Karnataka Assembly Elections 2023: ಅಮಿತ್ ಶಾ ದೆಹಲಿಗೆ ಹಿಂದಿರುಗಿದ ನಂತರವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ​

ಅರುಣಾಚಲ ಪ್ರದೇಶ ಪ್ರವಾಸದಲ್ಲಿರುವ ಕೇಂದ್ರ ಸಚಿವ ಅಮಿತ್​ ಶಾ, ದೆಹಲಿಗೆ ಹಿಂದಿರುಗಿದ ನಂತರವೇ ಬಿಜೆಪಿ ಪಟ್ಟಿ ಫೈನಲ್​ ಎನ್ನಲಾಗುತ್ತಿದೆ.​

Karnataka Assembly Elections 2023: ಅಮಿತ್ ಶಾ ದೆಹಲಿಗೆ ಹಿಂದಿರುಗಿದ ನಂತರವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ​
ಕೇಂದ್ರ ಸಚಿವ ಅಮಿತ್​ ಶಾImage Credit source: businesstoday.in
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 10, 2023 | 9:21 PM

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದರೂ ಬಿಜೆಪಿ ಮಾತ್ರ ಈವರಗೂ ಅಭ್ಯರ್ಥಿಗಳ ಪಟ್ಟಿಯನ್ನು (BJP Candidates List) ಬಿಡುಗಡೆ ಮಾಡಿಲ್ಲ. ಟಿಕೆಟ್​ ಘೋಷಣೆಗೂ ಮುನ್ನವೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಸದ್ಯ ಮೂಲಗಳ ಪ್ರಕಾರ ಅರುಣಾಚಲ ಪ್ರದೇಶ ಪ್ರವಾಸದಲ್ಲಿರುವ ಕೇಂದ್ರ ಸಚಿವ ಅಮಿತ್​ ಶಾ, ದೆಹಲಿಗೆ ಹಿಂದಿರುಗಿದ ನಂತರವೇ ಬಿಜೆಪಿ ಪಟ್ಟಿ ಫೈನಲ್​ ಎನ್ನಲಾಗುತ್ತಿದೆ.​ ನಾಳೆ ಸಂಜೆ 4 ಗಂಟೆಗೆ ದೆಹಲಿಗೆ ಹಿಂದಿರುಗುವ ಅಮಿತ್ ಶಾ, ಬಳಿಕ ರಾಜ್ಯ ನಾಯಕರ ಜತೆ ಸಭೆ ನಡೆಸಲಿದ್ದು, ವಿಸ್ತೃತ ಚರ್ಚೆ ನಂತರವೇ​ ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಳೆ ತಡರಾತ್ರಿ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಸಿಎಂ ಬೊಮ್ಮಾಯಿ

ಈ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾರವರು ದೆಹಲಿಯಲ್ಲಿ ಇಲ್ಲ. ನಾಳೆ ಸಂಜೆ ದೆಹಲಿಗೆ ವಾಪಸಾಗುತ್ತಾರೆ. ಹೀಗಾಗಿ ನಾಳೆ ತಡರಾತ್ರಿ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಮಾಡುತ್ತೇವೆ ಎಂದು ತಿಳಿಸಿದರು. ಅಭ್ಯರ್ಥಿಗಳ ಪಟ್ಟಿ ಸಂಬಂಧ ನಿನ್ನೆ, ಇಂದು ಸುದೀರ್ಘ ಸಭೆ ನಡೆದಿದೆ. ಕೆಲ ಕ್ಷೇತ್ರಗಳ ಬಗ್ಗೆ ವರಿಷ್ಠ ನಾಯಕರು ಹೆಚ್ಚಿನ ಮಾಹಿತಿ ಕೇಳಿದ್ದರು. ಈ ಕ್ಷೇತ್ರಗಳ ಸಂಬಂಧ ಇಂದು ಗಂಭೀರ ಚರ್ಚೆ ನಡೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಎಲ್ಲಾ ಸಭೆಗಳಲ್ಲೂ ಭಾಗಿಯಾಗಿ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಲಹೆ ನೀಡಿದ್ದಾರೆ ಎಂದರು. ಶಿಗ್ಗಾಂವಿಯಲ್ಲೇ ಸ್ಪರ್ಧೆಗೆ ಬಯಕೆ ಇದೆ, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದರು.

ಇದನ್ನೂ ಓದಿ: Karnataka Assembly Polls 2023: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಫೈನಲ್, ಪಟ್ಟಿ ಬಿಡುಗಡೆಗೆ ಕೌಂಟ್​ಡೌನ್

ಯಾವ ಆಧಾರದ ಮೇಲೆ ಟಿಕೆಟೆ ಸಿಗುತ್ತೆ?

ಭ್ರಷ್ಟಾಚಾರ ಆರೋಪಿಗಳಿಗೆ, ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡವರಿಗೆ ಟಿಕೆಟ್ ಸಿಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ನಮ್ಮಲ್ಲಿ ಕೆಲ ವಿಷಯಗಳ ಬಗ್ಗೆ ಸ್ಪಷ್ಟತೆ ಇದೆ. ಅದರ ರೀತಿಯಲ್ಲೇ ಟಿಕೆಟ್ ಫೈನಲ್ ಆಗುತ್ತೆ. ಎಲ್ಲ ಮಾನದಂಡದ ಬಗ್ಗೆ ಚರ್ಚೆ ಆಗಿದೆ. ಈ ಬಗ್ಗೆಯೂ ಚರ್ಚೆ ಆಗಿದೆ ಎಂದು ಸ್ಪಷ್ಟನೆ ನೀಡಿದರು.

ಯಡಿಯೂರಪ್ಪ ಬಿಟ್ಟು ಸಭೆ ನಡೆಸಿದ ಅಮಿತ್ ಶಾ

ಇಂದು ಬೆಳಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರನ್ನು ಬಿಟ್ಟು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಇತರೆ ನಾಯಕರೊಂದಿಗೆ ಸಭೆ ನಡೆಸಿದ್ದರು. ಈ ಸಭೆ ಬಳಿಕ ಜೆಪಿ ನಡ್ಡಾ ಅವರು ಸಿಎಂ ಬೊಮ್ಮಾಯಿ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದ್ದಾರೆ. ಬಳಿಕ ಯಡಿಯೂರಪ್ಪ ಜೊತೆ ನಡ್ಡಾ ಅವರು ಸಭೆ ನಡೆಸಿ ಕೊನೆಯದಾಗಿ ಮಾತುಕತೆ ನಡೆಸಿದ್ದಾರೆ. ಸುಮಾರು 10-20 ನಿಮಿಷಗಳ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ: ಸಂಸದ ಡಿಕೆ ಸುರೇಶ್ ಏನಂದ್ರು ನೋಡಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಗೆ ಸರಣಿ ಸಭೆಗಳು, ಸುದೀರ್ಘ ಚರ್ಚೆಗಳು ನಡೆಯುತ್ತಿದ್ದರೆ ಇತ್ತ ದಿಲ್ಲಿ ನಾಯಕರ ದಾಳಕ್ಕೆ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೆಟ್ ಟೆನ್ಷನ್ ಶುರುವಾಗಿದೆ. ಯಾಕಂದ್ರೆ ಈ ಬಾರಿ 16 ಅಥವಾ ಅದಕ್ಕಿಂತ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಆಗುತ್ತೆ ಎನ್ನುವ ಮಾಹಿತಿ ಬಿಜೆಪಿ ಪಾಳಯದಿಂದಲೇ ತಿಳಿದುಬಂದಿದೆ. ಹೀಗಾಗಿ ಕೇಸರಿ ಮನೆಯಲ್ಲಿ ಕಂಪನ ಎದ್ದಿದ್ದು, ಯಾರಿಗೆ ಟಿಕೆಟ್ ಮಿಸ್ಸಾಗುತ್ತೋ ಎನ್ನುವ ತಳಮಳ ಶುರುವಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Mon, 10 April 23

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ