Amit Shah: ಚುನಾವಣಾ ಪೂರ್ವ ಸಮೀಕ್ಷೆ ಕಾಂಗ್ರೆಸ್ ಪರ ಇದ್ದರೂ ಗೆಲ್ಲುವುದು ಬಿಜೆಪಿಯೇ; ಅಮಿತ್ ಶಾ
ಚುನಾವಣಾ ಪೂರ್ವ ಸಮೀಕ್ಷೆಗಳು ಯಾವಾಗಲೂ ಕಾಂಗ್ರೆಸ್ ಪರವಾಗಿಯೇ ಇರುತ್ತವೆ. ಆದರೆ, ಚುನಾವಣಾ ಫಲಿತಾಂಶ ಪ್ರಕಟವಾದಾಗ ಗೆಲುವು ಬಿಜೆಪಿಯದ್ದೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಚುನಾವಣಾ ಪೂರ್ವ ಸಮೀಕ್ಷೆಗಳು ಯಾವಾಗಲೂ ಕಾಂಗ್ರೆಸ್ ಪರವಾಗಿಯೇ ಇರುತ್ತವೆ. ಆದರೆ, ಚುನಾವಣಾ ಫಲಿತಾಂಶ ಪ್ರಕಟವಾದಾಗ ಗೆಲುವು ಬಿಜೆಪಿಯದ್ದೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳು ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವರದಿಗಳ ಬೆನ್ನಲ್ಲೇ ಶಾ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದೇ ಹೇಳುತ್ತವೆ. ಪ್ರಬಲ ಪೈಪೋಟಿ ಇವೆ ಎಂದೂ ಹೇಳುತ್ತವೆ. ಆದರೆ, ಫಲಿತಾಂಶ ಪ್ರಕಟವಾದ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಿ ಆ ಪಕ್ಷದಿಂದ ಚುನಾವಣೆ ಸ್ಪರ್ಧಿಸುತ್ತಿರುವ ಜಗದೀಶ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋಲಲಿದ್ದಾರೆ ಎಂದೂ ಶಾ ಹೇಳಿದ್ದಾರೆ.
ರಾಜ್ಯದಲ್ಲಿ ತಮ್ಮ ಪಕ್ಷ ಸರ್ಕಾರ ರಚಿಸುವ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಡಬಲ್ ಇಂಜಿನ್ ಸರ್ಕಾರ ರಚಿಸಲಿದೆ ಎಂದು ಶಾ ಹೇಳಿದ್ದಾರೆ. ಯಾದಗಿರಿ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಅವರು ಚುನಾವಣಾ ಪ್ರಚಾರ ನಡೆಸಿದ್ದಾರೆ.
ಇದನ್ನೂ ಓದಿ: TV9 Kannada CVoter survey: ಅತಂತ್ರ ವಿಧಾನಸಭೆಯತ್ತ ರಾಜ್ಯ; ಟಿವಿ9, ಸಿವೋಟರ್ ಸಮೀಕ್ಷೆ
ಅತಂತ್ರ ವಿಧಾನಸಭೆಯತ್ತ ರಾಜ್ಯ; ಟಿವಿ9, ಸಿವೋಟರ್ ಸಮೀಕ್ಷೆ
ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ‘ಟಿವಿ9 ಕನ್ನಡ’ ಮತ್ತು ‘ಸಿವೋಟರ್’ ಸಹಭಾಗಿತ್ವದಲ್ಲಿ ನಡೆಸಲಾದ ಸಮೀಕ್ಷಾ ವರದಿ ತಿಳಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಶೇ 40 ರಷ್ಟು ಮತಹಂಚಿಕೆ ಪಡೆಯುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಜೆಪಿ ಶೇ 33.9 ಮತ್ತು ಜೆಡಿಎಸ್ ಶೇ 18.8 ರಷ್ಟು ಮತ ಹಂಚಿಕೆ ಪಡೆಯಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ