AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಭರ್ಜರಿ ತಯಾರಿ: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ವಿಭಾಗಗಳಿಗೆ ನಾಯಕರನ್ನು ನೇಮಿಸಿದ AICC

ಕರ್ನಾಟಕ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ, ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಭರ್ಜರಿ ತಯಾರಿ: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ವಿಭಾಗಗಳಿಗೆ ನಾಯಕರನ್ನು ನೇಮಿಸಿದ AICC
ಕಾಂಗ್ರೆಸ್​
TV9 Web
| Edited By: ವಿವೇಕ ಬಿರಾದಾರ|

Updated on:Jan 15, 2023 | 6:50 AM

Share

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ (Karnataka Assembly Election 2023)  ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯನ್ನು ಗಂಭೀರಾವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ (C0ngress) ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ಹಂಚಿಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಅಖಿಲ ಕರ್ನಾಟಕ ಸಂಘಟನಾ ಕೋ ಚೇರ್ ಮನ್ ಹಾಗೂ ವಿಭಾಗವಾರು ಕೋ ಚೇರ್ ಮನ್​ಗಳನ್ನು ನೇಮಿಸಿದೆ.

ಕೆಪಿಸಿಸಿ ಸಂಘಟನಾ ಉಪಾಧ್ಯಕ್ಷರಾಗಿ ಬಿ.ಎಲ್.ಶಂಕರ್​ ಅವರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಕರ್ನಾಟಕದ ಕಲಬುರಗಿ, ಮೈಸೂರು, ಕರಾವಳಿ, ಬೆಳಗಾವಿ, ಮಧ್ಯ ಕರ್ನಾಟಕ, ಬೆಂಗಳೂರು ವಿಭಾಗಗಳಿಗೆ ಕೋ ಚೇರ್ ಮನ್​ಗಳನ್ನು ನೇಮಿಸಿದೆ. ಅಲ್ಲದೇ 10 ಜನರ ಸಾಮಾಜಿಕ ಜಾಲತಾಣ ತಂಡ, 9 ಜನರ ಮಾಧ್ಯಮ ವಿಭಾಗ, 29 ಜಿಲ್ಲಾ ಚೇರ್​ಮನ್ ಹಾಗೂ 32 ಜನರ ಮುಖ್ಯ ಸಂಯೋಜಕರು, 41 ಸಂಯೋಜಕರನ್ನು ಸಹ ನೇಮಕ ಮಾಡಿದೆ.

ವಿಭಾಗವಾರು ಕೋ ಚೇರ್ ಮನ್

ಅಖಿಲ ಕರ್ನಾಟಕ ಸಂಘಟನಾ ಕೋ ಚೇರ್ ಮನ್ ಬಿ.ಎಲ್ ಶಂಕರ್ ಕಲಬುರಗಿ- ಡಾ.ಶರಣಪ್ರಕಾಶ್ ಪಾಟೀಲ್ ಬೆಳಗಾವಿ ವಿಭಾಗ- ಸಂತೋಷ್ ಲಾಡ್ ಬೆಂಗಳೂರು ವಿಭಾಗ- ರಿಜ್ವಾನ್ ಅರ್ಷದ್ ಮೈಸೂರು ವಿಭಾಗ- ಡಾ.ಯತೀಂದ್ರ ಸಿದ್ದರಾಮಯ್ಯ ಮಧ್ಯ ಕರ್ನಾಟಕ ವಿಭಾಗ- ಚಂದ್ರಪ್ಪ ಕರಾಳಿ ಕರ್ನಾಟಕ- ಮಂಜುನಾಥ್ ಭಂಡಾರಿ

ಮುಖ್ಯ ಸಂಯೋಜರು 

ಶಾಸಕರಾದ ನಾಗೇಂದ್ರ, ಆನಂದ್ ನ್ಯಾಮಗೌಡ, ಅಂಜಲಿ ಲಿಂಬಾಳ್ಕರ್, ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ರೂಪ ಶಶಿಧರ್, ಗಣೇಶ್ ಹುಕ್ಕೇರಿ, ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಗೋವಿಂದರಾಜು, ನಜೀರ್ ಅಹಮ್ಮದ್, ರಾಜೇಂದ್ರ, ಮಾಜಿ ಪರಿಷತ್ ಸದಸ್ಯ ವಿಆರ್ ಸುದರ್ಶನ್, ಮಾಜಿ ಸಚಿವರಾದ ಎ.ಬಿ ಪಾಟೀಲ್, ಕಿಮ್ಮನೆ ರತ್ನಾಕರ್, ರಾಣಿ ಸತೀಶ್ ಸೇರಿದಂತೆ ಒಟ್ಟು 32 ಜನರನ್ನು ಮುಖ್ಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.

Published On - 10:46 pm, Sat, 14 January 23

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್