ಕರ್ನಾಟಕದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು

ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಕರ್ನಾಟಕದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು
ಮದ್ಯ
Follow us
ಆಯೇಷಾ ಬಾನು
|

Updated on: May 03, 2023 | 2:38 PM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಎಲ್ಲೆಡೆ ಚುನಾವಣೆ ಹಬ್ಬದ ಸಂಭ್ರಮ ಜೋರಾಗಿದೆ. ಆದ್ರೆ ಚುನಾವಣೆಯ ಬಿಸಿ ಮದ್ಯ ಪ್ರಿಯರಿಗೆ ತಟ್ಟಲಿದೆ(Liquor Ban). ಏಕೆಂದರೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 3 ದಿನ ಮದ್ಯ ನಿಷೇಧಿಸಲಾಗಿದೆ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ದೃಷ್ಟಿಯಿಂದಲೂ ಮದ್ಯ ಮಾರಾಟದ ಮೇಲೆ ನಿಷೇಧ ಹೇರೋದು ಅತ್ಯಗತ್ಯವಾಗಿದೆ. ಹೀಗಾಗಿ ಮತದಾನ ದಿನದ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಸಿಗೋದಿಲ್ಲ.

ಇದನ್ನೂ ಓದಿ: Bajrang Dal: ಹೈದರಾಬಾದ್‌ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಜರಂಗದಳದ ಕಾರ್ಯಕರ್ತರ ಬಂಧನ

ಮೇ‌ 8 ರಿಂದ 10 ರವರೆಗೂ ಫುಲ್ ಡ್ರೈ ಡೇ. ಮೇ‌ 10 ಎಲೆಕ್ಷನ್ ‌ಮುಗಿಯುವ ತನಕ ಮದ್ಯ ಸರಬರಾಜು ಬಂದ್ ಮಾಡಲಾಗುತ್ತೆ. ನೆರೆಯ ರಾಜ್ಯಗಳಲ್ಲೂ‌ ಮದ್ಯ ಬಂದ್ ಆಗಲಿದೆ. ಕೇರಳ, ಆಂಧ್ರ ಪ್ರದೇಶ, ಗೋವ, ತಮಿಳುನಾಡಿಗೂ ಈಗಾಗಲೇ ಡ್ರೈ ಡೇಗೆ ಅಬಕಾರಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮದ್ಯ ಸಿಗದಂತೆ ಕಣ್ಣಿಡಲಾಗುತ್ತೆ.  ಎಲೆಕ್ಷನ್ ಮುಗಿದ ಬೆನ್ನಲ್ಲೇ ಕೌಂಟಿಂಗ್ ಗೂ‌ ಡ್ರೈ ಡೇ ಸೂಚಿಸಲಾಗಿದೆ. ಚುನಾವಣೆ ಹಿನ್ನಲೆ ಕಟ್ಟುನಿಟ್ಟಿನ ಕ್ರಮಕ್ಕೆ ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಎಲ್ಲಾ ಬಾರ್ ರೆಸ್ಟೋರೆಂಟ್, ರಿಟೇಲ್ ಮಾರಾಟ ಮಳಿಗೆಗಳ ಮೇಲೆ ನಿಗಾ ಇಡಲಾಗಿದೆ. ಈಗಾಗಲೇ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಗಳಿಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸುವ ಬಗ್ಗೆ ಸೂಚನೆ ನೀಡಲಾಗಿದೆ. ಫೈ ಸ್ಟಾರ್ ಹೋಟೆಲ್ ನಲ್ಲೂ‌ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಿಯಮ‌ ಉಲ್ಲಂಘಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?