AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಗೆ ನೇತೃತ್ವದ ಸಭೆ ಅಂತ್ಯ: ಬೊಮ್ಮಾಯಿ ಸರ್ಕಾರ ವಿರುದ್ಧ ಹೋರಾಟ, ಯಾತ್ರೆ, ಸಮಾವೇಶ ನಡೆಸಲು ತೀರ್ಮಾನ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ಸಭೆ ಬಳಿಕ ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಏನೆಲ್ಲಾ ಚರ್ಚೆಗಳು ನಡೆದವು? ಯಾವೆಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳಲಾಯ್ತು ಎನ್ನುವುದರ ಬಗ್ಗೆ ಮಾಹಿತಿ ನೀಡಿದ್ದು, ಅದು ಈ ಕೆಳಗಿನಂತಿದೆ.

ಖರ್ಗೆ ನೇತೃತ್ವದ ಸಭೆ ಅಂತ್ಯ: ಬೊಮ್ಮಾಯಿ ಸರ್ಕಾರ ವಿರುದ್ಧ ಹೋರಾಟ, ಯಾತ್ರೆ, ಸಮಾವೇಶ ನಡೆಸಲು ತೀರ್ಮಾನ
kharge meeting With Karnataka Congress Leaders
TV9 Web
| Edited By: |

Updated on:Dec 12, 2022 | 7:37 PM

Share

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Election 2023) ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು(ಡಿಸೆಂಬರ್ 12) ದೆಹಲಿಯಲ್ಲಿ  ನಡೆದ ಸಭೆ ಅಂತ್ಯವಾಗಿದೆ. ಕರ್ನಾಟಕ ಕಾಂಗ್ರೆಸ್​ನ 15 ನಾಯಕರೊಂದಿಗೆ ನಡೆದ ಸಭೆಯಲ್ಲಿ 2023ರಲ್ಲಿ ನಡೆಯಲಿರುವ ವಿಧಾನಸಭೆ ಚನಾವಣೆಗೆ ತಯಾರಿ, ಕಾರ್ಯಕ್ರಮಗಳ ರೂಪರೇಷಗಳ ಬಗ್ಗೆ ಚರ್ಚೆಯಾಗಿದೆ. ಅಲ್ಲದೇ ಪ್ರಮುಖವಾಗಿ ಬಿಜೆಪಿ ಸರ್ಕಾರದ ವಿರುದ್ಧದ ಹೋರಾಟದ ಬಗ್ಗೆ ಮಹತ್ವದ ಮಾತುಕತೆಗಳಾಗಿವೆ. ಇನ್ನು ಸಭೆ ಬಳಿಕ ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಚರ್ಚೆಗಳು ನಡೆದವು? ಯಾವೆಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳಲಾಯ್ತು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು.

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುರ್ಜೇವಾಲ, ಖರ್ಗೆ ಅವರ ನೇತೃತ್ವದಲ್ಲಿ ಚುನಾವಣಾ ತಯಾರಿ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ಬೊಮ್ಮಾಯಿ ನೇತೃತ್ವದ ಭ್ರಷ್ಟಾಚಾರ ಸರಕಾರದ ವಿರುದ್ಧ, 40% ಕಮೀಷನ್ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರೆಸಲಿದ್ದೇವೆ. ಮುಂದಿನ‌ 75 ದಿನಗಳು ಅಗ್ರೇಸ್ಸಿವ್ ಆಗಿ ನಮ್ಮ ಹೋರಾಟ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯನ್ನು ಆಡಳಿತದಿಂದ ಕಿತ್ತೊಗೆಯಲು ಮಾರ್ಗಸೂಚಿ ರಚಿಸಿದ್ದೇವೆ. ಕೃಷ್ಣಾ, ಮಹಾದಾಯಿ ಕುರಿತು ಹುಬ್ಬಳ್ಳಿಯಲ್ಲಿ ಜನವರಿ 2ರಂದು ಸಮಾವೇಶ ಮಾಡಲಿದ್ದೇವೆ. ಚಿತ್ರದುರ್ಗದಲ್ಲಿ ಜನವರಿ 8 ರಂದು SC,ST ಸಮಾವೇಶ ನಡೆಯಲಿದೆ. ಬಳಿಕ ಹಿಂದುಳಿದ ವರ್ಗಗಳ ಸಮಾವೇಶ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

ಇನ್ನು ಜನವರಿ ಮೊದಲ ವಾರದಿಂದ ಜಿಲ್ಲಾಕೇಂದ್ರಗಳಲ್ಲಿ ನಾಯಕರ ಒಗ್ಗಟ್ಟಿನ ಜಂಟಿಯಾತ್ರೆ ನಡೆಯಲಿದ್ದು, 224 ಕ್ಷೇತ್ರದಲ್ಲಿ ಯಾತ್ರೆ ಮೂಲಕ ಪ್ರಚಾರ ನಡೆಸಲಿದ್ದೇವೆ. ಪಟ್ಟಕ್ಕಿಂತ ಕಾಂಗ್ರೆಸ್ ಪಕ್ಷ ಮುಖ್ಯ . ಪಕ್ಷದ ನಾಯಕರ ಮೇಲೆ ವಿಶ್ವಾಸವಿದೆ . ಅಧಿಕಾರಕ್ಕಾಗಿ ಯಾವುದೇ ಭಿನ್ನಮತ ಇರುವುದಿಲ್ಲ. ಕೃಷ್ಣ ನದಿ ನೀರಿನ ಬಗ್ಗೆ ವಿಜಾಪುರದಲ್ಲಿ ಡಿಸೆಂಬರ್ 30ಕ್ಕೆ‌ ಸಮಾವೇಶ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:13 pm, Mon, 12 December 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ