ ಅನೇಕರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ. ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ? ಹಳ್ಳಿ ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು, ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು. ಇದಕ್ಕೆ ಸಮಯ ಬೇಕಲ್ಲವೇ? ಮತ ಎಣಿಕೆ ಶುರುವಾಗುವುದು 13ನೇ ತಾರೀಖಿನಂದು. 11,12ನೇ ತಾರೀಖಿನಂದು ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ, ಹೇಗೆ ಪ್ರಕ್ರಿಯೆ?

ಮತ್ತೋರ್ವ ಕಮೆಂಟ್ ಮಾಡಿದ್ದು, ನಿಮ್ಮ ಸಿನಿಮಾ ಶೂಟಿಂಗ್ ಮುಗಿದ ದಿನವೇ release ಮಾಡ್ತೀರಾ? ಏಕೆಂದು ತಿಳಿಸುವಿರಾ ಸ್ವಾಮಿ? ಎಂದು ಪ್ರಶ್ನಿಸಿದ್ದರೆ, ಇನ್ನೋರ್ವ ಗೋಲ್ ಮಾಲ್ ಮಾಡುವುದಕ್ಕೆ ಟೈಮ್ ಬೇಕ ಅಲ್ವಾ ಅದಕ್ಕೆ ಎಂದಿದ್ದಾರೆ. ಇನ್ನು ವ್ಯವಸ್ಥೆ ಮೇಲೆನೇ ನಿಮಗೆ ಅನುಮಾನವೇ ಸರ್ ಎಂದು ಪ್ರಶ್ನಿಸಿದ್ದಾರೆ. ಉಪೇಂದ್ರ ಅವರೇ, ಎಲೆಕ್ಷನ್ ಕಣ್ರೀ ಇದು, ಯಾವ್ದೋ ಆನ್ಲೈನ್ exam ಅಲ್ಲ, ಆಗಿದ ತಕ್ಷಣ ರಿಸಲ್ಟ್ ಕೊಡೋಕೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

Published On - 2:08 pm, Wed, 29 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್