ಬೆಳಗಾವಿ: ಎಲ್ಲಾ18 ಕ್ಷೇತ್ರಗಳನ್ನೂ ಬಿಜೆಪಿ ಜೋಳಿಗೆಗೆ ಹಾಕಿ, ಕಾಂಗ್ರೆಸ್ ಪಕ್ಷದವರು ನಮ್ಮ ಸ್ವಾತಂತ್ರ್ಯ ಸೇನಾನಿ ವೀರ್ ಸಾವರ್ಕರ್‌ರನ್ನ ಜೈಲಿಗೆ ಹಾಕಿದವರು – ಅಮಿತ್ ಶಾ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.

Follow us
ಆಯೇಷಾ ಬಾನು
|

Updated on:May 06, 2023 | 3:04 PM

ಬೆಳಗಾವಿ: ರಾಜ್ಯದ 2ನೇ ಅತಿದೊಡ್ಡ ಜಿಲ್ಲೆ ಬೆಳಗಾವಿ ಗೆಲ್ಲಲು ಬಿಜೆಪಿ ಚಾಣಕ್ಯ ಅಮಿತ್ ಶಾ(Amit Shah) ಬೆಳಗಾವಿಗೆ ಎಂಟ್ರಿ ಕೊಟ್ಟಿದ್ದು ಜಿಲ್ಲೆಯ 6 ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ(Karnataka Assembly Elections 2023). ನಾಲ್ಕು ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆ, ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸದ್ಯ ಈಗ ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ನಡೆದಿದ್ದು ಕಳೆದ ಬಾರಿ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲಿ 11 ಕ್ಷೇತ್ರ ಗೆಲ್ಲಿಸಿದ್ರಿ. ಈ ಬಾರಿ 18ಕ್ಕೆ 18 ಕ್ಷೇತ್ರಗಳನ್ನು ಬಿಜೆಪಿಯ ಜೋಳಿಗೆಯಲ್ಲಿ ಹಾಕಿ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬೋಲೋ ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿ ಭಾಷಣ ಆರಂಭಿಸಿದರು. ಬಳಿಕ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕೋ ಬೇಡವೋ ಎಂದು ನೆರೆದ ಜನರನ್ನು ಪ್ರಶ್ನಿಸಿದರು. ಬೆಂಗಳೂರಿಂದ ತಡವಾಗಿ ಬಿಟ್ಟೆ ಹೀಗಾಗಿ ಸವದತ್ತಿಗೆ ಆಗಮಿಸಲು ವಿಳಂಬ ಆಯ್ತು ಕ್ಷಮಿಸಿ. ನನಗೆ ಕನ್ನಡ ಬರಲ್ಲ ಹೀಗಾಗಿ ಹಿಂದಿಯಲ್ಲಿ ಭಾಷಣ ಮಾಡುವೆ. ಈ ಕ್ಷೇತ್ರ ಬಸವಣ್ಣರವರ ಕ್ಷೇತ್ರ, ಜಗತ್ತಿಗೆ ಪ್ರಜಾಪ್ರಭುತ್ವ ಪಾಠ ಮಾಡಿದ ಬಸವಣ್ಣಗೆ ಪ್ರಣಾಮ. ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣಗೆ ಪ್ರಣಾಮ ಎಂದರು.

ಇದನ್ನೂ ಓದಿ:ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವೀರ್‌ ಸಾವರ್ಕರ್‌ ಫೋಟೋ ಅನಾವರಣಗೊಳಿಸಿದ ಸಚಿವ ಬಿ.ಸಿ. ನಾಗೇಶ್  

ಈ ಬಾರಿ 18ಕ್ಕೆ 18 ಕ್ಷೇತ್ರಗಳನ್ನು ಬಿಜೆಪಿಯ ಜೋಳಿಗೆಯಲ್ಲಿ ಹಾಕಿ

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಂಗ್ರೆಸ್ ಪಕ್ಷದವರು ನಮ್ಮ ಸ್ವಾತಂತ್ರ್ಯ ಸೇನಾನಿ ವೀರ್ ಸಾವರ್ಕರ್‌ರನ್ನ ಜೈಲಿಗೆ ಹಾಕಿದ್ರು. ಎರಡು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಏಕೈಕ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್. ಕಾಂಗ್ರೆಸ್ ಪದೇಪದೇ ಸಾವರ್ಕರ್‌ಗೆ ಅಪಮಾನ ಮಾಡಿದ್ರು. ಅರೇ ರಾಹುಲ್ ಬಾಬಾ ಸಾವರ್ಕರ್ ಅಪಮಾನ ಮಾಡ್ತೀರಿ. ನೀವು 10 ಜನ್ಮ ಜೀವಂತ ಇದ್ದರೂ ಸಾವರ್ಕರ್‌ರಂತಹ ಬಲಿದಾನ ನೋಡಕ್ಕಾಗಲ್ಲ. ಸುವರ್ಣ ಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ. ಇಂದು ಬೆಳಗಾವಿ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ರಾತ್ರಿ ಇಲ್ಲಿ ವಾಸ್ತವ್ಯ ಹೂಡುವೆ. ಇಡೀ ಕರ್ನಾಟಕ ಸುತ್ತಿ ನಾನು ಬಂದಿದ್ದೇನೆ. 13ನೇ ತಾರೀಖು ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಆಗುತ್ತೆ. ಕಳೆದ ಬಾರಿ ಬೆಳಗಾವಿ ಜಿಲ್ಲೆ 18 ಕ್ಷೇತ್ರಗಳಲ್ಲಿ 11 ಕ್ಷೇತ್ರ ಗೆಲ್ಲಿಸಿ ಕೊಟ್ಟಿದ್ರಿ. 18 ಕ್ಕೆ 18 ಕ್ಷೇತ್ರಗಳಲ್ಲಿ ಗೆಲ್ಲಿಸಿದ್ದರೆ ಬಿಜೆಪಿ ಬಹುಮತ ಸರ್ಕಾರ ಇರ್ತಿತ್ತು. ಆಗ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಸರ್ಕಾರ ಇರಲಿಲ್ಲ. ಈ ಬಾರಿ ಬೆಳಗಾವಿ ಜಿಲ್ಲೆಯ 18 ಕ್ಕೂ 18ಕ್ಷೇತ್ರ ಗೆಲ್ಲಿಸಿದ್ರೆ ಮೋದಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತೆ. ಈ ಬಾರಿ ಬೆಳಗಾವಿ ಜಿಲ್ಲೆಯ 18ಕ್ಕೂ 18 ಕ್ಷೇತ್ರಗಳನ್ನು ಬಿಜೆಪಿ ಜೋಳಿಗೆಯಲ್ಲಿ ಹಾಕಿ.

‘ಕೈ’​ ನಾಯಕಿ ಸೋನಿಯಾ ಗಾಂಧಿ ನದಿ ನೀರು ಕೊಡಲ್ಲ ಅಂದ್ರು

ಕಾಂಗ್ರೆಸ್ ಪಕ್ಷ ನಿರಂತರವಾಗಿ ರೈತರಿಗೆ ಅನ್ಯಾಯ ಮಾಡ್ತಿದೆ. ವಿಶೇಷವಾಗಿ ಉತ್ತರ ಕರ್ನಾಟಕ ರೈತರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ. ಹಿಂದೆ ಕರ್ನಾಟಕ ಮಹಾರಾಷ್ಟ್ರ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಕಾಂಗ್ರೆಸ್ ಸರ್ಕಾರ ಮಹದಾಯಿ ವಿವಾದ ಬಗೆಹರಿಸಿದ್ರಾ? 2007ರಲ್ಲಿ ಸೋನಿಯಾ ಗಾಂಧಿ ಮಹದಾಯಿ ನದಿ ನೀರು ಕರ್ನಾಟಕಕ್ಕೆ ಕೊಡಲ್ಲ ಅಂದ್ರು. ಅರೇ ಸೋನಿಯಾ ಗಾಂಧಿಯವರೇ ನೀವು ಹೋದ್ರಿ ನಿಮ್ಮ ಸರ್ಕಾರ ಹೋಯ್ತು. ಪ್ರಧಾನಿ ಮೋದಿ ಆಗಮಿಸಿ ಕರ್ನಾಟಕಕ್ಕೆ ಮಹದಾಯಿ ನೀರು ಹರಿಸುವ ನಿರ್ಧಾರ ಮಾಡಿದ್ರು ಎಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:53 pm, Sat, 6 May 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?