ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮತ್ತೋರ್ವ ಬಿಜೆಪಿ ಶಾಸಕ

|

Updated on: Apr 05, 2023 | 7:28 AM

ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್​ಎ ರವೀಂದ್ರನಾಥ್​ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮತ್ತೋರ್ವ ಬಿಜೆಪಿ ಶಾಸಕ
ಎಸ್​ಎ ರವೀಂದ್ರನಾಥ್​
Image Credit source: varthabharati.in
Follow us on

ದಾವಣಗೆರೆ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್​ಎ ರವೀಂದ್ರನಾಥ್ (SA Ravindranath)​ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರ ದಾವಣಗೆರೆ ತಾಲೂಕಿನ ಶಿರಮಗೊಂಡನ ಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ನಾನೇ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಎಸ್.ಎ. ರವೀಂದ್ರನಾಥ್​ ಕಣದಿಂದ ಹಿಂದೆ ಸರಿಯುತ್ತಿದ್ದಂತೆ ಇತ್ತ​ ನಿವಾಸದ ಮುಂದೆ ಸಾಕಷ್ಟು ಬೆಂಬಲಿಗರು ಜಮಾಯಿಸಿದ್ದರು. ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯದಂತೆ, ಬೇಕಿದ್ದರೆ 25 ಸಾವಿರ ಅಂತರದಿಂದ ಗೆಲ್ಲಿಸುತ್ತೇವೆ. ಜೊತೆಗೆ ಪಕ್ಷದ ವರಿಷ್ಠರ ಮನವೊಲಿಸುವ ಕೆಲಸ ಕೂಡ ಮಾಡುತ್ತೇವೆ ಎಂದ ಬೆಂಬಲಿಗರು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಸಿಎಂ ಬೊಮ್ಮಾಯಿ ದಾವಣಗೆರೆ ಉತ್ತರಕ್ಕೆ ಎಸ್​​.ಎ. ರವೀಂದ್ರನಾಥ್​ ಅಭ್ಯರ್ಥಿ ಎಂದು ಹೇಳಿದ್ದರು. ನನಗೆ ಟಿಕೆಟ್​ ಬೇಡ, ಹೊಸಬರಿಗೆ ಅವಕಾಶ ಕೊಡಿ ಎಂದು ರವೀಂದ್ರನಾಥ್ ಹೇಳಿದ್ದರು. ಯಡಿಯೂರಪ್ಪ ಅವರು ಸ್ವಯಂ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಅವರಾದ ಬಳಿಕ ಹಿರಿಯ ಅಂದರೆ ನಾನೇ
ಇರೋದು. ಹಾಗಾಗಿ ನಾನು ಕೂಡ ನಿವೃತ್ತಿ ಘೋಷಣ ಮಾಡಿಕೊಂಡಿದ್ದೇನೆ. ಪಕ್ಷ ಯಾರಿಗೆ ಟಿಕೆಟ್​ ನೀಡುತ್ತದೆ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ನನ್ನ ವಿರುದ್ಧ ಸಿಎಂ, ಪ್ರಧಾನಿ ಮೋದಿ ಬಂದು ನಿಂತರು ನಾನು ಗೆಲ್ಲುವೆ: ಎಸ್​ಎಸ್ ಮಲ್ಲಿಕಾರ್ಜುನ

ಚುನಾವಣೆಯಿಂದ ಹಿಂದೆಸರಿದ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತೀರ್ಮಾನ ಮಾಡಿದ್ದು, ಮುಂದೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಹಣ ಮಾಡಲು ರಾಜಕೀಯಕ್ಕೆ ಹೋಗಬೇಕು ಎಂಬ ಮಾತು ಸಾಮನ್ಯ. ಆದರೆ ಇದಕ್ಕೆ ತದ್ವಿರುದ್ದವಾಗಿ ನಡೆದುಕೊಂಡ ಜಾಲಾಡಿ ಶ್ರೀನಿವಾಸ ಶೆಟ್ಟಿ, ತಮ್ಮ ಜಮೀನು, ಆಸ್ತಿಯನ್ನೇ ಮಾರಾಟ ಮಾಡಿ ಜನಸೇವೆ ಮಾಡಿದ ಅಪರೂಪದ ರಾಜಕಾರಣಿಯಾಗಿದ್ದಾರೆ. ಸದ್ಯ ಚುನಾವಣೆಯಿಂದ ಹಿಂದೆಸರಿಯುವ ಮೂಲಕ ರಾಜಕಾರಣಕ್ಕೆ ನಿವೃತ್ತಿ ಘೋಷಿಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ಸಿಎಂ ಬೊಮ್ಮಯಿ ತೆರೆ

ನಾನು ನನ್ನ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಇತ್ತೀಚೆಗೆ ಹಾವೇರಿಯಲ್ಲಿ ಸ್ಟಷ್ಟಣೆ ನೀಡಿದ್ದರು. ಆ ಮೂಲಕ ಸಿಎಂ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ತೆರೆ ಎಳೆದಿದ್ದರು. ಈ ಹಿಂದೆ ಸಿಎಂ ಬೊಮ್ಮಾಯಿ ಶಿಗ್ಗಾವಿ ಅದರ ಜೊತೆಗೆ ದಾವಣಗೆರೆ ಉತ್ತರ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಪೂರಕವೆಂಬಂತೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್​.ಎ.ರವೀಂದ್ರನಾಥ್​ ಅವರು ಈ ಬಾರಿ ಸ್ಪರ್ಧಿಸದಿರುವುದು ಅನುಮಾನ ಎನ್ನಲಾಗಿತ್ತು. ಆದರೆ ಬಳಿಕ ಸಿಎಂ ಬೊಮ್ಮಾಯಿ ತಮ್ಮ ಕ್ಷೇತ್ರ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ನಮ್ಮ ನಾಯಕರನ್ನು ಗುರಿಯಾಗಿಸಿ ಇ.ಡಿ, ಐಟಿ ದಾಳಿಯ ಸುಳಿವು ದೊರೆತಿದೆ; ಕಾಂಗ್ರೆಸ್

ನಿರೀಕ್ಷೆಯಂತೆ ಈ ಬಾರಿಯೂ ಶಾಮನೂರು ಶಿವಕಂರಪ್ಪಗೆ ಟಿಕೆಟ್​ 

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿಗೆ ಗೆಲ್ಲುವ ಮೂಲಕ ಹ್ಯಾಟ್ರಿಕ್​ ಸಾಧಿಸಿರುವ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಕಂರಪ್ಪ ಅವರಿಗೆ ನಿರೀಕ್ಷೆಯಂತೆ ಕಾಂಗ್ರೆಸ್​ ಈ ಬಾರಿಯೂ ಟಿಕೆಟ್​ ನೀಡಿದೆ. ಆ ಮೂಲಕ ಸತತ 6ನೇ ಸಲ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇನ್ನು ಕಾಂಗ್ರೆಸ್​ ಟಿಕೆಟ್​ ನೀಡಲು ಕಾರಣವೂ ಇದೆ. 90ರ ಗಡಿ ದಾಟಿದ, ಶಾಸಕ ಶಾಮನೂರು ಶಿವಕಂರಪ್ಪ ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿದ್ದು ಪ್ರಬಲ ಲಿಂಗಾಯತ ಸಮುದಾಯ ಮುಖಂಡರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:21 am, Wed, 5 April 23