AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka elections: ಕೆಲವು ಹಾಲಿ ಶಾಸಕರಿಗೆ ಯಾಕಿಲ್ಲ ಟಿಕೆಟ್; ಅಮಿತ್ ಶಾ ಕೊಟ್ಟ ಉತ್ತರ ಇಲ್ಲಿದೆ

ಜಗದೀಶ್ ಶೆಟ್ಟರ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ತಾವು ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್​​ನವರು ಭಾವಿಸಿದರೆ ಅದು ಸಾಧ್ಯವಿಲ್ಲ ಎಂದು ಶಾ ಹೇಳಿದ್ದಾರೆ.

Karnataka elections: ಕೆಲವು ಹಾಲಿ ಶಾಸಕರಿಗೆ ಯಾಕಿಲ್ಲ ಟಿಕೆಟ್; ಅಮಿತ್ ಶಾ ಕೊಟ್ಟ ಉತ್ತರ ಇಲ್ಲಿದೆ
ಅಮಿತ್ ಶಾ
Ganapathi Sharma
|

Updated on: Apr 22, 2023 | 4:32 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವು ಮಂದಿ ಹಾಲಿ ಶಾಸಕರಿಗೆ ಬಿಜೆಪಿ (BJP) ಟಿಕೆಟ್ ನೀಡದಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷವು ಸದಾ ಬದಲಾವಣೆಯಲ್ಲಿ ನಂಬಿಕೆ ಇರಿಸಿದೆ ಎಂದು ಅವರು ಹೇಳಿದ್ದಾರೆ. ‘ಇಂಡಿಯಾ ಟುಡೇ ಕರ್ನಾಟಕ ರೌಂಡ್ ಟೇಬಲ್ 2023’ನಲ್ಲಿ ಮಾತನಾಡಿದ ಅವರು, ಬಿಜೆಪಿಯು ಬದಲಾವಣೆಯಲ್ಲಿ ನಂಬಿಕೆ ಇರಿಸಿದೆ. ಆದಾಗ್ಯೂ ಕರ್ನಾಟಕದಲ್ಲಿ ಕಡಿಮೆ ಬದಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಪ್ರಮುಖ ನಾಯಕರು ಪಕ್ಷ ತೊರೆದ ಸಂದರ್ಭದಲ್ಲೇ ಶಾ ಈ ಹೇಳಿಕೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ಟಿಕೆಟ್ ಸಿಗದ ಕಾರಣ ಪಕ್ಷ ತೊರೆದು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬಿಜೆಪಿಗೆ ಸ್ಪಷ್ಟ ಬಹುಮತ; ಅಮಿತ್ ಶಾ ವಿಶ್ವಾಸ

ಜಗದೀಶ್ ಶೆಟ್ಟರ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ತಾವು ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್​​ನವರು ಭಾವಿಸಿದರೆ ಅದು ಸಾಧ್ಯವಿಲ್ಲ. ಶೆಟ್ಟರ್ ಮಾತ್ರ ಕಾಂಗ್ರೆಸ್ ಸೇರಿದ್ದಾರೆಯೇ ವಿನಃ ನಮ್ಮ ವೋಟ್​ ಬ್ಯಾಂಕ್ ಆಗಲೀ ನಮ್ಮ ಪಕ್ಷದ ಕಾರ್ಯಕರ್ತರಾಗಲೀ ಕಾಂಗ್ರೆಸ್ ಸೇರಿಲ್ಲ. ಭರ್ಜರಿ ಬಹುಮತದೊಂದಿಗೆ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಮರಳಲಿದ್ದೇವೆ ಎಂದು ಶಾ ಹೇಳಿದ್ದಾರೆ.

ಕೆಲವು ನಾಯಕರಿಗೆ ಟಿಕೆಟ್ ನೀಡದಿರುವುದಕ್ಕೆ ಕಾರಣ ನೀಡಿದ ಅವರು, ಅನೇಕ ವಿಷಯಗಳನ್ನು ಗಣನೆಗೆ ತೆಗೆದುಕೊಂಡು ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಅವರು ಕಳಂಕಿತರಾಗಿರಬಾರದು ಮತ್ತು ಗೌರವಾನ್ವಿತರಾಗಿರಬೇಕು ಎಂಬುದೂ ಒಂದು ವಿಚಾರ. ಟಿಕೆಟ್ ಯಾಕೆ ನಿರಾಕರಿಸಲಾಗಿದೆ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಏ. 30ರಂದು ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ; ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

ಹಾಗೆಂದು ಟಿಕೆಟ್​ ದೊರೆಯದವರನ್ನೆಲ್ಲ ಕಳಂಕಿತರೆನ್ನಲಾಗದು. ಹೊಸಮುಖಗಳಿಗೆ ಅವಕಾಶ ನೀಡಲು, ಹೊಸ ತಲೆಮಾರಿನವರಿಗೆ ಅವಕಾಶ ಕಲ್ಪಿಸುವ ದೃಷ್ಟಿಯಿಂದಲೂ ಕೆಲವು ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನೀಡಿಲ್ಲ. ಟಿಕೆಟ್ ದೊರೆಯದವರನ್ನೆಲ್ಲ ಕಳಂಕಿತರು ಎಂಬ ವದಂತಿ ಹರಡುವುದು ಬೇಡ ಎಂದೂ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ನಾಮಪತ್ರ ಪರಿಶೀಲನೆಯೂ ಮುಗಿದಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ