ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದಕ್ಕೆ ಸ್ಪಷ್ಟ ಕಾರಣ ನೀಡಿದ ಅಮಿತ್ ಶಾ; ಏನದು?

|

Updated on: May 08, 2023 | 4:46 PM

ಮುಸ್ಲಿಮರಿಗೆ ಶೇ 4ರ ಮೀಸಲಾತಿ ನೀಡುವುದು ಅಸಾಂವಿಧಾನಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದಕ್ಕೆ ಸ್ಪಷ್ಟ ಕಾರಣ ನೀಡಿದ ಅಮಿತ್ ಶಾ; ಏನದು?
ಅಮಿತ್ ಶಾ
Follow us on

ಬೆಂಗಳೂರು: ಮುಸ್ಲಿಮರಿಗೆ ಶೇ 4ರ ಮೀಸಲಾತಿ ನೀಡುವುದು ಅಸಾಂವಿಧಾನಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 202) ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೇ ‘ಎಎನ್​ಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶವಿಲ್ಲ. ಹೀಗಾಗಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವುದು ಅಸಂವಿಧಾನಿಕವಾಗುತ್ತದೆ. ಇದೇ ಕಾರಣಕ್ಕೆ ಕರ್ನಾಟಕ ಬಿಜೆಪಿ ಸರ್ಕಾರ ತೆಗೆದುಹಾಕಿತು ಎಂದರು.

ಸಾಕಷ್ಟು ಯೋಚಿಸಿ ಒಳಮೀಸಲಾತಿ ನೀಡಲಾಗಿದೆ. ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ ಮೀಸಲಾತಿಯನ್ನು ವಾಪಸ್ ನೀಡಲಿದ್ದು, ಹೆಚ್ಚಿಸುತ್ತದೆ ಎಂದು ಆ ಪಕ್ಷದ ನಾಯಕ ಸಿದ್ದರಾಮಯ್ಯ ಚುನಾವಣಾ ಪ್ರಚಾರದ ವೇಳೆ ಭರವಸೆ ನೀಡಿದ್ದಾರೆ. ಯಾರ ಮೀಸಲಾತಿಯನ್ನು ಅವರು ಕಡಿತಗೊಳಿಸುತ್ತಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಶಾ ಹೇಳಿದ್ದಾರೆ.

ಇದಕ್ಕೂ ಮುನ್ನ ಹುನಗುಂದದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಿಷೇಧಿಸುವ ಮೂಲಕ ಬಿಜೆಪಿ ದೇಶದ ಭದ್ರತೆಯನ್ನು ಹೆಚ್ಚಿಸದೆ. ಆದರೆ ಕಾಂಗ್ರೆಸ್ ಪಕ್ಷವು ಅದರ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ ಶಾ, ‘ಕೈ’ ಪಕ್ಷವು ಎಲ್ಲೆಡೆ ಸುಳ್ಳು ಭರವಸೆಗಳನ್ನು ನೀಡುತ್ತದೆ ಮತ್ತು ಚುನಾವಣೆಯಲ್ಲಿ ಸೋಲುತ್ತದೆ. ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಂಬಲವನ್ನು ಪಡೆಯುತ್ತಾರೆ. ಇದನ್ನು ಕರ್ನಾಟಕದ ಜನರು ಇಷ್ಟಪಡುವುದಿಲ್ಲ ಮತ್ತು ಆ ಬಗ್ಗೆ ಕೋಪಗೊಂಡಿದ್ದಾರೆ ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ: Karnataka Polling Booth: ಕರ್ನಾಟಕ ವಿಧಾನಸಭಾ ಚುನಾವಣಾ ಮತಗಟ್ಟೆ ವಿವರಗಳನ್ನು ತಿಳಿಯುವುದು ಹೇಗೆ?

ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಎಲ್ಲಾ ಪ್ರದೇಶಗಳಲ್ಲಿ ಪ್ರವಾಸ ಮಾಡಿದ್ದೇನೆ ಮತ್ತು ರಾಜ್ಯದಲ್ಲಿ ಮತ್ತೆ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

224 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಯಾವುದೇ ರಾಜಕೀಯ ಪಕ್ಷಕ್ಕೆ ಬಹುಮತ ಪಡೆಯಲು 113 ಸ್ಥಾನಗಳು ಬೇಕಾಗುತ್ತವೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ