ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ: ಸಂಸದ ಡಿಕೆ ಸುರೇಶ್ ಏನಂದ್ರು ನೋಡಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತೇನು ಇಲ್ಲ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ರಾಮನಗರದಲ್ಲಿ ಹೇಳಿದ್ದಾರೆ. ಅಲ್ಲದೆ, ಖರ್ಗೆ ರಾಜ್ಯ ರಾಜಕೀಯದ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಏನು ಉತ್ತರ ಕೊಡಬೇಕೋ ಕೊಟ್ಟಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ: ಸಂಸದ ಡಿಕೆ ಸುರೇಶ್ ಏನಂದ್ರು ನೋಡಿ
ಡಿಕೆ ಸುರೇಶ್ ಮತ್ತು ಮಲ್ಲಿಕಾರ್ಜುನ ಖರ್ಗೆ
Follow us
|

Updated on:Apr 10, 2023 | 5:11 PM

ರಾಮನಗರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarujuna Kharge) ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತೇನು ಇಲ್ಲ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಖರ್ಗೆ ರಾಜ್ಯ ರಾಜಕಾರಣ ಪ್ರವೇಶದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಏನು ಉತ್ತರ ಕಡಬೇಕೋ ಅದನ್ನು ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅತ್ಯಂತ ಹಿರಿಯ ವರಿಷ್ಠರಾಗಿದ್ದಾರೆ. ಹೈಕಮಾಂಡ್ ಆದೇಶ ಪಾಲನೆ ಮಾಡುತ್ತೇವೆ ಎಂದರು. ಡಿಕೆಸುರೇಶ್​ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಸಚಿವ ಮುನಿರತ್ನ (Muniratna) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುನಿರತ್ನರನ್ನು ನಾನು ಯಾಕೆ ಟಾರ್ಗೆಟ್ ಮಾಡಲಿ. ಅವರಿಗೆ ಏನು ಆಗಿದೆಯೋ ಗೊತ್ತಿಲ್ಲ, ಭ್ರಮೆಯಲ್ಲಿ ಇದ್ದಾರೆ. ನಾನು ಎಲ್ಲಾ ಕಡೆ ಕೆಲಸ ಮಾಡುತ್ತಿದ್ದೇನೆ, ಅದು ಅವರಿಗೆ ಕಾಣುತ್ತಿಲ್ಲ ಎಂದರು.

ಸಚಿವ ಮುನಿರತ್ನ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕುಸುಮಾ ಹೆಚ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿದಿದ್ದು, ಇವರಿಗೆ ಡಿಕೆ ಸುರೇಶ್ ಸಾಥ್ ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ಕ್ಷೇತ್ರದಲ್ಲಿ ಮತದಾರರಿಗೆ ತವಾ ಹಂಚಲಾಗುತ್ತಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿಗಳು, ಓರ್ವನ ಸಹಿತ ಮತದಾರರಿಗೆ ಹಂಚುತ್ತಿದ್ದ ಬಾಕ್ಸ್​ಗಳನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಕೆಲವರು ಪರಾರಿಯಾಗಿದ್ದರು. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರಿಗೆ ಆಮಿಷವೊಡ್ಡಿದ ಆರೋಪ ಸಂಬಂಧ ಕುಸುಮಾ ಹಾಗೂ ಡಿಕೆ ಸುರೇಶ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಮೂರು ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆ: ಡಿಕೆ ಸುರೇಶ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಡಿಕೆ ಸುರೇಶ್, ರಾಮನಗರ ಜಿಲ್ಲೆಯವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗುತ್ತಾರೆ. ಕೆಪಿಸಿಸಿ ಅಧ್ಯಕ್ಷರು, ಸಿಎಲ್​ಪಿ ನಾಯಕರು ಹೆಸರು ಕಳುಹಿಸಿದ್ದಾರೆ. ಮೂರು ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆ ಆಗಲಿದೆ. ಕೆಪಿಸಿಸಿ ಅಧ್ಯಕ್ಷರಿಗೆ ರಾಜ್ಯದ 224 ಕ್ಷೇತ್ರಗಳ ಜವಾಬ್ದಾರಿ ನೀಡಿದ್ದಾರೆ. ನನ್ನ ಲೋಕಸಭಾ ಕ್ಷೇತ್ರದ 8 ಕ್ಷೇತ್ರಗಳ ಬಗ್ಗೆ ನಾನು ಗಮನಹರಿಸಿದ್ದೇನೆ. ಕೆಲ ರಾಜಕೀಯ ಲೆಕ್ಕಾಚಾರ ಆಗುತ್ತಿದೆ, ಹಾಗಾಗಿ 3ನೇ ಪಟ್ಟಿ ವಿಳಂಬವಾಗುತ್ತಿದೆ. ಕಾಂಗ್ರೆಸ್​​ ಪಕ್ಷದ ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ: ಕುಮಾರಸ್ವಾಮಿ ಘೋಷಣೆ

ಕೆಲವು ಕ್ಷೇತ್ರಗಳಲ್ಲಿ ವಿರೋಧ ಪಕ್ಷದ ಅಭ್ಯರ್ಥಿಗಳನ್ನ ಗಮನದಲ್ಲಿ ಇಟ್ಟುಕೊಂಡು ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಲಾಗುತ್ತದೆ ಎಂದು ಹೇಳಿದ ಡಿಕೆ ಸುರೇಶ್, ಜಿಲ್ಲೆಯಲ್ಲಿ ಸಮರ್ಥ ನಾಯಕತ್ವ ಇದೆ. ಒಂದು ಜಾತಿಗೆ ನಾವು ಅಂಟುಕೊಂಡಿಲ್ಲ. ನನ್ನ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಪ್ರಬಲವಾಗಿದೆ. ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದರು. ಹದಿನೈದು ಜನ ಶಾಸಕರು, ಮುಖಂಡರು ಜೆಡಿಎಸ್​ಗೆ ಬರುತ್ತಾರೆ ಎಂಬ ಹೆಚ್​ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೋಗಬಹುದೇನೋ, ಕುಮಾರಸ್ವಾಮಿಯವರಷ್ಟು ತಿಳುವಳಿಕೆ ನಮಗಿಲ್ಲ ಎಂದು ವ್ಯಂಗ್ಯವಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Mon, 10 April 23

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!